ಟೆಸ್ಟ್ ಕ್ರಿಕೆಟ್: ಇಂಗ್ಲೆಂಡ್‌ಗೆ ಆರಂಭಿಕ ಆಘಾತ ನೀಡಿದ ಭಾರತ

Date:

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಟೆಸ್ಟ್ ಕ್ರಿಕೆಟ್ ಪಂದ್ಯಗಳ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವಿರಾಮದ ವೇಳೆಗೆ ಆರಂಭಿಕ ಮೇಲುಗೈ ಸಾಧಿಸಿದ್ದಾರೆ.

- Advertisement -

ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ  ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡದ ನಾಯಕ ಬೆನ್‌ ಸ್ಟೋಕ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಮೊದಲ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಮಾಡುತ್ತಿರುವ ಇಂಗ್ಲೆಂಡ್‌ಗೆ 12ನೇ ಓವರ್‌ನಲ್ಲಿ ಭಾರತದ ಅನುಭವಿ ಸ್ಪಿನ್ನರ್ ಆರ್‌ ಅಶ್ವಿನ್ ಆರಂಭಿಕ ಆಟಗಾರ ಝಾಕ್ ಕ್ರಾಲಿ(20) ಅವರನ್ನು ತಂಡದ ಮೊತ್ತ 55 ಇರುವಾಗ ಪೆವಿಲಿಯನ್‌ಗೆ ಕಳಿಸಿದರು. 15ನೇ ಓವರ್‌ನಲ್ಲಿ ಮೊದಲ ಕ್ರಮಾಂಕದ ಬ್ಯಾಟರ್ ಬೆನ್‌ ಡಕೆಟ್ (35) ಅವರನ್ನು ಎಲ್‌ಬಿ ಬಲೆಗೆ ಕೆಡುವುದರ ಮೂಲಕ ಎರಡನೇ ವಿಕೆಟ್ ಪಡೆದುಕೊಂಡರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ಮತ್ತೊಬ್ಬ ಅನುಭವಿ ಸ್ಪಿನ್ನರ್ ರವೀಂದ್ರ ಜಡೇಜಾ, ಒಲ್ಲಿ ಪೋಪ್ (1) ಅವರನ್ನು ಹೆಚ್ಚು ಹೊತ್ತು ನಿಲ್ಲಿಸದೆ ಔಟ್‌ ಮಾಡಿದರು. ಜೋ ರೂಟ್ ಅವರೊಂದಿಗೆ 61 ರನ್‌ಗಳ ಜೊತೆಯಾಟವಾಡುತ್ತಿದ್ದ ಬೈರ್‌ಸ್ಟೋ ಅವರನ್ನು(37) ಅಕ್ಸರ್ ಪಟೇಲ್ ಬೌಲ್ಡ್‌ ಮಾಡಿದರು. ಒಂದಷ್ಟು ಕಾಲ ಕ್ರೀಸ್‌ನಲ್ಲಿ ಆಟವಾಡುತ್ತಿದ್ದ ಜೋರೂಟ್‌(29) ರವೀಂದ್ರ ಜಡೇಜಾ ಪೆವಿಲಿಯನ್‌ಗೆ ಕಳಿಸಿದರು. ಬೆನ್ ಫೋಕ್ಸ್(2) ಕೂಡ ಅಕ್ಸರ್‌ ಪಟೇಲ್ ಬೌಲಿಂಗ್‌ನಲ್ಲಿ ಔಟಾದರು.

ಬೋಜನ ವಿರಾಮದ ನಂತರ ಇಂಗ್ಲೆಂಡ್ 39 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತ್ತು. ರಿಹಾನ್ ಅಹಮದ್ (0) ಹಾಗೂ ನಾಯಕ ಬೆನ್‌ ಸ್ಟೋಕ್ಸ್(8) ರನ್‌ ಗಳಿಸಿ ಆಡುತ್ತಿದ್ದರು.

ಭಾರತದ ಪರ ಅಶ್ವಿನ್ 22/2, ಅಕ್ಸರ್ ಪಟೇಲ್ 31/2 ಹಾಗೂ ರವೀಂದ್ರ ಜಡೇಜಾ 43/2 ವಿಕೆಟ್ ಕಬಳಿಸಿದರು.

ಆಟವಾಡುತ್ತಿರುವ ಉಭಯ ತಂಡಗಳು:

ಭಾರತ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್:

ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜ್ಯಾಕ್ ಲೀಚ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...