2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾದ ಬೆನ್ನಲ್ಲೇ ಬಾಂಗ್ಲಾ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ಏಕದಿನ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ.
37 ವರ್ಷದ ವಿಕೆಟ್ ಕೀಪರ್-ಬ್ಯಾಟರ್ ತಮ್ಮ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆಯುವುದಾಗಿ ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. ಹಾಗೆಯೇ ಕಳೆದ ಎರಡು ವಾರಗಳಲ್ಲಿ ಸಾಕಷ್ಟು ಸವಾಲುಗಳು ಎದುರಾದವು ಎಂದು ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಭಾರತದ ವಿರುದ್ಧ ಸೋಲು: ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸ್ಟೀವ್ ಸ್ಮಿತ್
ಮಂಗಳವಾರ ದುಬೈನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ ಸೋತ ನಂತರ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಅದಾದ ಬಳಿಕ ಈಗ ಬಾಂಗ್ಲಾ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ನಿವೃತ್ತಿ ಘೋಷಿಸಿದ್ದಾರೆ.
ಬೊಗ್ರಾ ಮೂಲದ ಮುಷ್ಫಿಕರ್ 2005ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ಪಂದ್ಯದ ಮೂಲಕ ವೃತ್ತಿ ಜೀವನ ಆರಂಭಿಸಿದರು. 19 ವರ್ಷಗಳ ಕಾಲ ಏಕದಿನ ಪಂದ್ಯಗಳನ್ನು ಆಡಿದ್ದಾರೆ. 2022ರಲ್ಲಿ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದ ಮುಷ್ಫಿಕರ್ ಸದ್ಯ ಟೆಸ್ಟ್ ಕ್ರಿಕೆಟ್ ಮಾತ್ರ ಆಡಲಿದ್ದಾರೆ.
ಇದನ್ನು ಓದಿದ್ದೀರಾ? ಎಲ್ಲ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾ
ಮುಷ್ಫಿಕರ್ ರಹೀಮ್ ಬಾಂಗ್ಲಾದೇಶ ಪರ ಅತಿ ಹೆಚ್ಚು (274) ಏಕದಿನ ಪಂದ್ಯಗಳನ್ನು ಆಡಿದ ಆಟಗಾರರಾಗಿದ್ದಾರೆ. ಶಕೀಬ್ ಅಲ್ ಹಸನ್ (247), ತಮೀಮ್ ಇಕ್ಬಾಲ್ (243), ಮಹ್ಮದುಲ್ಲಾ (239) ಮತ್ತು ಮಶ್ರಫೆ ಮೊರ್ತಾಜಾ (218) ತಮ್ಮ ವೃತ್ತಿಜೀವನದಲ್ಲಿ 200ಕ್ಕೂ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಇತರ ಬಾಂಗ್ಲಾದೇಶ ಕ್ರಿಕೆಟಿಗರು.
ಮುಷ್ಫಿಕರ್ ರಹೀಮ್ ಬಾಂಗ್ಲಾದೇಶದ ಪರ ಏಕದಿನ ಪಂದ್ಯಗಳಲ್ಲಿ ಅತೀ ಅಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ತಮೀಮ್ ಇಕ್ಬಾಲ್ 8357 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದರೆ, 274 ಪಂದ್ಯಗಳಿಂದ 7795 ಗಳಿಸುವ ಮೂಲಕ ರಹೀಮ್ ಎರಡನೇ ಸ್ಥಾನದಲ್ಲಿದ್ದಾರೆ.
ಇನ್ನು ರಹೀಮ್ ವಿಕೆಟ್ ಕೀಪರ್ ಕೂಡಾ ಹೌದು. ಮುಷ್ಫಿಕರ್ ರಹೀಮ್ 260 ಪಂದ್ಯಗಳಲ್ಲಿ 7 ಶತಕಗಳು ಮತ್ತು 47 ಅರ್ಧಶತಕ ಗಳಿಸಿದ್ದಾರೆ. ಹಾಗೆಯೇ ಏಕದಿನ ವಿಶ್ವಕಪ್‌ನಲ್ಲಿ ಶತಕ ಗಳಿಸಿದ ಮೂವರು ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌ಗಳಲ್ಲಿ ಮುಷ್ಫಿಕರ್ ರಹೀಮ್ (ಇನ್ನಿಬ್ಬರು ಮಹ್ಮದುಲ್ಲಾ, ಶಕೀಬ್ ಅಲ್ ಹಸನ್) ಕೂಡಾ ಒಬ್ಬರು.
