ಕ್ರಿಕೆಟ್ | ವಿಶ್ವಕಪ್‌ನಲ್ಲಿ ನೀರಸ ಪ್ರದರ್ಶನ: ಪಾಕ್ ತಂಡದ ನಾಯಕತ್ವ ತ್ಯಜಿಸಿದ ಬಾಬರ್ ಆಝಂ

Date:

2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನವು ತಂಡವು ನೀರಸ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ಅದರ ಜವಾಬ್ದಾರಿಯನ್ನು ಹೊತ್ತು, ಪಾಕ್ ತಂಡದ ನಾಯಕತ್ವವನ್ನು ಬಾಬರ್ ಆಝಂ ತ್ಯಜಿಸಿದ್ದಾರೆ.

ಈ ಬಗ್ಗೆ ಬುಧವಾರ ಸಂಜೆ ಟ್ವೀಟ್ ಮಾಡಿರುವ ಬಾಬರ್ ಆಝಂ, ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಮಾದರಿಗಳ ನಾಯಕತ್ವದಿಂದ ಕೆಳಗಿಳಿಯುತ್ತಿರುವುದಾಗಿ ಪ್ರಕಟಿಸಿದ್ದಾರೆ.

ಟ್ವೀಟ್‌ನಲ್ಲಿ ‘ಈ ನಿರ್ಧಾರ ಕಠಿಣವಾಗಿದ್ದರೂ, ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ಆಟಗಾರನಾಗಿ ಮುಂದುವರಿಯುತ್ತೇನೆ, ತಂಡ ಮುಂದಿನ ನೂತನ ನಾಯಕನಿಗೆ ಬೆಂಬಲ ನೀಡುತ್ತೇನೆ’ ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಾಬರ್ ಅವರ ನಾಯಕತ್ವದಲ್ಲಿ ತಂಡವು ಈ ಬಾರಿಯ ವಿಶ್ವಕಪ್‌ನಲ್ಲಿ ದಯನೀಯವಾಗಿ ವಿಫಲವಾಗಿದ್ದು, ಕ್ರೀಡಾ ವಲಯದಲ್ಲಿ ಭಾರೀ ಚರ್ಚೆಗೀಡಾಗಿತ್ತು. ವಿಶ್ವಕಪ್‌ನಲ್ಲಿ ಆಡಿದ್ದ 9 ಲೀಗ್‌ ಪಂದ್ಯಗಳಲ್ಲಿ ಐದರಲ್ಲಿ ಸೋತು, 4ರಲ್ಲಿ ಮಾತ್ರ ಜಯ ದಾಖಲಿಸಿತ್ತು. ಆ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನ ಪಡೆಯುವುದರೊಂದಿಗೆ ಸೆಮಿಫೈನಲ್‌ಗೇರಲು ವಿಫಲವಾಗಿತ್ತು.

ಲೀಗ್ ಪಂದ್ಯಗಳ ಪೈಕಿ ಅಫ್ಘಾನಿಸ್ತಾನದ ಎದುರು ಹೀನಾಯವಾಗಿ ಸೋತದ್ದು ಪಾಕ್ ಕ್ರೀಡಾಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಅಫ್ಘಾನಿಸ್ತಾನವು ಪಾಕಿಸ್ತಾನದ ಎದುರಿನ ಗೆಲುವನ್ನು ವಿಶ್ವಕಪ್ ಗೆದ್ದಷ್ಟೇ ಸಂಭ್ರಮಿಸಿತ್ತು.

ಅಫ್ಘಾನಿಸ್ತಾನದ ಎದುರಿನ ಸೋಲಿನ ಬಳಿಕ, ಪಾಕ್ ಮಾಜಿ ಆಟಗಾರರ, ಆಡಳಿತ ಮಂಡಳಿಯ ಹಾಗೂ ಪಾಕ್ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿತ್ತಲ್ಲದೇ, ವಿಶ್ವಕಪ್​ನಲ್ಲಿ ತನ್ನ ಪಯಣ ಮುಗಿಸುವುದಕ್ಕೂ ಮುನ್ನವೇ ಬಾಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಕೂಗು ಜೋರಾಗಿತ್ತು.

ವಿಶ್ವಕಪ್ ಅಭಿಯಾನವನ್ನು ಮುಗಿಸಿ ಸದ್ಯ ತವರಿಗೆ ಮರಳಿರುವ ಬಳಿಕ ಬಾಬರ್ ಆಝಂ, ಕ್ರಿಕೆಟ್​ನ ಎಲ್ಲ ಸ್ವರೂಪದ ನಾಯಕತ್ವದಿಂದ ಕೆಳಗಿಳಿಯುತ್ತೇ. ಸಹಕಾರ ನೀಡಿದವರಿಗೆ ಧನ್ಯವಾದ ಎಂದು ತಿಳಿಸಿದ್ದಲ್ಲದೇ, ನೂತನ ನಾಯಕನಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ತಂಡದ ಆರಂಭಿಕ ಬ್ಯಾಟರ್ ಆಗಿರುವ ಬಾಬರ್ ಆಝಂ, ಬ್ಯಾಟಿಂಗ್‌ನಲ್ಲೂ ಕೂಡ ವೈಫಲ್ಯ ಕಂಡಿದ್ದರು. ವಿಶ್ವಕಪ್‌ನಲ್ಲಿ ಆಡಿದ್ದ ಒಂಬತ್ತು ಪಂದ್ಯಗಳಲ್ಲಿ 82.90 ಸ್ಟ್ರೈಕ್ ರೇಟ್‌ನೊಂದಿಗೆ ಕೇವಲ 320 ರನ್ ಗಳಿಸಲಷ್ಟೆ ಶಕ್ತವಾಗಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ | ಅಲ್ಪಮೊತ್ತದ ಕಾಳಗದಲ್ಲಿ ರೋಚಕ ಜಯ ಗಳಿಸಿದ ಟೀಮ್ ಇಂಡಿಯಾ; ಪಾಕ್‌ಗೆ ಭಾರೀ ಮುಖಭಂಗ

ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ...

ಟಿ20 ವಿಶ್ವಕಪ್ | ಪಾಕ್ ವಿರುದ್ಧ ಹೀನಾಯ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಮ್ ಇಂಡಿಯಾ; 119ಕ್ಕೆ ಆಲೌಟ್!

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಟಿ20 ವಿಶ್ವಕಪ್‌ನ...

UFC ಫೈನಲ್ : ಚೊಚ್ಚಲ ಪ್ರಯತ್ನದಲ್ಲೇ ಫೈನಲ್‌ನಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪೂಜಾ ತೋಮರ್

ಅಲ್ಟಿಮೇಟ್ ಫೈಟಿಂಗ್ ಚಾಂಪಿಯನ್‍ಶಿಪ್ (UFC)ನಲ್ಲಿ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಫೈನಲ್ಸ್ ಗೆಲ್ಲುವ...