ಐಪಿಎಲ್ | ಆವೇಶ್ ಖಾನ್ ಉತ್ತಮ ಬೌಲಿಂಗ್: ಡೆಲ್ಲಿ ವಿರುದ್ಧ ರಾಜಸ್ಥಾನಕ್ಕೆ 12 ರನ್‌ಗಳ ರೋಚಕ ಗೆಲುವು

Date:

ಜೈಪುರದಲ್ಲಿ ಇಂದು ನಡೆದ ಐಪಿಎಲ್‌ನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ನೀಡಿದ್ದ 186 ರನ್‌ಗಳ ಗುರಿಯನ್ನು ಮುಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್‌, 12 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ.

ಮೊದಲು ಬ್ಯಾಟಿಂಗ್ ನಡೆಸಿದ್ದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್, ಗರಿಷ್ಠ ಸ್ಕೋರರ್ ಎನಿಸಿಕೊಂಡ ರಿಯಾನ್ ಪರಾಗ್ 84 ರನ್​ಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 185 ರನ್ ಪೇರಿಸಿತ್ತು.

ಈ ಗುರಿಯನ್ನು ಬೆನ್ನಟ್ಟಿದ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್ ಗಳಿಸಲಷ್ಟೇ ಶಕ್ತವಾಯಿತು. ಕೊನೆಯ ಓವರ್‌ನಲ್ಲಿ ಡೆಲ್ಲಿಗೆ ಗೆಲ್ಲಲು 17 ರನ್‌ಗಳ ಅವಶ್ಯಕತೆ ಇತ್ತು. ಕೊನೆಯ ಓವರ್ ಎಸೆದ ಆವೇಶ್ ಖಾನ್, ಕೇವಲ 4 ರನ್ ನೀಡುವ ಮೂಲರ ರಾಜಸ್ಥಾನಕ್ಕೆ ರೋಚಕ ಜಯ ತಂದುಕೊಡುವಲ್ಲಿ ಯಶಸ್ವಿಯಾದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡೆಲ್ಲಿ ಪರ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಕೇವಲ ಒಂದು ರನ್ ನಿಂದ ಅರ್ಧಶತಕದಿಂದ ವಂಚಿತರಾದರು. ಆವೇಶ್ ಖಾನ್ ಎಸೆತದಲ್ಲಿ ವಾರ್ನರ್ ಕ್ಯಾಚಿತ್ತು ಔಟಾದರು. ವಾರ್ನರ್ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 49 ರನ್ ಗಳಿಸಿದರು.

ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್ ಮತ್ತು ಅಕ್ಷರ್ ಪಟೇಲ್ ಹೋರಾಟ ನಡೆಸಿದರೂ ಕೂಡ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ. ಟ್ರಿಸ್ಟಾನ್ ಸ್ಟಬ್ಸ್ 23 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 2 ಬೌಂಡರಿಯ ನೆರವಿನಿಂದ 44 ರನ್ ಗಳಿಸಿದರು.

ರಾಜಸ್ಥಾನ ಪರ ಚಾಹಲ್ ಹಾಗೂ ಬರ್ಗರ್ ಎರಡು ವಿಕೆಟ್ ಪಡೆದರೆ, ಆವೇಶ್ ಖಾನ್ ಒಂದು ವಿಕೆಟ್ ಪಡೆದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...