ಕ್ರೀಸ್‌ನಲ್ಲಿದ್ದಷ್ಟು ಹೊತ್ತು ಎದುರಾಳಿಗಳಿಂದ ಪಂದ್ಯವನ್ನು ಕಸಿದುಕೊಳ್ಳಬಲ್ಲೆ: ವೈಭವ್ ಸೂರ್ಯವಂಶಿ

Date:

ಚೆಂಡು ಕಂಡ ತಕ್ಷಣ ಬೌಂಡರಿ ದಾಟಿಸುವುದೇ ತನ್ನ ಮುಖ್ಯ ತಂತ್ರ ಎಂದು ಭಾವಿಸಿರುವ ಯುವ ಬ್ಯಾಟಿಂಗ್ ವಿಸ್ಮಯ ವೈಭವ್ ಸೂರ್ಯವಂಶಿ, ಐಪಿಎಲ್ 2026 ರಲ್ಲಿ ಅಬ್ಬರಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಅಂಡರ್ 19 ವಿಶ್ವಕಪ್ ಫೈನಲ್‌ನಲ್ಲಿ 175 ರನ್‌ಗಳ ಸ್ಫೋಟಕ ಇನಿಂಗ್ಸ್ ಆಡಿ ಭಾರತವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಈ ಯುವ ಆಟಗಾರ, ಈಗ ಐಪಿಎಲ್‌ನಲ್ಲೂ ಅದೇ ಲಯವನ್ನು ಮುಂದುವರಿಸಿದ್ದಾರೆ.

- Advertisement -

​ಬಿಹಾರದ ಸಮಷ್ಟಿಪುರದ 15 ವರ್ಷದ ಈ ಯುವ ಪ್ರತಿಭೆ ಈಗ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಿನ ಬಹುಮುಖ್ಯ ಆಟಗಾರರಾಗಿದ್ದಾರೆ. ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಬೌಲರ್‌ಗಳಿಗೆ ನಡುಕ ಹುಟ್ಟಿಸಿರುವ ವೈಭವ್, ಐಪಿಎಲ್ 2026 ರಲ್ಲಿ ಇದುವರೆಗೆ 6 ಪಂದ್ಯಗಳಿಂದ 41.00 ಸರಾಸರಿಯಲ್ಲಿ 246 ರನ್‌ಗಳನ್ನು ಕಲೆಹಾಕಿದ್ದಾರೆ. ಇವರ ಸ್ಟ್ರೈಕ್ ರೇಟ್ 236.54 ಆಗಿದ್ದು, ಇದುವರೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂಬುದಕ್ಕೆ ಸಾಕ್ಷಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

​ದೂರದರ್ಶನದ ಜೊತೆ ಮಾತನಾಡಿದ ವೈಭವ್, “ನಾನು ಮೈದಾನದಲ್ಲಿ ಎಷ್ಟು ಹೊತ್ತು ಇರುತ್ತೇನೆಯೋ, ಅಷ್ಟು ಹೊತ್ತು ಪ್ರಬಲವಾಗಿ ಆಡಿ ಎದುರಾಳಿಗಳ ಕೈಯಿಂದ ಪಂದ್ಯವನ್ನು ಕಸಿದುಕೊಳ್ಳಬಲ್ಲೆ,” ಎಂದು ತನ್ನ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. “ನಾನು ನನ್ನ ತಂದೆಯ ಜೊತೆ ಮಾತನಾಡಿದೆ. ಅವರ ಅರ್ಧ ಕನಸು ಈಗಾಗಲೇ ನನಸಾಗಿದೆ, ಇನ್ನು ಅರ್ಧ ಬಾಕಿ ಇದೆ ಎಂದು ಅವರು ಹೇಳಿದರು. ಸೀನಿಯರ್ ತಂಡಕ್ಕಾಗಿ ವಿಶ್ವಕಪ್ ಆಡುವುದು ಹಾಗೂ ಭಾರತಕ್ಕಾಗಿ ಗೆಲುವು ತಂದುಕೊಡುವುದೇ ನನ್ನ ಮುಖ್ಯ ಗುರಿ,” ಎಂದು ವೈಭವ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಇದು IPL ಇತಿಹಾಸದ ಅತ್ಯುತ್ತಮ ಕ್ಯಾಚ್; ಶ್ರೇಯಸ್ ಕ್ಯಾಚ್ ಕಂಡು ಕಕ್ಕಾಬಿಕ್ಕಿಯಾದ ರೋಹಿತ್, ಸೂರ್ಯ

​ವೈಭವ್ ಐಪಿಎಲ್ ಅಂಕಿಅಂಶಗಳನ್ನು ಗಮನಿಸಿದರೆ, ತನ್ನ ವೃತ್ತಿಜೀವನದಲ್ಲಿ ಇದುವರೆಗೆ 13 ಐಪಿಎಲ್ ಪಂದ್ಯಗಳನ್ನು ಆಡಿರುವ ವೈಭವ್, 38.30 ಸರಾಸರಿ ಹಾಗೂ 220.35 ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 498 ರನ್‌ಗಳನ್ನು ಗಳಿಸಿದ್ದಾರೆ. ಈ ಸಾಧನೆಯಲ್ಲಿ ಒಂದು ಶತಕ ಹಾಗೂ ಮೂರು ಅರ್ಧಶತಕಗಳು ಸೇರಿವೆ. ಒಟ್ಟು 226 ಚೆಂಡುಗಳನ್ನು ಎದುರಿಸಿರುವ ಅವರು 42 ಬೌಂಡರಿಗಳು ಹಾಗೂ 44 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

​ಈ ಯುವ ಆಟಗಾರನ ಪ್ರತಿಭೆಯ ಬಗ್ಗೆಯೂ ಮಾತನಾಡಿದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, ಅವರನ್ನು ಒಬ್ಬ “ವಿಶೇಷ ಆಟಗಾರ” ಎಂದು ಬಣ್ಣಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪಠಾಣ್, “ವೈಭವ್ ಸೂರ್ಯವಂಶಿಗಾಗಿ ಎದುರಾಳಿ ತಂಡದಲ್ಲಿ ದೊಡ್ಡ ಹೆಸರಿನ ಬೌಲರ್‌ಗಳು ಬೇಕು ಎಂಬ ವಾದ ಮತ್ತೆ ನಿಜವಾಗುತ್ತಿದೆ. ಈ ಹುಡುಗ ಒಬ್ಬ ವಿಶೇಷ ಪ್ರತಿಭೆ ಹಾಗೂ ಮುಂದಿನ ಹಲವು ವರ್ಷಗಳ ಕಾಲ ಉನ್ನತ ಮಟ್ಟದಲ್ಲಿ ಆಡುವ ಸಾಮರ್ಥ್ಯ ಹೊಂದಿದ್ದಾನೆ” ಎಂದು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪರಿಸರ ನಿಯಮ ಉಲ್ಲಂಘನೆ: 8 ಕಾರ್ಖಾನೆಗಳ ಬಂದ್‌ಗೆ ನಿರ್ಧಾರ

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಕೊಪ್ಪಳ...

ಔರಾದ್‌ | ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ಔರಾದ್ ಪಟ್ಟಣ ಸೇರಿದಂತೆ ತಾಲೂಕು ವ್ಯಾಪ್ತಿಯ ಅಂಗಡಿ...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ–122ರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದೂರು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವ...