IPL-2026ರಲ್ಲಿ ಅರ್ಜುನ್ ಆಟ: ಮಗನಿಗಾಗಿ ಸಚಿನ್ ತೆಂಡೂಲ್ಕರ್ ಭಾವುಕ ಪೋಸ್ಟ್

Date:

ಕ್ರಿಕೆಟ್ ಜಗತ್ತಿನ ಮಹಾನ್ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್ 2026ರ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಪರವಾಗಿ ಪದಾರ್ಪಣೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ, ಸಚಿನ್ ತೆಂಡೂಲ್ಕರ್ ವರು ಭಾವುಕ ಸಂದೇಶವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರ ಪೋಸ್ಟ್‌ ಭಾರೀ ವೈರಲ್ ಆಗಿದೆ.

- Advertisement -

ಶನಿವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಸೋಲುಂಡಿತು. ಆದಾಗ್ಯೂ, ಅರ್ಜುನ್ ತೆಂಡೂಲ್ಕರ್ ತಮ್ಮ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದರು. ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್ ಪ್ರಭ್‌ಸಿಮ್ರಾನ್ ಸಿಂಗ್ ಅವರ ಪ್ರಮುಖ ವಿಕೆಟ್ಅನ್ನು ಅರ್ಜುನ್‌ ಪಡೆದುಕೊಳ್ಳುವುದರ ಜೊತೆಗೆ, 4 ಓವರ್‌ಗಳಲ್ಲಿ 36 ರನ್ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಈ ಐಪಿಎಲ್ ಸೀಸನ್‌ನಲ್ಲಿ ಅರ್ಜುನ್ ಮುನ್ನಡೆಯುತ್ತಿರುವ ರೀತಿಯನ್ನು ಕಂಡು ಹೆಮ್ಮೆ ವ್ಯಕ್ತಪಡಿಸಿರುವ ಸಚಿನ್, ಹೆಚ್ಚಿನ ಅವಕಾಶಗಳು ಸಿಗದಿದ್ದರೂ ಸದಾ ಸಕಾರಾತ್ಮಕವಾಗಿ ಮತ್ತು ತಾಳ್ಮೆಯಿಂದ ಕಠಿಣ ಪರಿಶ್ರಮ ಪಟ್ಟಿದ್ದಕ್ಕಾಗಿ ಮಗನನ್ನು ಶ್ಲಾಘಿಸಿದ್ದಾರೆ.

ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಗನ ಕುರಿತು ಹೃದಯಸ್ಪರ್ಶಿ ಸಾಲುಗಳನ್ನು ಬರೆದುಕೊಂಡಿರುವ ಸಚಿನ್ ತೆಂಡೂಲ್ಕರ್, “ಅದ್ಭುತ ಪ್ರದರ್ಶನ ಅರ್ಜುನ್, ಇಡೀ ಸೀಸನ್‌ನಲ್ಲಿ ನೀನು ನಿನ್ನ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ನಡೆದ ರೀತಿ ಕುರಿತು ನನಗೆ ಹೆಮ್ಮೆಯಿದೆ. ಸರಣಿಯ ಕೊನೆಯ ಪಂದ್ಯದವರೆಗೂ ನಿನಗೆ ಆಡುವ ಅವಕಾಶ ಸಿಗದಿದ್ದರೂ, ನೀನು ತಾಳ್ಮೆ ಕಳೆದುಕೊಳ್ಳದೆ, ಸದ್ದಿಲ್ಲದೆ ಕಷ್ಟಪಟ್ಟು ಕೆಲಸ ಮಾಡುತ್ತಾ ಸದಾ ಸಕಾರಾತ್ಮಕವಾಗಿದ್ದೆ. ಕ್ರಿಕೆಟ್ ಆಟವು ಒಬ್ಬ ಆಟಗಾರನ ಕೌಶಲ್ಯವನ್ನು ಎಷ್ಟು ಪರೀಕ್ಷಿಸುತ್ತದೆಯೋ, ಅಷ್ಟೇ ಅವನ ತಾಳ್ಮೆಯನ್ನೂ ಪರೀಕ್ಷಿಸುತ್ತದೆ. ಇಂದು ನೀನು ಅವೆರಡನ್ನೂ ಅತ್ಯಂತ ಅಚ್ಚುಕಟ್ಟಾಗಿ ನಿಭಾಯಿಸಿದ್ದೀಯಾ. ಸದಾ ವಿನಮ್ರತೆಯಿಂದ ಇರು. ಎಂದಿನಂತೆ ಈ ಆಟವನ್ನು ಪ್ರೀತಿಸುವುದನ್ನು ಮುಂದುವರಿಸು, ನಾನು ನಿನ್ನನ್ನು ಯಾವಾಗಲೂ ಪ್ರೀತಿಸುತ್ತೇನೆ” ಎಂದು ಹಾರೈಸಿದ್ದಾರೆ.

