ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್‌ | ರಬಾಡ ಮಾರಕ ದಾಳಿ; 212 ರನ್‌ಗಳಿಗೆ ಆಸೀಸ್‌ ಆಲೌಟ್

Date:

ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡುತ್ತಿರುವ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ಕಂಗಾಲಾಗಿ 212 ರನ್‌ ಗಳಿಗೆ ಆಲೌಟ್‌ ಆಗಿದೆ. ಮಿಂಚಿನ ಬೌಲಿಂಗ್‌ ಮಾಡಿದ ಕಗ್ಗಿಸೊ ರಬಾಡ 5 ವಿಕೆಟ್‌ ಕಬಳಿಸಿ ಯಶಸ್ವಿ ಬೌಲರ್‌ ಎನಿಸಿದರು.

- Advertisement -

ಇಂಗ್ಲೆಂಡ್​ನ ಲಾರ್ಡ್ಸ್‌ ಮೈದಾನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭವನ್ನು ಪಡೆಯಲಿಲ್ಲ. ಒಂದೇ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆಯುವ ಮೂಲಕ ರಬಾಡ ಕಾಂಗರೂಗಳ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇನಿಂಗ್ಸ್‌ನ ಏಳನೇ ಓವರ್‌ನ ಮೂರನೇ ಎಸೆತದಲ್ಲಿ ಬೆಡಿಂಗ್‌ಹ್ಯಾಮ್‌ಗೆ ಉಸ್ಮಾನ್ ಖವಾಜಾ ಕ್ಯಾಚ್ ನೀಡಿದರೆ, ಅದೇ ಓವರ್​ನ ಕೊನೆಯ ಎಸೆತದಲ್ಲಿ ಕ್ಯಾಮರೂನ್ ಗ್ರೀನ್, ಮಾರ್ಕ್ರಾಮ್‌ಗೆ ಕ್ಯಾಚ್ ನೀಡಿ ಔಟಾದರು. ಆರಂಭಿಕ ಆಟಗಾರ ಖವಾಜ ಖಾತೆ ತೆರೆಯಲು ಸಾಧ್ಯವಾಗದೆ ವಿಕೆಟ್ ಒಪ್ಪಿಸಿದರೆ. ಗ್ರೀನ್ ಇನಿಂಗ್ಸ್ ಕೇವಲ ನಾಲ್ಕು ರನ್​ಗಳಿಗೆ ಅಂತ್ಯವಾಯಿತು.

ಇದನ್ನು ಓದಿದ್ದೀರಾ? ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ದಾಖಲೆ ಅಳಿಸಿದ ಜೋಸ್‌ ಬಟ್ಲರ್

ಸತತ 2 ಚೆಂಡುಗಳಲ್ಲಿ ವಿಕೆಟ್ ಪತನದ ನಂತರ ಮತ್ತಷ್ಟು ತಾಳ್ಮೆಯ ಆಟಕ್ಕೆ ಮುಂದಾದ ಮಾರ್ನಸ್ ಲಬುಶೇನ್ ಮತ್ತು ಸ್ಟೀವ್ ಸ್ಮಿತ್ ಮೂರನೇ ವಿಕೆಟ್‌ಗೆ 30 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಇವರಿಬ್ಬರು ಬೃಹತ್ ಜೊತೆಯಾಟ ನೀಡುತ್ತಾರೆ ಎನ್ನುತ್ತಿರುವಾಗಲೇ ದಾಳಿಗಿಳಿದ ಯಾನ್ಸನ್, ಲಬುಶೇನ್ ಅವರ ವಿಕೆಟ್ ಉರುಳಿಸಿದರು. ಲಬುಶೇನ್ 17 ರನ್ ಗಳಿಸಿ ಔಟಾದರೆ, ತಂಡದ ಬ್ಯಾಟಿಂಗ್ ಜೀವಾಳವಾಗಿದ್ದ ಟ್ರಾವಿಸ್ ಹೆಡ್ 11 ರನ್ ಬಾರಿಸಿ ಯಾನ್ಸನ್​ಗೆ ವಿಕೆಟ್ ಒಪ್ಪಿಸಿದರು.

ತಾಳ್ಮೆಯಿಂದ ಬ್ಯಾಟಿಂಗ್‌ ಮಾಡಿ ಅರ್ಧ ಶತಕ ಗಳಿಸಿದ್ದ ಅನುಭವಿ ಸ್ಟೀವ್ ಸ್ಮಿತ್ 66 ರನ್‌ ಗಳಿಸಿದ್ದಾಗ ಮಾರ್ಕ್ರಮ್ ಬೌಲಿಂಗ್‌ನಲ್ಲಿ ಔಟಾದರು. ಅವರ ಆಟದಲ್ಲಿ 10 ಆಕರ್ಷಕ ಬೌಂಡರಿಗಳಿದ್ದವು. ಅಲೆಕ್ಸ್‌ ಕ್ಯಾರಿ 23 ರನ್‌ ಗಳಿಸಿ ಕೇಶವ್‌ ಮಹಾರಾಜ್‌ಗೆ ವಿಕೆಟ್‌ ಒಪ್ಪಿಸಿದರು

ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ 51/5 ಮತ್ತು ಜಾನ್ಸನ್ 49/3 ವಿಕೆಟ್ ಕಿತ್ತು ಯಶಸ್ವಿ ಬೌಲರ್‌ಗಳೆನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...