13 ಸೋಲು: ಹೀನಾಯ ದಾಖಲೆ ಬರೆದ ಪಾಕಿಸ್ತಾನ

Date:

ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಹ್ಯಾಟ್ರಿಕ್ ಸೋಲಿನೊಂದಿಗೆ 2024 ರಲ್ಲಿ ಅತ್ಯಧಿಕ ಟಿ20 ಪಂದ್ಯಗಳನ್ನು ಸೋತ ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನಕ್ಕೇರಿದೆ.

- Advertisement -

ಈ ವರ್ಷ ಪಾಕಿಸ್ತಾನ ತಂಡವು ಒಟ್ಟು 22 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 7 ಪಂದ್ಯಗಳು ಮಾತ್ರ. ಇನ್ನು 2 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿವೆ. ಇನ್ನುಳಿದ 13 ಪಂದ್ಯಗಳಲ್ಲಿ ಮುಗ್ಗರಿಸುವ ಮೂಲಕ ಪಾಕ್ ಪಡೆ ಈ ವರ್ಷ ಅತ್ಯಧಿಕ ಟಿ20 ಪಂದ್ಯಗಳನ್ನು ಸೋತ ಪೂರ್ಣ ಸದಸ್ಯ ತಂಡ ಎನಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಮತ್ತೊಂದೆಡೆ ಈ ವರ್ಷ ಆಡಿದ 26 ಪಂದ್ಯಗಳಲ್ಲಿ ಟೀಮ್ ಇಂಡಿಯಾ 24 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಭಾರತ ತಂಡ ಸೋತಿರುವುದು ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಮಾತ್ರ. ಅದರಲ್ಲೂ ಟಿ20 ವಿಶ್ವಕಪ್​ನಲ್ಲಿ ಸೋಲಿಲ್ಲದ ಸರದಾರನಾಗಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ.

ಈ ಸುದ್ದಿ ಓದಿದ್ದೀರಾ? 428 ರನ್‌ ಸಿಡಿಸಿ ಲಾರಾ ದಾಖಲೆಗೆ ಹತ್ತಿರವಾದ ಹರಿಯಾಣ ಬ್ಯಾಟರ್

ಆದರೆ ಅತ್ತ ನಾಯಕತ್ವದ ಬದಲಾವಣೆಯೊಂದಿಗೆ ಹಲವು ಸರಣಿಗಳನ್ನು ಆಡಿದ ಪಾಕಿಸ್ತಾನ ಅತ್ಯಂತ ಹೀನಾಯ ಪ್ರದರ್ಶನ ನೀಡುತ್ತಾ ಬಂದಿದೆ. ಇದೀಗ ಮೊಹಮ್ಮದ್ ರಿಝ್ವಾನ್ ಮುಂದಾಳತ್ವದಲ್ಲಿ ಕಣಕ್ಕಿಳಿದಿರುವ ಪಾಕ್ ಪಡೆ ಆಸ್ಟ್ರೇಲಿಯಾದಲ್ಲಿ ವೈಟ್ ವಾಶ್ ಮುಖಭಂಗ ಅನುಭವಿಸಿದೆ. ಇದರೊಂದಿಗೆ ಈ ವರ್ಷ ಅತ್ಯಧಿಕ ಟಿ20 ಪಂದ್ಯಗಳಲ್ಲಿ ಪರಾಜಯಗೊಂಡ ತಂಡ ಎನಿಸಿಕೊಂಡಿದೆ.

ಇನ್ನು 2024 ರಲ್ಲಿ ಅತೀ ಹೆಚ್ಚು ಟಿ20 ಪಂದ್ಯಗಳನ್ನು ಸೋತ ತಂಡಗಳ ಪೈಕಿ ಇಂಡೋನೇಷ್ಯಾ ತಂಡ ಮೊದಲ ಸ್ಥಾನದಲ್ಲಿದೆ. ಒಟ್ಟು 26 ಪಂದ್ಯಗಳನ್ನಾಡಿರುವ ಇಂಡೋನೇಷ್ಯಾ 15 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇದೀಗ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿರುವ ಪಾಕಿಸ್ತಾನ 2 ಪಂದ್ಯಗಳಲ್ಲಿ ಸೋತರೆ, ಅತ್ಯಂತ ಹೀನಾಯ ದಾಖಲೆ ಪಾಕ್ ಪಾಲಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...