ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭಾರಿ ಜಯ; ವಿದೇಶಿ ನೆಲದಲ್ಲೇ ಬಗ್ಗು ಬಡಿದ ಬುಮ್ರಾ ಪಡೆ

Date:

Advertisements

ಜಸ್‌ಪ್ರೀತ್‌ ಬುಮ್ರಾ ನೇತೃತ್ವದ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು 295 ರನ್ನುಗಳ ಭಾರೀ ಅಂತರದಲ್ಲಿ ಸೋಲಿಸಿದೆ. ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ನಾಲ್ಕನೇ ದಿನವಾದ ಇಂದು ಟೀಂ ಇಂಡಿಯಾ ನೀಡಿದ 534 ರನ್‌ಗಳ ಸವಾಲನ್ನು ಬೆನ್ನಟ್ಟಿದ ಆಸೀಸ್‌ ಪಡೆ ಭಾರತದ ಬೌಲರ್‌ಗಳ ಕರಾರುವಾಕ್‌ ದಾಳಿಗೆ ಸಿಲುಕಿ 58.4 ಓವರ್‌ಗಳಲ್ಲಿ ತನ್ನ ಎರಡನೇ ಇನಿಂಗ್ಸ್‌ನಲ್ಲಿ 238 ರನ್‌ಗಳಿಗೆ ಆಲೌಟ್‌ ಆಯಿತು.

ಟೀಂ ಇಂಡಿಯಾ ಪರ ನಾಯಕ ಜಸ್‌ಪ್ರೀತ್‌ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್‌ ತಲಾ 3 ವಿಕೆಟ್ ಕಬಳಿಸಿದರೆ, ವಾಷಿಂಗ್ಟನ್‌ ಸುಂದರ್‌ 2, ನಿತೀಶ್‌ ಕುಮಾರ್‌ ರೆಡ್ಡಿ, ಹರ್ಷಿತ್ ರಾಣಾ ತಲಾ ಒಂದೊಂದು ಒಂದು ವಿಕೆಟ್ ಕಿತ್ತು ಗೆಲುವಿನ ರೂವಾರಿಗಳಾದರು.

ಆಸ್ಟ್ರೇಲಿಯಾ ಪರ ಟ್ರಾವಿಸ್‌ ಹೆಡ್‌ 89, ಮಿಷಲ್‌ ಮಾರ್ಷ್‌ 47, ಅಲೆಕ್ಸ್‌ ಕ್ಯಾರಿ 36 ರನ್‌ ಗಳಿಸಿದ್ದು ಹೊರತು ಪಡಿಸಿದರೆ ಉಳಿದ ಆಟಗಾರರ್‍ಯಾರೂ 20ರ ಗಡಿ ದಾಟಲಿಲ್ಲ. ಈ ಮೂಲಕ ಭಾರತ ತಂಡ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾದ ಈ ಗೆಲುವು ವಿಶ್ವ ಚಾಂಪಿಯನ್‌ಷಿಪ್‌ ಫೈನಲ್‌ ತಲುಪಲು ಮತ್ತಷ್ಟು ಅವಕಾಶಗಳಿಗೆ ನಾಂದಿಯಾಗಿದೆ.

Advertisements

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಅಮೋಘ ಗೆಲುವು ದಾಖಲಿಸಿರುವುದು ಆಸ್ಟ್ರೇಲಿಯಾದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ 1977 ರಲ್ಲಿ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 222 ರನ್​ಗಳ ಗೆಲುವು ದಾಖಲಿಸಿದ್ದು ಇದುವರೆಗಿನ ಶ್ರೇಷ್ಠ ಜಯವಾಗಿತ್ತು. ಇದೀಗ ಬರೋಬ್ಬರಿ 47 ವರ್ಷಗಳ ಬಳಿಕ ಹೊಸ ಇತಿಹಾಸ ರಚಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.