ಪ್ರಸಕ್ತ ಐಪಿಎಲ್ 2026ರ ಪ್ಲೇ-ಆಫ್ ರೇಸ್‌ನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈಗಾಗಲೇ ಹೊರಬಿದ್ದಿದೆ. ಈ ಸರಣಿಯ ತಮ್ಮ ಕಡೆಯ ಲೀಗ್ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್‌ಗೆ ಆಡುವ 11 ಬಳಗದಲ್ಲಿ ಮೊದಲ ಬಾರಿಗೆ ಅವಕಾಶ ನೀಡಲಾಗಿತ್ತು. ಪಂದ್ಯದಲ್ಲಿ 9ರ ಎಕಾನಮಿ ದರದದೊಂದಿಗೆ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಅರ್ಜುನ್, ಬ್ಯಾಟಿಂಗ್‌ನಲ್ಲಿ ಕೇವಲ ಐದು ಎಸೆತಗಳನ್ನು ಎದುರಿಸಿ 5 ರನ್ ಗಳಿಸಿದರು.

ಅರ್ಜುನ್ ಬೌಲಿಂಗ್ ಮಾಡಿದ ಮೊದಲ ಓವರ್‌ನಲ್ಲೇ ಪ್ರಭ್‌ಸಿಮ್ರಾನ್ ಸಿಂಗ್ ಅವರ ವಿಕೆಟ್ ಪಡೆಯಬೇಕಿತ್ತು. ಆದರೆ, ವಿಕೆಟ್ ಕೀಪರ್ ರಿಷಭ್ ಪಂತ್ ಅತ್ಯಂತ ಸುಲಭದ ಕ್ಯಾಚ್ ಒಂದನ್ನು ಕೈಬಿಟ್ಟಿದ್ದರಿಂದ ಅದು ಸಾಧ್ಯವಾಗಲಿಲ್ಲ. ಆದರೂ ಧೃತಿಗೆಡದ ಅರ್ಜುನ್, ತಾವು ಎಸೆದ ಮೂರನೇ ಓವರ್‌ನಲ್ಲಿ ಅದ್ಭುತವಾದ ಯಾರ್ಕರ್ ಎಸೆಯುವ ಮೂಲಕ ಪ್ರಭ್‌ಸಿಮ್ರಾನ್ ಅವರನ್ನು ಎಲ್‌ಬಿಡಬ್ಲ್ಯೂ ಬಲೆಯಲ್ಲಿ ಸಿಲುಕಿಸಿ, ವಿಕೆಟ್‌ ಕಿತ್ತು ಸಂಭ್ರಮಿಸಿದರು.

ಅರ್ಜುನ್ ತೆಂಡೂಲ್ಕರ್ ಅವರ ಕ್ರಿಕೆಟ್ ವೃತ್ತಿಜೀವನದಲ್ಲಿ ಐಪಿಎಲ್ 2026 ಅತ್ಯಂತ ಪ್ರಮುಖ ತಿರುವು ನೀಡಿದ ಸೀಸನ್ ಆಗಿದೆ. ಏಕೆಂದರೆ, ಅವರು ಮುಂಬೈ ಇಂಡಿಯನ್ಸ್ (MI) ತಂಡವನ್ನು ಹೊರತುಪಡಿಸಿ ಬೇರೆ ಫ್ರಾಂಚೈಸಿಯ ಪರವಾಗಿ ಆಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಐಪಿಎಲ್ 2026ರ ಹರಾಜು ಪ್ರಕ್ರಿಯೆಗೂ ಮುನ್ನ ಅವರನ್ನು ಮುಂಬೈ ಇಂಡಿಯನ್ಸ್ ತಂಡದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಖರೀದಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...