ಟಿ20 ವಿಶ್ವಕಪ್‌ | ಭಾರತಕ್ಕೆ ಬರುವುದಿಲ್ಲ ಎಂದು ಘೋಷಿಸಿದ ಬಾಂಗ್ಲಾದೇಶ

Date:

ಮುಂಬರುವ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಆರಂಭಕ್ಕೆ ಇನ್ನು ಐದು ವಾರಗಳಷ್ಟೇ ಬಾಕಿ ಇರುವಾಗ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಮಹತ್ವದ ತೀರ್ಮಾನವೊಂದನ್ನು ಪ್ರಕಟಿಸಿದೆ. ಭದ್ರತೆಯ ಕಾರಣ ನೀಡಿ ಮುಂದಿನ ತಿಂಗಳು ನಡೆಯಲಿರುವ ವಿಶ್ವಕಪ್‌ಗಾಗಿ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಘೋಷಿಸಿರುವ ಮಂಡಳಿ, ತನ್ನ ಪಂದ್ಯಗಳನ್ನು ಭಾರತದಿಂದ ಹೊರಗಿನ ತಟಸ್ಥ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ)ಗೆ ಅಧಿಕೃತವಾಗಿ ಮನವಿ ಮಾಡಿದೆ.

- Advertisement -

​2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಿಂದ ಬಾಂಗ್ಲಾದೇಶದ ವೇಗಿ ಮುಸ್ತಾಫಿಜರ್ ರೆಹಮಾನ್ ಅವರನ್ನು ಕೈಬಿಡಬೇಕು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡಕ್ಕೆ ಸೂಚನೆ ನೀಡಿದ ಮರುದಿನವೇ ಬಿಸಿಬಿ ಈ ನಿರ್ಧಾರವನ್ನು ಪ್ರಕಟಿಸಿರುವುದು ರಾಜತಾಂತ್ರಿಕ ಹಾಗೂ ಕ್ರೀಡಾ ವಲಯದಲ್ಲಿ ಸಂಚಲನ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

​ಭಾರತ ಮತ್ತು ಬಾಂಗ್ಲಾದೇಶದ ನಡುವೆ ಇತ್ತೀಚೆಗೆ ಉಂಟಾಗಿರುವ ರಾಜಕೀಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಭಾಗವಹಿಸುವಿಕೆಯ ಬಗ್ಗೆ ಚರ್ಚಿಸಲು ಭಾನುವಾರ (ಜ.4, 2026) ಸಂಜೆ ಬಿಸಿಬಿ ನಿರ್ದೇಶಕರ ಮಂಡಳಿಯ ತುರ್ತು ಸಭೆ ಕರೆಯಲಾಗಿತ್ತು. ಈ ಸಭೆಯ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಸಿಬಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

“ಪ್ರಸ್ತುತ ಪರಿಸ್ಥಿತಿಯ ಸಮಗ್ರ ಮೌಲ್ಯಮಾಪನ ಮತ್ತು ಭಾರತದಲ್ಲಿ ಬಾಂಗ್ಲಾದೇಶ ತಂಡದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಗಮನದಲ್ಲಿಟ್ಟುಕೊಂಡು, ಹಾಗೂ ಬಾಂಗ್ಲಾದೇಶ ಸರ್ಕಾರದ ಸಲಹೆಯ ಮೇರೆಗೆ, ಪ್ರಸ್ತುತ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ತಂಡವು ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ನಿರ್ದೇಶಕರ ಮಂಡಳಿ ನಿರ್ಧರಿಸಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ; ಪಂತ್‌ಗೆ 9ನೇ ಸ್ಥಾನ

