ಐಪಿಎಲ್ 2025 | ಕೆಕೆಆರ್‌ ಮಣಿಸಿ ಮೊದಲ ಗೆಲುವು ಕಂಡ ಮುಂಬೈ

Date:

ಐಪಿಎಲ್ 2025 ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಎರಡು ಸೋಲುಗಳ ನಂತರ ಮೊದಲ ಗೆಲುವಿನ ಖಾತೆ ತೆರೆದಿದೆ.

- Advertisement -

ವಾಖೆಂಡೆ ಕ್ರೀಡಂಗಣದಲ್ಲಿ ನಡೆದ 18ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಅಜಿಂಕ್ಯಾ ರಹಾನೆ ಸಾರಥ್ಯದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿರುವ ಮುಂಬೈ ಇಂಡಿಯನ್ಸ್ ಹ್ಯಾಟ್ರಿಕ್ ಸೋಲಿನಿಂದ ತಪ್ಪಿಸಿಕೊಂಡಿದೆ. ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ತವರಿನಲ್ಲಿ ಕೆಕೆಆರ್‌ ಮೇಲೆ ಪ್ರಾಬಲ್ಯ ಸಾಧಿಸಿದ ಮುಂಬೈ ಇಂಡಿಯನ್ಸ್ ಬೌಲರ್‌ಗಳು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 116 ರನ್‌ಗಳಿಗೆ ಆಲೌಟ್‌ ಮಾಡಿದರು. ಕೆಕೆಆರ್‌ನಿಂದ 117 ರನ್‌ಗಳ ಸುಲಭ ಗುರಿ ಪಡೆದ ಮುಂಬೈ ಇಂಡಿಯನ್ಸ್ 12.5 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 121 ರನ್ ಗಳಿಸಿ ಆರಾಮದಾಯಕ ಗೆಲುವು ಪಡೆಯಿತು.

ಕೆಕೆಆರ್ ನೀಡಿದ 117 ರನ್‌ಗಳ ಸುಲಭ ಗೆಲುವಿನ ಗುರಿ ಬೆನ್ನಟ್ಟಿದ ಮುಂಬೈ ಬ್ಯಾಟರ್‌ಗಳು ತವರಿನಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಿದರು. ರೋಹಿತ್ ಶರ್ಮಾ ಮತ್ತು ರಯಾನ್ ರಿಕಲ್ಟನ್ ಇನಿಂಗ್ಸ್ ಪ್ರಾರಂಭಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 5.2 ಓವರ್‌ಗಳಲ್ಲಿ 51 ರನ್‌ಗಳ ಜೊತೆಯಾಟವಾಡಿದರು.

ಈ ಸುದ್ದಿ ಓದಿದ್ದೀರಾ? ಐಪಿಎಲ್ | 9ನೇ ಕ್ರಮಾಂಕದಲ್ಲಿ ಆಡಿದ ಧೋನಿ; ಅಭಿಮಾನಿಗಳ ಆಕ್ರೋಶ-ಟೀಕೆ

ರೋಹಿತ್ 13 ರನ್ ಗಳಿಸಿದ್ದಾಗ ಆಂಡ್ರೆ ರಸೆಲ್ ಬೌಲಿಂಗ್‌ನಲ್ಲಿ ಹರ್ಷಿತ್ ರಾಣಾಗೆ ಕ್ಯಾಚ್ ನೀಡಿ ಔಟಾದರು. ಇದಾದ ನಂತರ ರಿಕಲ್ಟನ್ ತಮ್ಮ ಅರ್ಧಶತಕವನ್ನು ಪೂರೈಸಿದರು. ವಿಲ್ ಜ್ಯಾಕ್ 16 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ರಿಕಲ್ಟನ್ ಅವರು 33 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 50 ರನ್‌ಗಳನ್ನು ಪೂರ್ಣಗೊಳಿಸಿದರು.

ಮುಂಬೈ ಪರ ರಿಕಲ್ಟನ್ 44 ಚೆಂಡುಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್‌ಗಳೊಂದಿಗೆ ಅಜೇಯ 62 ರನ್ ಸ್ಫೋಟಿಸಿದರು. ಸೂರ್ಯಕುಮಾರ್ ಯಾದವ್ ಅಜೇಯ 27 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಕೆಕೆಆರ್ ಪರ ರಸೆಲ್ 2 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 2 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಳೆದುಕೊಂಡು ಕಳಪೆ ಆರಂಭವನ್ನು ಕಂಡಿತು. 45 ರನ್‌ಗಳನ್ನು ತಲುಪುವ ಹೊತ್ತಿಗೆ ಕೆಕೆಆರ್ 5 ವಿಕೆಟ್‌ಗಳನ್ನು ಕಳೆದುಕೊಂಡಿತು. ಕೆಕೆಆರ್ ಪರ ಅಂಗ್ಕ್ರಿಶ್ ರಘುವಂಶಿ (26) ತಂಡದ ಅತಿ ಹೆಚ್ಚು ರನ್‌ ಗಳಿಸಿದರು. ನಂತರದಲ್ಲಿ ರಮಣದೀಪ್ ಸಿಂಗ್ 22 ರನ್, ಮನೀಶ್ ಪಾಂಡೆ 19 ರನ್ ಮತ್ತು ರಿಂಕು ಸಿಂಗ್ 17 ರನ್ ಗಳಿಸಿದರು.

ಮುಂಬೈ ಪರ ಪಾದಾರ್ಪಣೆ ಮಾಡಿದ 23 ವರ್ಷದ ಅಶ್ವಿನಿ ಕುಮಾರ್ ಮೊದಲ ಎಸೆತದಲ್ಲೇ ವಿಕೆಟ್ ಪಡೆದರು. ಅವರು 3 ಓವರ್‌ಗಳಲ್ಲಿ 24 ರನ್‌ಗಳಿಗೆ 4 ವಿಕೆಟ್‌ಗಳನ್ನು ಉರುಳಿಸಿದರು. ದೀಪಕ್ ಚಹಾರ್ 2, ಹಾರ್ದಿಕ್ ಪಾಂಡ್ಯ, ಮಿಚೆಲ್ ಸ್ಯಾಂಟ್ನರ್, ಟ್ರೆಂಟ್ ಬೌಲ್ಟ್ ಮತ್ತು ವಿಘ್ನೇಶ್ ಪುತ್ತೂರ್ ತಲಾ 1 ವಿಕೆಟ್ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...