ಕೊನೆಯ ಎಸೆತದವರೆಗೂ ತುದಿಗಾಲಲ್ಲಿ ನಿಲ್ಲಿಸಿದ ಪಂದ್ಯದಲ್ಲಿ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೊಮ್ಮೆ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತುಪಡಿಸಿದರು.
ಗುವಾಹಟಿಯ ಬರ್ಸಪರಾ ಕ್ರೀಡಾಂಗಣದಲ್ಲಿ ನಡೆದ 3ನೇ ಟಿ2೦ ಪಂದ್ಯದಲ್ಲಿ ಭಾರತ ನೀಡಿದ 223 ರನ್ನುಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 2-1 ಹಿನ್ನಡೆ ಕಾಯ್ದುಕೊಂಡಿತು.
ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 48 ಚೆಂಡುಗಳಲ್ಲಿ 8 ಸಿಕ್ಸ್ ಹಾಗೂ 8 ಬೌಂಡರಿಗಳ ಮೂಲಕ ಅಜೇಯ 104 ರನ್ ಬಾರಿಸಿದರು.
ಈ ಸುದ್ದಿ ಓದಿದ್ದೀರಾ? ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?
ಕೊನೆಯ ಓವರ್‌ನಲ್ಲಿ ಆಸೀಸ್ ಗೆಲುವಿಗೆ 21 ರನ್‌ಗಳ ಅಗತ್ಯವಿತ್ತು. ಆದರೆ ಈ ಮೊತ್ತವನ್ನು ಮ್ಯಾಕ್ಸ್‌ವೆಲ್ ಮತ್ತು ವೇಡ್ ಸುಲಭವಾಗಿ ಬೆನ್ನಟ್ಟಿದರು. ಅಂತಿಮ ಓವರ್‌ನಲ್ಲಿ ನಾಲ್ಕು ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದ ಕಾಂಗರೂಗಳು ಪಂದ್ಯವನ್ನು ವಶಪಡಿಸಿಕೊಂಡರು.
ಚೊಚ್ಚಲ ಟಿ20 ಶತಕ ಸಿಡಿಸಿದ ಗಾಯಕ್ವಾಡ್
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್ ಭಾರತವನ್ನು ಬ್ಯಾಟಿಂಗ್ ಆಹ್ವಾನಿಸಿದರು. ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರ ಅಮೋಘ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ 20 ಓವರ್‌ಗಳಲ್ಲಿ 222 ರನ್ ಪೇರಿಸಿತ್ತು.
ಅದ್ಭುತ ಆಟವಾಡಿದ ರುತುರಾಜ್ ಗಾಯಕ್ವಾಡ್ 57 ಎಸೆತಗಳಲ್ಲಿ 7 ಸಿಕ್ಸರ್ 13 ಬೌಂಡರಿಗಳೊಂದಿಗೆ ಅಜೇಯ 113 ಬಾರಿಸಿ ಟಿ20 ಮಾದರಿಯಲ್ಲಿ ತಮ್ಮ ಚೊಚ್ಚಲ ಶತಕ ದಾಖಲಿಸಿದರು. ರುತುರಾಜ್‌ಗೆ ಜೊತೆಯಾಟ ನೀಡಿದ ನಾಯಕ ಸೂರ್ಯ ಕುಮಾರ್ ಯಾದವ್ (39) ಹಾಗೂ ತಿಲಕ್ ವರ್ಮಾ (31) ರನ್ ಗಳಿಸಿದರು