ಕ್ರಿಕೆಟ್ ಬಿಟ್ಟು ರಾಜಕೀಯ ಸೇರಲಿರುವ ಶಕೀಬ್ ಅಲ್ ಹಸನ್

Date:

ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಕ್ರಿಕೆಟ್ ಬಿಟ್ಟು ರಾಜಕೀಯಕ್ಕೆ ಸೇರ್ಪಡೆಯಾಗಲು ಮುಂದಾಗಿದ್ದಾರೆ.

- Advertisement -

2024ರ ಜನವರಿ 7 ರಂದು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಆಡಳಿತಾರೂಢ ಬಾಂಗ್ಲಾದೇಶ ಅವಾಮಿ ಲೀಗ್‌ನಿಂದ ನಾಮನಿರ್ದೇಶನವನ್ನು ಬಯಸಿ ಔಪಚಾರಿಕವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಶಕೀಬ್ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಶನಿವಾರದಂದು ಪಕ್ಷದಿಂದ ನಾಮನಿರ್ದೇಶನ ಪತ್ರಗಳನ್ನು ತೆಗೆದುಕೊಂಡಿದ್ದಾರೆ. ಅವರು ಸೆಲೆಬ್ರಿಟಿ ಮತ್ತು ದೇಶದ ಯುವಜನರಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಹೊಂದಿದ್ದಾರೆ ಎಂದು ಅವಾಮಿ ಲೀಗ್ ಜಂಟಿ ಕಾರ್ಯದರ್ಶಿ ಬಹಾವುದ್ದೀನ್ ನಾಸಿಮ್ ತಿಳಿಸಿದ್ದಾರೆ.

ಶಕೀಬ್ ತಮ್ಮ ತವರು ಜಿಲ್ಲೆ ಮಗರಾದಲ್ಲಿ ಅಥವಾ ರಾಜಧಾನಿ ಢಾಕಾದಲ್ಲಿ ಸ್ಪರ್ಧಿಸಲು ಬಯಸಿದ್ದಾರೆ ಎಂದು ನಾಸಿಮ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಶ್ವಕಪ್ | ದ್ರಾವಿಡ್, ಕೊಹ್ಲಿ,ಶಮಿ ಯಾರಿಗಾಗಿ ಈ ಬಾರಿಯ ಕಪ್; ರೋಚಕ ಹಣಾಹಣಿಯ ನಿರೀಕ್ಷೆಯಲ್ಲಿ ಕ್ರಿಕೆಟ್ ಜಗತ್ತು

ಶಕೀಬ್ ಅಲ್ ಹಸನ್ ಗಾಯಗೊಂಡಿರುವ ಕಾರಣ ನ್ಯೂಜಿಲೆಂಡ್ ವಿರುದ್ಧ ಮುಂಬರುವ ಟೆಸ್ಟ್ ಸರಣಿಯಲ್ಲಿ ಆಡುವುದು ಅನುಮಾನವಿದೆ.

ಶಕೀಬ್ ಅವರ ಉಮೇದುವಾರಿಕೆಯನ್ನು ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಆಡಳಿತ ಪಕ್ಷದ ಸಂಸದೀಯ ಮಂಡಳಿಯು ದೃಢಪಡಿಸಬೇಕಾಗಿದೆ.

ಶೇಖ್ ಹಸೀನಾ ಅವರು ಕಳೆದ 15 ವರ್ಷಗಳಿಂದ ಸುಮಾರು 17 ಕೋಟಿ ಜನಸಂಖ್ಯೆ ಜನರಿರುವ ದಕ್ಷಿಣ ಏಷ್ಯಾದ ರಾಷ್ಟ್ರವನ್ನು ಮುನ್ನಡೆಸಿದ್ದಾರೆ. ಇವರ ಮೇಲೆ ಭ್ರಷ್ಟಾಚಾರ, ದಬ್ಬಾಳಿಕೆಯ ಆಡಳಿತದ ಆರೋಪವಿದೆ.

ಬಾಂಗ್ಲಾ ದೇಶದ ಪ್ರಮುಖ ವಿರೋಧ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಪ್ರತಿಪಕ್ಷಗಳ ಬಹಿಷ್ಕಾರ ಮುಂದುವರಿದರೆ ಅವರು ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಮರಳುವುದು ಬಹುತೇಕ ಖಚಿತವಾಗಿದೆ.

ಬಾಂಗ್ಲಾ ಕ್ರಿಕೆಟ್ ತಂಡದ ಮಾಜಿ ನಾಯಕ ಮಶ್ರಫೆ ಮೊರ್ತಾಜಾ ಕೂಡ 2018 ರಲ್ಲಿ ರಾಜಕೀಯ ಸೇರಿ ಸಂಸದರಾಗಿ ಆಯ್ಕೆಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...