WTC 2025 final | 138 ರನ್​ಗಳಿಗೆ ದಕ್ಷಿಣ ಆಫ್ರಿಕಾ ಆಲೌಟ್; ಬುಮ್ರಾ ದಾಖಲೆ ಮುರಿದ ಕಮ್ಮಿನ್ಸ್

Date:

ಇಂಗ್ಲೆಂಡ್‌ನ ಲಾರ್ಡ್ಸ್‌ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್ ಪಂದ್ಯದ ಎರಡನೇ ದಿನವಾದ ಇಂದು ಆಸ್ಟ್ರೇಲಿಯಾ ತಂಡವನ್ನು 212 ರನ್​ಗಳಿಗೆ ಆಲೌಟ್ ಮಾಡಿ ಮೊದಲ ಇನಿಂಗ್ಸ್ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ತಂಡ ಹೀನಾಯ ಪ್ರದರ್ಶನ ನೀಡಿ 57.1 ಓವರ್‌ಗಳಲ್ಲಿ 138 ರನ್‌ಗಳಿಗೆ ಆಲೌಟ್‌ ಆಗಿದೆ.

- Advertisement -

ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಅವರ ಮಾರಕ ದಾಳಿಗೆ ಹರಿಣಿಗಳ ಪಡೆ ಸರದಿ ಸಾಲಿನಲ್ಲಿ ಪೆವಿಲಿಯನ್‌ಗೆ ತೆರಳಿದರು. ಆಸ್ಟ್ರೇಲಿಯಾ ಪರ ನಾಯಕ ಕಮ್ಮಿನ್ಸ್ ಆರು ವಿಕೆಟ್‌ಗಳನ್ನು ಕಬಳಿಸಿದರೆ, ಮಿಚೆಲ್ ಸ್ಟಾರ್ಕ್ ಎರಡು ಮತ್ತು ಜೋಶ್ ಹೇಜಲ್‌ವುಡ್ ಒಂದು ವಿಕೆಟ್ ಪಡೆದರು. ಇತ್ತ ಆಫ್ರಿಕಾ ಪರ ನಾಲ್ವರು ಬ್ಯಾಟ್ಸ್‌ಮನ್‌ಗಳು ಮಾತ್ರ ಎರಡಂಕಿ ತಲುಪಲು ಸಾಧ್ಯವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಕ್ಷಿಣ ಆಫ್ರಿಕಾ ಪರ ಡೇವಿಡ್ ಬೆಡಿಂಗ್‌ಹ್ಯಾಮ್ ಅತ್ಯಧಿಕ 45 ರನ್ ಗಳಿಸಿದರೆ, ನಾಯಕ ಟೆಂಬಾ ಬವುಮಾ 36 ರನ್ ಗಳಿಸಿ ಔಟಾದರು. ರಯಾನ್ ರಿಕಲ್ಟನ್ 16 ಮತ್ತು ಕೈಲ್ ವೆರ್ರೆಯ್ನ್ 13 ರನ್‌ಗಳ ಕೊಡುಗೆ ನೀಡಿದರು.

ಮೊದಲ ದಿನದಾಟದಂತ್ಯಕ್ಕೆ 43 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಆಫ್ರಿಕಾದ ಇನಿಂಗ್ಸ್ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದ ನಾಯಕ ಬವುಮಾ ಮತ್ತು ಬೆಡಿಂಗ್ಹ್ಯಾಮ್ ಐದನೇ ವಿಕೆಟ್‌ಗೆ 64 ರನ್‌ಗಳ ಜೊತೆಗಾರಿಕೆಯನ್ನು ಹಂಚಿಕೊಂಡರು. ಆದರೆ ಈ ಪಾಲುದಾರಿಕೆ ಮುರಿದ ತಕ್ಷಣ ದಕ್ಷಿಣ ಆಫ್ರಿಕಾದ ಇನಿಂಗ್ಸ್ ಕುಸಿಯಿತು.

ಇದನ್ನು ಓದಿದ್ದೀರಾ? ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ದಾಖಲೆ ಅಳಿಸಿದ ಜೋಸ್‌ ಬಟ್ಲರ್

ದಕ್ಷಿಣ ಆಫ್ರಿಕಾ ಪರ, ವಿಯಾನ್ ಮುಲ್ಡರ್ ಆರು, ಟ್ರಿಸ್ಟಾನ್ ಸ್ಟಬ್ಸ್ ಎರಡು, ಕೇಶವ್ ಮಹಾರಾಜ್ ಏಳು ಮತ್ತು ಕಗಿಸೊ ರಬಾಡ ಒಂದು ರನ್ ಗಳಿಸಿದರೆ ಐಡೆನ್ ಮಾರ್ಕ್ರಾಮ್ ಮತ್ತು ಮಾರ್ಕೊ ಯಾನ್ಸೆನ್​ಗೆ ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ.

ಪ್ಯಾಟ್ ಕಮ್ಮಿನ್ಸ್ ಈ ಆವೃತ್ತಿಯಲ್ಲಿ ಆರನೇ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದರು. ಅಷ್ಟೇ ಅಲ್ಲದೆ ಪ್ರಸ್ತುತ ಡಬ್ಲ್ಯೂಟಿಸಿ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆಗಿದ್ದಾರೆ. ಅವರು 2023-25ರ ಆವೃತ್ತಿಯಲ್ಲಿ ಇದುವರೆಗೆ 79 ವಿಕೆಟ್‌ಗಳನ್ನು ಕಬಳಿಸಿದ್ದು ಈ ಮೂಲಕ ಭಾರತದ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.

ಎರಡನೃ ಇನಿಂಗ್ಸ್‌ ಆಡುತ್ತಿರುವ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿದ್ದು, ಟೀ ವಿರಾಮದ ನಂತರ 17.3 ಓವರ್‌ಗಳಲ್ಲಿ 43 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿದೆ. ವೇಗಿ ಕಗ್ಗಿಸೊ ರಬಾಡ ಖವಾಜಾ ಮತ್ತು ಗ್ರೀನ್‌ ಅವರ ವಿಕಿಟ್‌ ಕಿತ್ತು ತಂಡಕ್ಕೆ ಬಲ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...