ಏಷ್ಯಾ ಕಪ್ ಟಿ20 | ಯುಎಇ ವಿರುದ್ಧ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್

Date:

2025ರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಇಂದು ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ. ಆತಿಥೇಯ ಯುಎಇ ವಿರುದ್ಧದ ಎರಡನೇ ಲೀಗ್ ಪಂದ್ಯದಲ್ಲಿ ಭಾರತ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

- Advertisement -

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಭಾರತ ಯಶಸ್ವಿ ಆರಂಭ ನೀಡುವ ಕನಸಿನಲ್ಲಿ ಕಣಕ್ಕಿಳಿಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಈ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕರಾಗಿ ಸ್ಫೋಟಕ ಆಟಗಾರ ಅಭಿಷೇಕ್ ಶರ್ಮಾ ಅವರುಆಡಲಿದ್ದಾರೆ. ಅವರ ಜೊತೆಗೆ ಶುಭಮನ್ ಗಿಲ್ರು ಜೋಡಿಯಾಗಿ ಬರಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಹಾಗೂ ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ ಆಡಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ವೇಗದ ಬೌಲರ್‌ಗಳಾಗಿ ಜಸ್ಪ್ರೀತ್ ಬುಮ್ರಾ ಮತ್ತು ಅರ್ಷ್‌ದೀಪ್ ಸಿಂಗ್ ಬಲ ನೀಡುತ್ತಿದ್ದಾರೆ. ಸ್ಪಿನ್ ವಿಭಾಗದಲ್ಲಿ ವರುಣ್ ಚಕ್ರವರ್ತಿ ಮತ್ತು ಕುಲದೀಪ್ ಯಾದವ್ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.

ಇದನ್ನು ಓದಿದ್ದೀರಾ? ಕ್ರಿಕೆಟ್‌ಗೆ ಅಮಿತ್‌ ಮಿಶ್ರಾ ವಿದಾಯ; ಐಪಿಎಲ್‌ನಲ್ಲಿ 3 ಬಾರಿ ಹ್ಯಾಟ್ರಿಕ್‌ ಪಡೆದ ಏಕೈಕ ಬೌಲರ್

ಇದು ಭಾರತ ಮತ್ತು ಯುಎಇ ನಡುವಿನ ಎರಡನೇ ಟಿ20 ಅಂತರರಾಷ್ಟ್ರೀಯ ಪಂದ್ಯವಾಗಿದ್ದು, ಮೊದಲ ಪಂದ್ಯ 2016 ರ ಏಷ್ಯಾ ಕಪ್‌ನಲ್ಲಿ ನಡೆಯಿತ್ತು. ಅಲ್ಲಿ ಭಾರತ ತಂಡ 9 ವಿಕೆಟ್‌ಗಳಿಂದ ಸುಲಭ ಜಯ ದಾಖಲಿಸಿತ್ತು.

ಈ ಬಾರಿ ಯುಎಇ ತಂಡವನ್ನು ಲಘುವಾಗಿ ನಿರ್ವಹಿಸಲಾಗದು. ನಾಯಕ ಮುಹಮ್ಮದ್ ವಾಸಿಂ ನೇತೃತ್ವದ ಯುಎಇ ಉತ್ತಮ ಸಾಮರ್ಥ್ಯ ಹೊಂದಿದೆ. ಆದರೆ ತಂಡದ ಅನುಭವ ಹಾಗೂ ಸಮತೋಲನದ ಆಧಾರದ ಮೇಲೆ ಟೀಂ ಇಂಡಿಯಾ ಪ್ರಬಲ ತಂಡವಾಗಿದೆ.

ಉಭಯ ತಂಡಗಳ ಆಡುವ ಬಳಗ

ಭಾರತ:
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.

ಯುಎಇ:
ಮುಹಮ್ಮದ್ ವಾಸಿಂ (ನಾಯಕ), ಅಲಿಶಾನ್ ಶರಾಫು, ಆರ್ಯನ್ಶ್ ಶರ್ಮಾ, ಆಸಿಫ್ ಖಾನ್, ಧ್ರುವ್ ಪರಾಶರ್, ಎಥಾನ್ ಡಿಸೋಜಾ, ಹೈದರ್ ಅಲಿ, ಹರ್ಷಿತ್ ಕೌಶಿಕ್, ಜುನೈದ್ ಸಿದ್ದಿಕಿ, ಮತಿಯುಲ್ಲಾ ಖಾನ್, ಮುಹಮ್ಮದ್ ಫಾರೂಕ್, ಮುಹಮ್ಮದ್ ಜವಾದುಲ್ಲಾ, ಮುಹಮ್ಮದ್ ಜೊಹೈಬ್, ರಾಹುಲ್ ಖಾನ್ ಚೋಪ್ರಾ, ರೋಹಿತ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...