158 ಕೋಟಿ ರೂ. ಬಾಕಿಗೆ ಬೈಜೂಸ್ ವಿರುದ್ಧ ದೀವಾಳಿತನದ ಪ್ರಕ್ರಿಯೆಗೆ ಎಸಿಎಲ್‌ಟಿಗೆ ಬಿಸಿಸಿಐ ಅರ್ಜಿ

Date:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 158 ಕೋಟಿ ರೂ. ಬಾಕಿ ಪಾವತಿಗೆ ಸಂಬಂಧಿಸಿದಂತೆ ಬೈಜೂಸ್ ಕಂಪನಿಯ ವಿರುದ್ಧ ದಿವಾಳಿತನದ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನುಗಳ ನ್ಯಾಯಮಂಡಳಿ(ಎನ್‌ಸಿಎಲ್‌ಟಿ)ಗೆ ಅರ್ಜಿ ಸಲ್ಲಿಸಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 28 ರಂದು, ನ್ಯಾಯಾಂಗ ಸದಸ್ಯರಾದ ಕೆ ಬಿಶ್ವಾಲ್ ಮತ್ತು ತಾಂತ್ರಿಕ ಸದಸ್ಯ ಮನೋಜ್ ಕುಮಾರ್ ದುಬೆ ಅವರ ನ್ಯಾಯ ಪೀಠ ಬೈಜೂಸ್‌ ಸಂಸ್ಥೆಯ ಪ್ರತಿಕ್ರಿಯೆ ಕೇಳಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಟಿಡಿಎಸ್‌ ಹೊರತು ಪಡಿಸಿ 158 ಕೋಟಿ ರೂ. ಮೊತ್ತವನ್ನು ಪಾವತಿಸುವಂತೆ ಈ ವರ್ಷದ ಜನವರಿ 6 ರಂದು ಬೈಜೂಸ್‌ಗೆ ಎನ್‌ಸಿಎಲ್‌ಟಿ ನೋಟಿಸ್ ಕಳುಹಿಸಲಾಗಿದೆ. ಈ ನೋಟಿಸ್‌ಗೆ ಸಂಬಂಧಿಸಿದಂತೆ ನ್ಯಾಯಪೀಠ, ಎರಡು ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ಕಂಪನಿಗೆ ಸೂಚಿಸಿತು. ಡಿಸೆಂಬರ್ 22 ರಂದು ಮುಂದಿನ ವಿಚಾರಣೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

ವರದಿಗಳ ಪ್ರಕಾರ, ಭಾರತೀಯ ಕ್ರಿಕೆಟ್ ತಂಡದ ಜೆರ್ಸಿಗಳನ್ನು ಪ್ರಾಯೋಜಿಸುವ ಒಪ್ಪಂದಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಲಾದ ಬಾಕಿಗಳನ್ನು ಪಾವತಿಸಬೇಕಾಗಿತ್ತು. 2019 ರಲ್ಲಿ ಬಿಸಿಸಿಐ ಮತ್ತು ಬೈಜೂಸ್ ನಡುವೆ ಪ್ರಾಯೋಜಕತ್ವದ ಒಪ್ಪಂದವಾಗಿತ್ತು.

ಈ ಒಪ್ಪಂದವು 2022 ರಲ್ಲಿ ಕೊನೆಗೊಂಡಿತು. ಆದರೆ ನಂತರ ಅದನ್ನು 2023 ಕ್ಕೆ ವಿಸ್ತರಿಸಲಾಯಿತು. ಆದರೆ 2023ರ ಜನವರಿಯಲ್ಲಿ, ಕಂಪನಿಗೆ ಇತರ ಹಣಕಾಸು ತೊಂದರೆಗಳುಂಟಾಯಿತು. ಈ ಹಿನ್ನಲೆಯಲ್ಲಿ ಬೈಜೂಸ್ ಪ್ರಾಯೋಜಕತ್ವದ ಒಪ್ಪಂದವನ್ನು ಬಿಸಿಸಿಐ ಮತ್ತು ಐಸಿಸಿ ನಡುವೆ ರದ್ದುಗೊಳಿಸಿತು.

ಈ ನಡುವೆ, ದಿವಾಳಿತನದ ಪ್ರಕರಣವನ್ನು ಇತ್ಯರ್ಥಗೊಳಿಸಲು ಬೈಜುಸ್ ಹಾಗೂ ಬಿಸಿಸಿಐ ಜೊತೆ ಎನ್‌ಸಿಎಲ್‌ಟಿ ಮಾತುಕತೆ ನಡೆಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...