​‘ಈ ನಿರ್ಧಾರದ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎಲ್ಲ ಪಂದ್ಯಗಳನ್ನು ಭಾರತದ ಹೊರಗಿನ ಸ್ಥಳಕ್ಕೆ ಸ್ಥಳಾಂತರಿಸುವಂತೆ ಟೂರ್ನಿಯ ಆಯೋಜಕ ಸಂಸ್ಥೆಯಾಗಿರುವ ಐಸಿಸಿಗೆ ಅಧಿಕೃತವಾಗಿ ಕೋರಲಾಗಿದೆ. ಆಟಗಾರರು, ತಂಡದ ಅಧಿಕಾರಿಗಳು, ಮಂಡಳಿಯ ಸದಸ್ಯರು ಮತ್ತು ಇತರ ಪಾಲುದಾರರ ಹಿತದೃಷ್ಟಿಯಿಂದ ಹಾಗೂ ತಂಡವು ಸುರಕ್ಷಿತ ವಾತಾವರಣದಲ್ಲಿ ಟೂರ್ನಿಯಲ್ಲಿ ಪಾಲ್ಗೊಳ್ಳಲು ಈ ಕ್ರಮ ಅಗತ್ಯ’ ಎಂದು ಬಿಸಿಬಿ ಪ್ರತಿಪಾದಿಸಿದೆ. ಬಾಂಗ್ಲಾದೇಶದ ಕ್ರೀಡಾ ಸಚಿವಾಲಯದ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

​ಐಸಿಸಿ ಅಂಗಳದಲ್ಲಿ ಚೆಂಡು

ಪುರುಷರ ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7ರಿಂದ ಮಾರ್ಚ್ 8ರವರೆಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಒಟ್ಟು 55 ಪಂದ್ಯಗಳ ಪೈಕಿ ಶ್ರೀಲಂಕಾ 20 ಪಂದ್ಯಗಳಿಗೆ ಆತಿಥ್ಯ ವಹಿಸಲಿದ್ದು, ಪಾಕಿಸ್ತಾನದ ಎಲ್ಲ ಪಂದ್ಯಗಳು ಹಾಗೂ 2028ರವರೆಗಿನ ಐಸಿಸಿ ಟೂರ್ನಿಗಳಲ್ಲಿನ ಭಾರತ–ಪಾಕಿಸ್ತಾನ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿ ನಡೆಯಲಿವೆ.

​ನಿಗದಿತ ವೇಳಾಪಟ್ಟಿಯಂತೆ ಬಾಂಗ್ಲಾದೇಶವು ಕೋಲ್ಕತ್ತದಲ್ಲಿ ಮೂರು ಲೀಗ್ ಪಂದ್ಯಗಳನ್ನು ಮತ್ತು ಮುಂಬೈನಲ್ಲಿ ತನ್ನ ಅಂತಿಮ ಲೀಗ್ ಪಂದ್ಯವನ್ನು ಆಡಬೇಕಿತ್ತು. ಆದರೆ ಬಿಸಿಬಿಯ ಈ ಹಠಾತ್ ನಿರ್ಧಾರದಿಂದಾಗಿ ವೇಳಾಪಟ್ಟಿ ಬದಲಾವಣೆಯ ಬಗ್ಗೆ ಐಸಿಸಿ ಮುಂದಿನ ಕೆಲ ದಿನಗಳಲ್ಲಿ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ.

​ಶನಿವಾರವಷ್ಟೇ (ಜ.3) ಬಿಸಿಸಿಐ, ಯಾವುದೇ ನಿರ್ದಿಷ್ಟ ಕಾರಣ ನೀಡದೆ, ಐಪಿಎಲ್ 2026ರಿಂದ ಮುಸ್ತಾಫಿಜರ್ ರೆಹಮಾನ್ ಅವರನ್ನು ಹಿಂಪಡೆಯುವಂತೆ ಕೆಕೆಆರ್‌ಗೆ ಸೂಚಿಸಿತ್ತು. ಕಳೆದ ತಿಂಗಳು ನಡೆದ ಹರಾಜಿನಲ್ಲಿ ₹9.20 ಕೋಟಿಗೆ ಮುಸ್ತಾಫಿಜರ್ ಅವರನ್ನು ಕೆಕೆಆರ್ ಖರೀದಿಸಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಬಿಸಿಬಿ ಕಠಿಣ ನಿಲುವು ತಳೆದಿರುವುದು ಉಭಯ ದೇಶಗಳ ಕ್ರಿಕೆಟ್ ಸಂಬಂಧ ಹದಗೆಟ್ಟಿರುವುದನ್ನು ಸೂಚಿಸುತ್ತದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...