ಆ್ಯಶಸ್ ಟೆಸ್ಟ್ ಸರಣಿ |‌ ಇಂಗ್ಲೆಂಡ್‌ ತಂಡಕ್ಕೆ ರೆಹಾನ್‌ ಅಹ್ಮದ್‌ ಆಯ್ಕೆ

Date:

ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಯ ಎರಡನೇ ಪಂದ್ಯ ಬುಧವಾರದಿಂದ (ಜೂನ್‌ 28) ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಆರಂಭವಾಗಲಿದೆ.

ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾ ಈಗಾಗಲೇ 1-0 ಮುನ್ನಡೆ ಸಾಧಿಸಿದೆ. ಎಡ್ಜ್‌ಬಾಸ್ಟನ್‌ ಮೈದಾನದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಆಸಿಸ್‌ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತ್ತು.

ಎರಡನೇ ಟೆಸ್ಟ್‌ ಪಂದ್ಯಕ್ಕೆ ಸಜ್ಜಾಗುತ್ತಿರುವ ಇಂಗ್ಲೆಂಡ್‌, ಯುವ ಲೆಗ್‌ ಸ್ಪಿನ್ನರ್‌  ರೆಹಾನ್ ಅಹ್ಮದ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಟೆಸ್ಟ್‌ ವೇಳೆ ಅನುಭವಿ ಸ್ಪಿನ್ ಆಲ್‌ರೌಂಡರ್ ಮೊಯಿನ್ ಅಲಿ ಬೆರಳಿಗೆ ಗಾಯವಾಗಿತ್ತು. ಅಲಿ ಸ್ಥಾನಕ್ಕೆ ಅಹ್ಮದ್ ಅವರನ್ನುಆಯ್ಕೆ ಮಾಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

18 ವರ್ಷ ವಯಸ್ಸಿನ ರೆಹಾನ್ ಅಹ್ಮದ್, ಇಂಗ್ಲೆಂಡ್‌ ತಂಡದ ಪರ ಟೆಸ್ಟ್‌ ಕ್ರಿಕೆಟ್‌ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ಹೊಂದಿದ್ದಾರೆ. ಕಳೆದ ವರ್ಷ ಕರಾಚಿಯಲ್ಲಿ ಪಾಕಿಸ್ತಾನದ ವಿರುದ್ಧ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಅಹ್ಮದ್‌, ತಮ್ಮ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಗೊಂಚಲು ಪಡೆಯುವ ಮೂಲಕ ದಾಖಲೆ ಬರೆದಿದ್ದರು. ಆ ಪಂದ್ಯದ ಎರಡು ಇನ್ನಿಂಗ್ಸ್‌ಗಳಲ್ಲಿ ಒಟ್ಟು ಏಳು ವಿಕೆಟ್‌ಗಳನ್ನು ಪಡೆದಿದ್ದ ರೆಹಾನ್ ಅಹ್ಮದ್, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?: ʻಬ್ರಂಬ್ರೆಲ್ಲಾʼಗೆ ಬಲಿಯಾದ ಉಸ್ಮಾನ್‌ ಖ್ವಾಜಾ! ಏನಿದು ವಿನೂತನ ಫೀಲ್ಡಿಂಗ್ ತಂತ್ರಗಾರಿಕೆ?

ಲೀಸೆಸ್ಟರ್‌ಶೈರ್ ತಂಡದ ಪರ ಇದುವರೆಗೆ 11 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಅಹ್ಮದ್‌, 37ರ ಸರಾಸರಿಯಲ್ಲಿ 22 ವಿಕೆಟ್‌ಗಳನ್ನು ಪಡೆದಿದ್ದಾರೆ. ಬ್ಯಾಟಿಂಗ್‌ನಲ್ಲಿ ಒಂದು ಶತಕ ಮತ್ತು ನಾಲ್ಕು ಅರ್ಧಶತಕಗಳನ್ನು ಒಳಗೊಂಡಂತೆ 33.10 ರ ಸರಾಸರಿಯಲ್ಲಿ 629 ರನ್ ಗಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್‌ ಗೆಲುವು | 2.5 ಕೋಟಿ ರೂ. ಹೆಚ್ಚುವರಿ ಹಣ ಬೇಡ ಎಂದ ರಾಹುಲ್ ದ್ರಾವಿಡ್!

ಕಳೆದ ತಿಂಗಳು ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ...

ಇಂಡಿಯನ್ ಕ್ರಿಕೆಟ್ ಟೀಮ್‌ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಟೀಂ ಇಂಡಿಯಾ ಪುರುಷರ ತಂಡದ ಮುಖ್ಯ ಕೋಚ್‌ ಆಗಿ ಭಾರತದ ಮಾಜಿ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಸೂರ್ಯಕುಮಾರ್ ಯಾದವ್

ಭಾರತೀಯ ಕ್ರಿಕೆಟ್ ತಂಡದ ಟಿ20 ಆಟಗಾರ ಸೂರ್ಯಕುಮಾರ್ ಯಾದವ್ ಸೋಮವಾರ ಮಂಗಳೂರಿಗೆ...

ಟೀಂ ಇಂಡಿಯಾಗೆ ಬಿಸಿಸಿಐನಿಂದ 125 ಕೋಟಿ ರೂ. ಬಹುಮಾನ: ವಿರಾಟ್, ರೋಹಿತ್, ದ್ರಾವಿಡ್‌ಗೆ ಎಷ್ಟು?

ವೆಸ್ಟ್‌ ಇಂಡೀಸ್‌ನಲ್ಲಿ 2024ನೇ ಸಾಲಿನ ಟಿ20 ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದ...