IND vs AUS | ಆಸೀಸ್‌ 445ಕ್ಕೆ ಆಲ್ಔಟ್; ಭಾರತಕ್ಕೆ ಆರಂಭಿಕ ಆಘಾತ, ನಿರಾಶೆ ಮೂಡಿಸಿದ ಕೊಹ್ಲಿ

Date:

ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೂರನೇ ಟೆಸ್ಟ್‌ನ ಮೂರನೇ ದಿನದಂದು ಆಸೀಸ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ಗಳನ್ನು ಪೇರಿಸಿ ಆಲೌಟ್ ಆಗಿದೆ.

- Advertisement -

ಬ್ಯಾಂಟಿಂಗಿಗೆ ಇಳಿದ ಭಾರತ, ಆರಂಭಿಕ ಆಘಾತ ಕಂಡು, ಸದ್ಯ 4 ವಿಕೆಟ್ ಕಳೆದುಕೊಂಡು ಕೇವಲ 48 ರನ್‌ಗಳನ್ನು ಪೇರಿಸುವಲ್ಲಿ ಪರದಾಡಿದೆ. ಮಳೆಯ ಕಾರಣ ಆಟಕ್ಕೆ ತಡೆ ಉಂಟಾಗಿದೆ. ಮೊದಲ ದಿನವು ಮಳೆಯಿಂದಾಗಿ ಆಟ ಸ್ಥಗಿತಗೊಂಡಿತ್ತು. ಎರಡನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ತಂಡದ ಬೆವರಿಳಿಸಿತ್ತು. ಆದರೆ ಬೂಮ್ರಾ ಭಾರತ ಪರವಾಗಿ ಏಕಾಂಗಿ ಹೋರಾಟ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? IND vs AUS | ಬೂಮ್ರಾ ಅಬ್ಬರಕ್ಕೆ ಆಸ್ಟ್ರೇಲಿಯಾ ಬ್ಯಾಟರ್‌ಗಳು ತತ್ತರ

ಇನ್ನೊಂದೆಡೆ ಭಾರತದ ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಕ್ರಮವಾಗಿ 4, 1, 3 ರನ್‌ಗಳನ್ನು ಗಳಿಸಿ ತೀವ್ರ ನಿರಾಶೆ ಹುಟ್ಟು ಹಾಕಿದ್ದಾರೆ.

ಹಿಂದಿನ ದಿನ ಏಳು ವಿಕೆಟ್‌ಗೆ 405 ರನ್‌ಗಳನ್ನು ಗಳಿಸಿದ್ದ ಆಸೀಸ್ ಇಂದು ಬೆಳಗ್ಗೆ ಆಟ ಪುನರಾರಂಭಿಸಿ ಹೆಚ್ಚುವರಿ 40 ರನ್ ಗಳಿಸಿ ಒಟ್ಟು ರನ್‌ಗಳನ್ನು 445ಕ್ಕೆ ಏರಿಸಿತು. ಎರಡನೇ ದಿನದಲ್ಲಿ ಟ್ರಾವಿಸ್ ಹೆಡ್ ಮತ್ತು ಸ್ಟೀವ್ ಸ್ಮಿತ್ ಅವರ ಅವಳಿ ಶತಕ ಪಡೆದರೆ, ಅದರ ನಂತರ ಅಲೆಕ್ಸ್ ಕ್ಯಾರಿ 70 ರನ್ ಗಳಿಸಿ ಭಾರತದ ಬೌಲರ್‌ಗಳಿಗೆ ನೀರಿಳಿಸಿದರು.

ಆದರೆ ಭಾರತದ ಪರವಾಗಿ ಏಕಾಂಗಿಯಾಗಿ ಸೆಣಸಿದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಆರು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಆಸ್ಟ್ರೇಲಿಯಾದ ಎದುರಿನ ಪಂದ್ಯದಲ್ಲಿ ಒಟ್ಟು 50 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನುಳಿದಂತೆ ಮೊಹಮ್ಮದ್ ಸಿರಾಜ್ ಎರಡು, ಆಕಾಶ್ ದೀಪ್ ಒಂದು ವಿಕೆಟ್ ಪಡೆದಿದ್ದಾರೆ. ಐದು ಪಂದ್ಯಗಳ ಸರಣಿ 1-1ರಲ್ಲಿ ಸಮಬಲಗೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...