ಟಾಸ್‌ ಗೆದ್ದ ಭಾರತ ಮೊದಲ ಇನಿಂಗ್ಸ್‌ನಲ್ಲಿ 150 ರನ್‌ಗಳಿಗೆ ಆಲೌಟ್‌ ಆಗಿದ್ದರೆ, ಆಸೀಸ್‌ ಮೊದಲ ಇನಿಂಗ್ಸ್‌ನಲ್ಲಿ 104 ರನ್‌ಗಳಿಗೆ ಪತನವಾಗಿತ್ತು. ನಂತರ 2ನೇ ಇನಿಂಗ್ಸ್‌ ಆಡಿದ ಭಾರತ ಯಶಸ್ವಿ ಜೈಸ್ವಾಲ್‌ ಹಾಗೂ ವಿರಾಟ್‌ ಕೊಹ್ಲಿ ಅವರ ಅಮೋಘ ಶತಕದ ನೆರವಿನಿಂದ 134.3 ಓವರ್‌ಗಳಲ್ಲಿ 6 ವಿಕೆಟ್‌ಗೆ 487 ರನ್‌ ಪೇರಿಸಿ ಆಸ್ಟ್ರೇಲಿಯಾಗೆ 534 ರನ್‌ಗಳ ಗುರಿಯನ್ನು ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಡೆಲ್ಲಿ ಕ್ಯಾಪಿಟಲ್ಸ್‌ ಮುನ್ನಡೆಸುವ ಆಟಗಾರರ ಹೆಸರು ಘೋಷಣೆ

ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಒಂದೂವರೆ ವರ್ಷಗಳ ಬಳಿಕ ಮೂಡಿಬಂದ ಟೆಸ್ಟ್ ಶತಕ ಎಂಬುದು ವಿಶೇಷ. ಅಂದರೆ 2023ರ ಜುಲೈ 21ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಟೆಸ್ಟ್ ಶತಕ ಬಾರಿಸಿದ್ದರು. ಇದಾದ ಬಳಿಕ ಅವರು ಮೂರಂಕಿ ಮೊತ್ತ ದಾಖಲಿಸಿರಲಿಲ್ಲ.

ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಆಸೀಸ್​ ಪಿಚ್​ನಲ್ಲೇ ಅಬ್ಬರಿಸುವ ಮೂಲಕ ಮೂರನೇ ಟೆಸ್ಟ್ ವೃತ್ತಿಯ 30ನೇ ಶತಕ ಪೂರೈಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಮೂವತ್ತು ಶತಕ ಸಿಡಿಸಿದ ವಿಶ್ವದ 16ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಶತಕದೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲೂ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದರು. ಹಾಗೆಯೇ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸರ್ ಡೊನಾಲ್ಡ್ ಬ್ರಾಡ್ಮನ್ ಅವರನ್ನು ಹಿಂದಿಕ್ಕಿದ್ದರು.

ಆರಂಭಿಕರಾಗಿ ಆಟವಾಡಿದ್ದ ಕೆ ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್​ಗೆ 201 ರನ್​ಗಳ ಜೊತೆಯಾಟವಾಡಿ ಹೊಸ ಇತಿಹಾಸ ನಿರ್ಮಿಸಿದ್ದರು. ಇದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಜೋಡಿಯ ದಾಖಲೆ ಸುನಿಲ್ ಗವಾಸ್ಕರ್ ಹಾಗೂ ಕೆ ಶ್ರೀಕಾಂತ್ ಹೆಸರಿನಲ್ಲಿತ್ತು. 1986 ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಈ ಜೋಡಿಯು ಮೊದಲ ವಿಕೆಟ್​ಗೆ 191 ರನ್ ಕಲೆಹಾಕಿ ಇತಿಹಾಸ ನಿರ್ಮಿಸಿದ್ದರು.

38 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಕೆ ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಟೀಮ್ ಇಂಡಿಯಾದ ಆರಂಭಿಕ ಜೋಡಿ ಎನಿಸಿಕೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X