ಭಾರತಕ್ಕೆ ಏಷ್ಯಾ ಕಪ್: ಆಟಗಾರರಿಗೆ ಬಿಸಿಸಿಐಯಿಂದ 21 ಕೋಟಿ ರೂ. ಬಹುಮಾನ

Date:

ಏಷ್ಯಾ ಕಪ್ ಟೂರ್ನಿಯಲ್ಲಿ ಭಾನುವಾರ ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಐದು ವಿಕೆಟ್‌ಗಳ ಜಯ ಸಾಧಿಸಿದೆ.

- Advertisement -

ಪಾಕಿಸ್ತಾನ ವಿರುದ್ಧ ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ ಕ್ರಿಕೆಟ್ ತಂಡಕ್ಕೆ ‘ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ” (ಬಿಸಿಸಿಐ) ₹21 ಕೋಟಿ ಬಹುಮಾನ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಇದೊಂದು ಅಸಾಧಾರಣ ಗೆಲುವಾಗಿದೆ… ಇದರ ಸಂಭ್ರಮಾಚರಣೆಯ ಭಾಗವಾಗಿ ಭಾರತ ತಂಡದ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ₹21 ಕೋಟಿ ನಗದು ಬಹುಮಾನ ಘೋಷಿಸಲಾಗಿದೆ” ಎಂದು ಬಿಸಿಸಿಐ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದೆ.

ರೋಚಕ ಪಂದ್ಯದಲ್ಲಿ ಭಾರತದ ಸ್ಪಿನ್ ಬೌಲರ್‌ಗಳು ಪಾಕಿಸ್ಥಾನದ ಮಧ್ಯಮ ಕ್ರಮಾಂಕವನ್ನು ಧ್ವಂಸಗೊಳಿಸಿದರು. ಪಾಕಿಸ್ಥಾನ 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲ್‌ಔಟ್ ಆಯಿತು.

ಭಾರತವು ಸಾಧಾರಣ ಗುರಿಯನ್ನ 5 ವಿಕೆಟ್‌ಗಳು ಕಳೆದುಕೊಂಡು 19.4 ಓವರ್‌ಗಳಲ್ಲಿ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ 9ನೇ ಏಷ್ಯಾಕಪ್ ತನ್ನದಾಗಿಸಿಕೊಂಡಿತು.

ಮೋದಿ ಅಭಿನಂದನೆ

ಭಾರತ ತಂಡದ ಪಾಕಿಸ್ತಾವನ್ನ ಬಗ್ಗುಬಡಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡಿ ಭಾರತ ತಂಡವನ್ನ ವಿಶೇಷ ರೀತಿಯಲ್ಲಿ ಅಭಿನಂದಿಸಿದ್ದಾರೆ. ಈ ಗೆಲುವನ್ನು “ಆಟದ ಕ್ಷೇತ್ರದಲ್ಲಿ ಆಪರೇಷನ್ ಸಿಂದೂರ್” ಎಂದು ಕರೆದಿದ್ದಾರೆ. ಗೇಮ್​ ಫೀಲ್ಡ್​​ನಲ್ಲೂ ಆಫರೇಷನ್​ ಸಿಂಧೂರ್, ” ಫಲಿತಾಂಶ ಎರಡರಲ್ಲೂ ಒಂದೇ – ಭಾರತಕ್ಕೆ ಗೆಲುವು” ಎಂದು ಮೋದಿ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಪಹಲ್ಗಾಮ್‌ ಸಂತ್ರಸ್ತರಿಗೆ ದೇಣಿಗೆ ನೀಡಿದ ಸೂರ್ಯಕುಮಾರ್

ಏಷ್ಯಾ ಕಪ್ ಟೂರ್ನಿಯ ಪಂದ್ಯ ಶುಲ್ಕವನ್ನು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ನೀಡಲು ನಿರ್ಧರಿಸಿರುವುದಾಗಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ.

“ನಮ್ಮ ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಗೆ ಒಳಗಾದ ಕುಟುಂಬಗಳಿಗೆ ಬೆಂಬಲ ನೀಡುವ ಸಲುವಾಗಿ ಈ ಟೂರ್ನಿಯ ಪಂದ್ಯ ಶುಲ್ಕವನ್ನು ದೇಣಿಗೆಯಾಗಿ ನೀಡಲು ನಾನು ನಿರ್ಧರಿಸಿದ್ದೇನೆ. ನಿಮ್ಮೊಂದಿಗೆ ನಾನು ಸದಾ ನಿಲ್ಲುತ್ತೇನೆ. ಜೈ ಹಿಂದ್’ ಎಂದು ಸೂರ್ಯಕುಮಾರ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...