Aus vs Ind | ರೋಹಿತ್, ಶ್ರೇಯಸ್ ಅರ್ಧಶತಕ; ಆಸೀಸ್‌ಗೆ 265 ರನ್ ಗುರಿ

Date:

ಮಾಜಿ ನಾಯಕ ರೋಹಿತ್‌ ಶರ್ಮಾ ಮತ್ತು ಉಪನಾಯಕ ಶ್ರೇಯಸ್‌ ಅಯ್ಯರ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ ಆಸ್ಟ್ರೇಲಿಯಾಗೆ 265 ರನ್‌ಗಳ ಗುರಿ ನೀಡಿದೆ.

- Advertisement -

ಅಡಿಲೇಡ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಆಸೀಸ್ ತಂಡದ ನಾಯಕ ಮಿಚೇಲ್‌ ಮಾರ್ಷ್‌, ಬೌಲಿಂಗ್‌ ಆಯ್ದುಕೊಂಡರು. ಅದರಂತೆ ಕ್ರೀಸ್‌ಗಿಳಿದ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭ ಸಿಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ನಾಯಕ ಶುಭಮನ್ ಗಿಲ್‌ (9) ಹಾಗೂ ವಿರಾಟ್‌ ಕೊಹ್ಲಿ (0) ಒಂದೇ ಓವರ್‌ನಲ್ಲಿ ಔಟಾಗುವುದೊಂದಿಗೆ ಆರಂಭಿಕ ಆಘಾತ ಎದುರಾಯಿತು.

ಈ ಹೊತ್ತಿನಲ್ಲಿ ಜೊತೆಯಾದ ರೋಹಿತ್‌ ಮತ್ತು ಶ್ರೇಯಸ್‌, ಇನಿಂಗ್ಸ್‌ಗೆ ಬಲತುಂಬಿದರು. ಆರಂಭದಲ್ಲಿ ಕಷ್ಟಪಡುತ್ತಿದ್ದ ರೋಹಿತ್‌ ನಿಧಾನವಾಗಿ ಆಟಕ್ಕೆ ಕುದುರಿಕೊಂಡರು. ಈ ಜೋಡಿ 3ನೇ ವಿಕೆಟ್ ಪಾಲುದಾರಿಕೆಯಲ್ಲಿ 118 ರನ್ ಕಲೆಹಾಕುವುದರೊಂದಿಗೆ ವಿಕೆಟ್‌ ಕುಸಿತಕ್ಕೆ ತಡೆಯೊಡ್ಡಿತು.

ಇದನ್ನು ಓದಿದ್ದೀರಾ? ಪಾಕ್ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರು ಸಾವು

97 ಎಸೆತಗಳನ್ನು ಆಡಿದ ರೋಹಿತ್, 7 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 73 ರನ್‌ ಗಳಿಸಿ ಔಟಾದರೆ, ಶ್ರೇಯಸ್‌ 61 ರನ್‌ ಗಳಿಸಿ ಪೆವಿಲಿಯನ್‌ಗೆ ತೆರಳಿದರು. ಮಧ್ಯಮ ಕ್ರಮಾಂಕದಲ್ಲಿ ಭರವಸೆ ಮೂಡಿಸಿದ ಅಕ್ಷರ್ ಪಟೇಲ್‌, 44 ರನ್‌ಗಳ ಕೊಡುಗೆ ನೀಡಿದರು. ಕೊನೆಯಲ್ಲಿ ಹರ್ಷಿತ್‌ ರಾಣ (24) ಅವರೂ ಉಪಯುಕ್ತ ಆಟವಾಡಿದರು. ಅಂತಿಮವಾಗಿ ನಿಗದಿತ 50 ಓವರ್‌ಗಳಲ್ಲಿ ಭಾರತ 9 ವಿಕೆಟ್‌ಗೆ 264 ರನ್‌ ಕಲೆಹಾಕಿತು.

ಆಸಿಸ್‌ ಪರ ಸ್ಪಿನ್ನರ್‌ ಆ್ಯಡಂ ಜಂಪಾ ನಾಲ್ಕು ವಿಕೆಟ್ ಪಡೆದರೆ, ಷೇವಿಯರ್‌ ಬರ್ಟ್ಲೆಟ್‌ ಮೂರು ವಿಕೆಟ್‌ ಉರುಳಿಸಿದರು. ಮಿಚೇಲ್‌ ಸ್ಟಾರ್ಕ್‌ ಎರಡು ವಿಕೆಟ್‌ ಕಿತ್ತರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...