ಒಂದೇ ಇನ್ನಿಂಗ್ಸ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದ ಸ್ಪಿನ್ನರ್ ಆರ್. ಅಶ್ವಿನ್

Date:

ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ, ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲ ದಿನವೇ ಹಿಡಿತ ಸಾಧಿಸಿದರೆ, ಸ್ಪಿನ್ನರ್ ಆರ್. ಅಶ್ವಿನ್ ಒಂದೇ ಇನ್ನಿಂಗ್ಸ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದ್ದಾರೆ.

- Advertisement -

5 ವಿಕೆಟ್ ಗೊಂಚಲು : ಜೇಮ್ಸ್ ಆ್ಯಂಡರ್‌ಸನ್ ಹಿಂದಿಕ್ಕಿದ ಅಶ್ವಿನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಐಸಿಸಿ ಟೆಸ್ಟ್ ರ್‍ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿರುವ ಅಶ್ವಿನ್, ಈವರೆಗೆ ಒಟ್ಟು 33 ಬಾರಿ ಇನಿಂಗ್ಸ್‌ವೊಂದರಲ್ಲೇ ಐದು ವಿಕೆಟ್ ಗೊಂಚಲು ಪಡೆದ ಸಾಧನೆ ಮಾಡಿದ್ದಾರೆ. ಆ ಮೂಲಕ ಹೆಚ್ಚು ಸಲ ಒಂದೇ ಇನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

32 ಸಲ ಈ ಸಾಧನೆ ಮಾಡಿದ್ದ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್‌ಸನ್ ಇದೀಗ 7ನೇ ಸ್ಥಾನಕ್ಕೆ ಜಾರಿದ್ದಾರೆ. ಶ್ರೀಲಂಕಾದ ನಿವೃತ್ತ ಬೌಲರ್ ಮುತ್ತಯ್ಯ ಮುರಳೀಧರನ್ 67 ಬಾರಿ ಪಡೆಯುವ ಮೂಲಕ ಈ ಸಾಧನೆಯ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ನಿವೃತ್ತ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ 35 ಬಾರಿ ಈ ಸಾಧನೆ ಮಾಡಿ, ನಾಲ್ಕನೇ ಸ್ಥಾನದಲ್ಲಿದ್ದಾರೆ.

ತಂದೆ- ಮಗನನ್ನು ಔಟ್ ಮಾಡಿದ ವಿಶಿಷ್ಟ ದಾಖಲೆ

ಕ್ರಿಕೆಟ್‌ನಲ್ಲಿ ತಂದೆ ಮತ್ತು ಮಗನನ್ನು ಔಟ್ ಮಾಡಿದ ವಿಶಿಷ್ಟ ದಾಖಲೆಯ ಪಟ್ಟಿಗೂ ಆರ್. ಅಶ್ವಿನ್ ಸೇರ್ಪಡೆಗೊಂಡಿದ್ದಾರೆ.

12.4ನೇ ಓವರ್‍‌ನಲ್ಲಿ ಆಕರ್ಷಕ ಎಸೆತ ಎಸದೆ ಅಶ್ವಿನ್, ಎಡಗೈ ಬ್ಯಾಟರ್ ತಗ್‌ನರೇನ್ ಚಂದ್ರಪಾಲ್ ಅವರನ್ನು ಬೌಲ್ಡ್ ಮಾಡುವ ಮೂಲಕ ತಂದೆ- ಮಗನನ್ನು ಔಟ್ ಮಾಡಿದ ವಿಶ್ವದ ಐದನೇ ಬೌಲರ್ ಎನಿಸಿಕೊಂಡಿದ್ದಾರೆ. ತಗ್ನರೇನ್ ಚಂದ್ರಪಾಲ್ ವೆಸ್ಟ್‌ಇಂಡೀಸ್‌ನ ನಿವೃತ್ತ ಕ್ರಿಕೆಟಿಗ ಶಿವನರೇನ್ ಚಂದ್ರಪಾಲ್ ಅವರ ಮಗ.

700 ವಿಕೆಟ್ ಪಡೆದ ಭಾರತದ ಮೂರನೇ ಬೌಲರ್

ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ನ ಪ್ರಥಮ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಗಳಿಸಿದ ರವಿಚಂದ್ರನ್ ಅಶ್ವಿನ್, ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 700 ವಿಕೆಟ್ ಗಳಿಸಿದ ಭಾರತದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಈ ಟೆಸ್ಟ್ ನಲ್ಲಿ ಮೂರನೇ ವಿಕೆಟ್ ರೂಪದಲ್ಲಿ ಅಲ್ಜರಿ ಜೋಸೆಫ್ (4) ಅವರನ್ನು ಔಟ್ ಮಾಡುವ ಮೂಲಕ 700 ವಿಕೆಟ್ ಸಾಧನೆ ಮಾಡಿದರು.

ತಮಿಳುನಾಡು ಮೂಲದ ಅಶ್ವಿನ್, ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. ಒಟ್ಟು ಈವರೆಗೆ 702 ವಿಕೆಟ್‌ಗಳನ್ನು ಪಡೆದಿದ್ದು, ಈ ಪಟ್ಟಿಯಲ್ಲಿ ಹರ್ಭಜನ್ ಸಿಂಗ್ ಅವರನ್ನು ಹಿಂದಕ್ಕಿ ಎರಡನೇ ಸ್ಥಾನಕ್ಕೇರಬೇಕಾದರೆ. ಕೇವಲ 6 ವಿಕೆಟ್‌ಗಳು ಬೇಕಿದೆ.

ಭಾರತದ ಪರ ಹರ್ಭಜನ್ ಸಿಂಗ್ 707 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದರೆ, ಅನಿಲ್ ಕುಂಬ್ಳೆ 953 ವಿಕೆಟ್‌ಗಳನ್ನು ಕಬಳಿಸಿ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...