ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆಗೈದಿದ್ದಾರೆ.
ಶನಿವಾರ ನಡೆದ ಮಹಿಳೆಯರ ವಿಭಾಗದ ಕಬಡ್ಡಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವು ತೈವಾನ್‌ನನ್ನು 26-24 ಅಂತರದಿಂದ ಸೋಲಿಸಿ ಚಿನ್ನ ಗೆದ್ದಿತು. ಅದರೊಂದಿಗೆ ಭಾರತದ ಒಟ್ಟು ಪದಕಗಳು 100ಕ್ಕೆ ತಲುಪಿವೆ.
ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟಾರೆ 100ನೇ ಪದಕವಾದರೆ, ಕಬಡ್ಡಿಯಲ್ಲಿ ಚಿನ್ನ ಗೆದ್ದಿರುವುದರಿಂದ ಇದು ಭಾರತದ ಪಾಲಿನ 25ನೇ ಚಿನ್ನದ ಪದಕವಾಗಿದೆ.
ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಪಾಕಿಸ್ತಾನಕ್ಕೆ ಸುಲಭ ತುತ್ತಾದ ನೆದರ್ಲ್ಯಾಂಡ್ಸ್
ಏಷ್ಯನ್ ಗೇಮ್ಸ್‌ನಲ್ಲಿ 25 ಚಿನ್ನದ ಪದಕಗಳ ಸಹಿತ ಭಾರತವು, 35 ಬೆಳ್ಳಿ ಹಾಗೂ 40 ಕಂಚಿನ ಪದಕವನ್ನು ಗೆದ್ದುಕೊಂಡು ಒಟ್ಟು 100 ಪದಕದ ಗುರಿಯನ್ನು ತಲುಪಿದೆ. ಪದಕ ಪಟ್ಟಿಯಲ್ಲಿ 4ನೇ ಸ್ಥಾನವನ್ನು ಕಾಯ್ದುಕೊಂಡಿದೆ.