500 ಟೆಸ್ಟ್‌ ವಿಕೆಟ್‌ ಸಾಧನೆಗೈದವರ ಪಟ್ಟಿಗೆ ಸೇರಿದ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್

Date:

ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ 500 ಟೆಸ್ಟ್‌ ವಿಕೆಟ್‌ ಸಾಧನೆಗೈದವರ ಪಟ್ಟಿಗೆ ಇಂದು ಸೇರ್ಪಡೆಯಾಗುವ ಮೂಲಕ ಐತಿಹಾಸಿಕ ಸಾಧನೆಗೈದಿದ್ದಾರೆ.

- Advertisement -

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದ ನಾಲ್ಕನೇ ದಿನದಂದು ಫಹೀಮ್ ಅಶ್ರಫ್ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸಿ, ವಿಕೆಟ್ ಕಬಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೊದಲ ಟೆಸ್ಟ್‌ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿರುವ ಆಸ್ಟ್ರೇಲಿಯಾ, 360 ರನ್‌ಗಳ ಭರ್ಜರಿ ಜಯ ಗಳಿಸಿದೆ. ಈ ಪಂದ್ಯದಲ್ಲಿ ನಾಥನ್ ಲಿಯಾನ್ ಮೊದಲ ಹಾಗೂ ಎರಡನೇ ಇನ್ನಿಂಗ್ಸ್‌ ಸೇರಿ ಒಟ್ಟು 5 ವಿಕೆಟ್ ಪಡೆದಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ 500 ವಿಕೆಟ್‌ಗಳ ಗುರಿ ಮುಟ್ಟಿದ ಎಂಟನೇ ಬೌಲರ್ ಆಗಿ ಹಾಗೂ ಮೂರನೇ ಆಸೀಸ್ ಆಟಗಾರ ಎಂಬ ಹೆಗ್ಗಳಿಕೆ ನಾಥನ್ ಲಿಯಾನ್ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾ ಪರ ಈಗಾಗಲೇ ದಿಗ್ಗಜ ದಿವಂಗರ ಶೇನ್ ವಾರ್ನ್ 708 ವಿಕೆಟ್ ಪಡೆದಿದ್ದರೆ ಹಾಗೂ ನಿವೃತ್ತ ಕ್ರಿಕೆಟಿಗ ಗ್ಲೆನ್ ಮೆಕ್‌ಗ್ರಾಥ್ 563 ವಿಕೆಟ್‌ಗಳನ್ನು ಪಡೆದಿದ್ದಾರೆ.

500ಕ್ಕಿಂತಲೂ ಹೆಚ್ಚು ಟೆಸ್ಟ್‌ ವಿಕೆಟ್ ಪಡೆದ ಪಟ್ಟಿಯಲ್ಲಿ ಮುತ್ತಯ್ಯ ಮುರಳೀಧರನ್ 800 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಉಳಿದಂತೆ ಕ್ರಮವಾಗಿ ಆಸೀಸ್‌ನ ಶೇನ್ ವಾರ್ನ್( 708), ಇಂಗ್ಲೆಂಡ್‌ನ ಜೇಮ್ಸ್‌ ಆಂಡರ್‌ಸನ್ 690, ಭಾರತದ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ 619, ಇಂಗ್ಲೆಂಡ್‌ನ ಸ್ಟುವರ್ಟ್‌ ಬ್ರಾಡ್ 604, ಆಸೀಸ್‌ನ ಗ್ಲೆನ್ ಮೆಕ್‌ಗ್ರಾಥ್ 563, ವೆಸ್ಟ್‌ ಇಂಡೀಸ್ ಕರ್ಟ್ನಿ ವಾಲ್ಶ್ 519 ವಿಕೆಟ್ ಪಡೆದಿದ್ದು, ಅಗ್ರ 10ರೊಳಗಿನ ಸ್ಥಾನದಲ್ಲಿದ್ದಾರೆ.

ಈಗ 500 ವಿಕೆಟ್ ಪಡೆದ 36 ವರ್ಷದ ಆಫ್ ಸ್ಪಿನ್ನರ್ ನಾಥನ್ ಲಿಯಾನ್ ಎಂಟನೇ ಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾದ ಸ್ಪಿನ್ನರ್ ಆರ್. ಅಶ್ವಿನ್ 489 ವಿಕೆಟ್ ಪಡೆದು 9ನೇ ಸ್ಥಾನದಲ್ಲಿದ್ದಾರೆ. ಅಶ್ವಿನ್ ಈ ಸಾಧನೆಗೈಯ್ಯಲು ಇನ್ನೂ 11 ವಿಕೆಟ್‌ಗಳು ಬೇಕಾಗಿದೆ.

ಲಿಯಾನ್ 500 ವಿಕೆಟ್‌ ಕ್ಲಬ್‌ನಲ್ಲಿ ಮುತ್ತಯ್ಯ ಮುರಳೀಧರನ್, ಶೇನ್ ವಾರ್ನ್‌ ಮತ್ತು ಅನಿಲ್ ಕುಂಬ್ಳೆ ಬಳಿಕ ಪಟ್ಟಿಯಲ್ಲಿ ನಾಲ್ಕನೇ ಸ್ಪಿನ್ನರ್ ಆಗಿದ್ದಾರೆ.

ನಾಥನ್ ಲಿಯಾನ್ ತನ್ನ ಚೊಚ್ಚಲ ಟೆಸ್ಟ್ ಪಂದ್ಯವನ್ನು ಶ್ರೀಲಂಕಾ ವಿರುದ್ಧ 2011ರಲ್ಲಿ ಗಾಲೆಯಲ್ಲಿ ಆಡಿದ್ದರು. ತಾನು ಎಸೆದ ಮೊದಲ ಎಸೆತದಲ್ಲೇ ಕುಮಾರ್ ಸಂಗಕ್ಕಾರ ಅವರ ವಿಕೆಟ್ ಪಡೆಯುವ ಮೂಲಕ ಸಾಧನೆಗೈದಿದ್ದರು. ಲಿಯಾನ್ ಎಸೆದಿದ್ದ ಮೊದಲ ಎಸೆತವನ್ನು ಎದುರಿಸಿದ್ದ ಕುಮಾರ್ ಸಂಗಕ್ಕಾರ, ಸ್ಲಿಪ್‌ನಲ್ಲಿದ್ದ ಮೈಕೆಲ್ ಕ್ಲಾರ್ಕ್‌ ಹಿಡಿದ ಅದ್ಬುತ್ ಕ್ಯಾಚ್‌ಗೆ ಬಲಿಯಾಗಿದ್ದರು. ಮೊದಲ ಟೆಸ್ಟ್ ಪಂದ್ಯದಲ್ಲಿ 34ಕ್ಕೆ 5 ವಿಕೆಟ್ ಗಳಿಸುವ ಮೂಲಕ ಮಿಂಚಿದ್ದರು. ಆಸೀಸ್‌ ತಂಡಕ್ಕೆ ಆಯ್ಕೆಯಾಗುವುದಕ್ಕೂ ಮುನ್ನ, 2010ರಲ್ಲಿ ನಾಥನ್ ಲಿಯಾನ್ ಗ್ರೌಂಡ್ ಸ್ಟಾಫ್ ಆಗಿ, ಕಾಯಕದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...