ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್

Date:

ತಮ್ಮ ಕಂಪನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬಂಧಿಸಲು ‘ಅರೆಸ್ಟ್‌ ವಾರೆಂಟ್‌’ ಜಾರಿಗೊಳಿಸಲಾಗಿದೆ.

- Advertisement -

ರಾಬಿನ್ ಉತ್ತಪ್ಪ ಅವರು ಬೆಂಗಳೂರಿನಲ್ಲಿ ‘ಸೆಂಟಾರಸ್ ಲೈಫ್ ಸ್ಟೈಲ್ ಬ್ರಾಂಡ್ಸ್ ಪ್ರೈವೇಟ್ ಲಿಮಿಟೆಡ್’ ಕಂಪನಿ ನಡೆಸುತ್ತಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಉತ್ತಪ್ಪ ಅವರು ಪಿಎಫ್‌ ಹಣ ಪಾವತಿಸಿಲ್ಲ. ಉದ್ಯೋಗಿಗಳ ಸಂಬಳದಲ್ಲಿ ಪಿಎಫ್‌ ಹಣ ಕಡಿತವಾಗಿದ್ದರೂ, ಅದನ್ನು ಪಿಎಫ್‌ ಖಾತೆಗೆ ಜಮೆ ಮಾಡಿಲ್ಲ. ಉದ್ಯೋಗಗಳಿಗೆ ಸುಮಾರು 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
image 33 1

ಉದ್ಯೋಗಿಗಳ ಖಾತೆಗೆ ಪಿಎಫ್‌ ಹಣವನ್ನು ಜಮೆ ಮಾಡದೇ ಇರುವುದನ್ನು ಪಿಎಫ್ಓ ರಿಜಿನಲ್ ಕಮಿಷನರ್ ಷಡಕ್ಷರ ಗೋಪಾಲ ರೆಡ್ಡಿ ಗಂಭೀರವಾಗಿ ಪರಿಗಣಿಸಿದ್ದಾರೆ. ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿ ನಗರ ಪೊಲೀಸರಿಗೆ ಡಿಸೆಂಬರ್ 4ರಂದು ಪತ್ರ ಬರೆದಿದ್ದಾರೆ.

ಪೊಲೀಸರು ರಾಬಿನ್ ಉತ್ತಪ್ಪ ಅವರ ಮನೆಗೆ ನೋಟಿಸ್‌ ಅಂಟಿಸಿದ್ದಾರೆ. ಆದರೆ, ರಾಬಿನ್ ಉತ್ತಪ್ಪ ಅವರು ಬೆಂಗಳೂರು ತೊರೆದು, ದುಬೈನಲ್ಲಿ ನೆಲೆಸಿದ್ದಾರೆ. ವಾರೆಂಟ್‌ ಜಾರಿಯಾಗಿರುವ ಹಿನ್ನೆಲೆ, ಅವರನ್ನು ಬೆಂಗಳೂರಿಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...