ಟಿ20 | ರೋಚಕ ಪಂದ್ಯದಲ್ಲಿ ಶತಕದ ಮೂಲಕ ಪಂದ್ಯ ಗೆಲ್ಲಿಸಿದ ಮ್ಯಾಕ್ಸ್‌ವೆಲ್

Date:

ಕೊನೆಯ ಎಸೆತದವರೆಗೂ ತುದಿಗಾಲಲ್ಲಿ ನಿಲ್ಲಿಸಿದ ಪಂದ್ಯದಲ್ಲಿ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೊಮ್ಮೆ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತುಪಡಿಸಿದರು.

- Advertisement -

ಗುವಾಹಟಿಯ ಬರ್ಸಪರಾ ಕ್ರೀಡಾಂಗಣದಲ್ಲಿ ನಡೆದ 3ನೇ ಟಿ2೦ ಪಂದ್ಯದಲ್ಲಿ ಭಾರತ ನೀಡಿದ 223 ರನ್ನುಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 2-1 ಹಿನ್ನಡೆ ಕಾಯ್ದುಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 48 ಚೆಂಡುಗಳಲ್ಲಿ 8 ಸಿಕ್ಸ್ ಹಾಗೂ 8 ಬೌಂಡರಿಗಳ ಮೂಲಕ ಅಜೇಯ 104 ರನ್ ಬಾರಿಸಿದರು.

ಈ ಸುದ್ದಿ ಓದಿದ್ದೀರಾ? ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

ಕೊನೆಯ ಓವರ್‌ನಲ್ಲಿ ಆಸೀಸ್‌ ಗೆಲುವಿಗೆ 21 ರನ್‌ಗಳ ಅಗತ್ಯವಿತ್ತು. ಆದರೆ ಈ ಮೊತ್ತವನ್ನು ಮ್ಯಾಕ್ಸ್‌ವೆಲ್‌ ಮತ್ತು ವೇಡ್‌ ಸುಲಭವಾಗಿ ಬೆನ್ನಟ್ಟಿದರು. ಅಂತಿಮ ಓವರ್‌ನಲ್ಲಿ ನಾಲ್ಕು ಬೌಂಡರಿ ಹಾಗೂ 1 ಸಿಕ್ಸರ್‌ ಸಿಡಿಸಿದ ಕಾಂಗರೂಗಳು ಪಂದ್ಯವನ್ನು ವಶಪಡಿಸಿಕೊಂಡರು.

ಚೊಚ್ಚಲ ಟಿ20 ಶತಕ ಸಿಡಿಸಿದ ಗಾಯಕ್ವಾಡ್

ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್ ಭಾರತವನ್ನು ಬ್ಯಾಟಿಂಗ್‌ ಆಹ್ವಾನಿಸಿದರು. ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರ ಅಮೋಘ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ 20 ಓವರ್‌ಗಳಲ್ಲಿ   222 ರನ್ ಪೇರಿಸಿತ್ತು.

ಅದ್ಭುತ ಆಟವಾಡಿದ ರುತುರಾಜ್ ಗಾಯಕ್ವಾಡ್ 57 ಎಸೆತಗಳಲ್ಲಿ 7 ಸಿಕ್ಸರ್‌ 13 ಬೌಂಡರಿಗಳೊಂದಿಗೆ ಅಜೇಯ 113 ಬಾರಿಸಿ ಟಿ20 ಮಾದರಿಯಲ್ಲಿ ತಮ್ಮ ಚೊಚ್ಚಲ ಶತಕ ದಾಖಲಿಸಿದರು. ರುತುರಾಜ್‌ಗೆ ಜೊತೆಯಾಟ ನೀಡಿದ ನಾಯಕ ಸೂರ್ಯ ಕುಮಾರ್‌ ಯಾದವ್‌ (39) ಹಾಗೂ ತಿಲಕ್‌ ವರ್ಮಾ (31) ರನ್‌ ಗಳಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...