ಏಷ್ಯಾ ಕಪ್‌ 2023 | ಪಾಕಿಸ್ತಾನಕ್ಕೆ ಹಿನ್ನಡೆ, ಭಾರತದ ಬೆಂಬಲಕ್ಕೆ ನಿಂತ ಶ್ರೀಲಂಕಾ, ಬಾಂಗ್ಲಾದೇಶ

Date:

  • ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್‌
  • ಟೂರ್ನಿ ಸ್ಥಳಾಂತರಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಬೆಂಬಲ

ಪಾಕಿಸ್ತಾನದ ಆತಿಥ್ಯದಲ್ಲಿ ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್‌ ಟೂರ್ನಿಯನ್ನು ಸ್ಥಳಾಂತರಿಸುವ ಬಿಸಿಸಿಐ ಪ್ರಸ್ತಾಪಕ್ಕೆ  ಶ್ರೀಲಂಕಾ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬೆಂಬಲ ಸೂಚಿಸಿದೆ. ಇದರಿಂದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ತೀವ್ರ ಹಿನ್ನಡೆಯಾಗಿದೆ.

ಈ ವರ್ಷದ ಏಷ್ಯಾಕಪ್ ಅನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಿದರೆ, ಆತಿಥ್ಯ ವಹಿಸಲು ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಉತ್ಸುಕವಾಗಿವೆ ಎಂದು ಜಿಯೋ ಸ್ಪೋರ್ಟ್ಸ್‌ ವರದಿ ಮಾಡಿದೆ.

ನಿಗದಿತ ಟೂರ್ನಿಯನ್ನು ತಮ್ಮ ರಾಷ್ಟ್ರದಿಂದ ಸ್ಥಳಾಂತರಿಸಿದರೆ 2023ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ಆಡುವುದಿಲ್ಲ ಎಂದು ಪಿಸಿಬಿ ಮುಖ್ಯಸ್ಥ ನಜಮ್ ಸೇಥಿ ಎಚ್ಚರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮತ್ತೊಂದೆಡೆ, ಪಾಕಿಸ್ತಾನದಲಿ ಏಷ್ಯ ಕಪ್‌ ಟೂರ್ನಿ ನಡೆದರೆ ಭಾರತ ಪಾಲ್ಗೊಳ್ಳುವುದಿಲ್ಲ ಎಂದು ಈ ಹಿಂದೆಯೇ  ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿತ್ತು. ಅಲ್ಲದೆ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಬೇಕು ಎಂದು ಒತ್ತಾಯಿಸಿದೆ.

ಈ ಸುದ್ದಿ ಓದಿದ್ದೀರಾ?: ಏಷ್ಯಾ ಕಪ್ ಟೂರ್ನಿಗೆ ಅರ್ಹತೆ ಪಡೆದು ಇತಿಹಾಸ ಬರೆದ ನೇಪಾಳ

ಟೂರ್ನಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಬೇಕು ಎಂಬ ಬಿಸಿಸಿಐ ಬೇಡಿಕೆಯನ್ನು ಸಂಪೂರ್ಣವಾಗಿ ಒಪ್ಪದ ಪಿಸಿಬಿ ಹೊಸ ಪ್ರಸ್ತಾಪವೊಂದನ್ನು ಜಯ್‌ ಶಾ ಅಧ್ಯಕ್ಷರಾಗಿರುವ ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ (ಎಸಿಸಿ) ಮುಂದಿಟ್ಟಿತ್ತು. ಇದರ ಪ್ರಕಾರ ನಿಗದಿಯಂತೆ ಟೂರ್ನಿ ಪಾಕಿಸ್ತಾನದಲ್ಲೇ ನಡೆಯಲಿದೆ. ಆದರೆ, ಭಾರತ-ಪಾಕಿಸ್ತಾನ ತಂಡಗಳ ನಡುವಿನ ಮಹತ್ವದ ಪಂದ್ಯ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಆಡಿಸುವ ಪ್ರಸ್ತಾಪವನ್ನು ಪಿಸಿಬಿ ಮುಂದಿಟ್ಟಿತ್ತು. ಈ ಕುರಿತ ಅಂತಿಮ ನಿರ್ಧಾರವನ್ನು ಎಸಿಸಿ ಇನ್ನೂ ಪ್ರಕಟಿಸಿಲ್ಲ.

ವರ್ಷಾಂತ್ಯದಲ್ಲಿ ಭಾರತದಲ್ಲೇ ಏಕದಿನ ವಿಶ್ವಕಪ್‌ ಟೂರ್ನಿ ನಡೆಯಲಿದ್ದು, ಏಷ್ಯಾ ಕಪ್‌ ಟೂರ್ನಿಯು ಪಾಕಿಸ್ತಾನದ ಕೈ ತಪ್ಪಿದರೆ, ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ಭಾಗವಹಿಸುವುದು ಬಹುತೇಕ ಅನುಮಾನವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್‌ ಗೆಲುವು | 2.5 ಕೋಟಿ ರೂ. ಹೆಚ್ಚುವರಿ ಹಣ ಬೇಡ ಎಂದ ರಾಹುಲ್ ದ್ರಾವಿಡ್!

ಕಳೆದ ತಿಂಗಳು ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ...

ಇಂಡಿಯನ್ ಕ್ರಿಕೆಟ್ ಟೀಮ್‌ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಟೀಂ ಇಂಡಿಯಾ ಪುರುಷರ ತಂಡದ ಮುಖ್ಯ ಕೋಚ್‌ ಆಗಿ ಭಾರತದ ಮಾಜಿ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಸೂರ್ಯಕುಮಾರ್ ಯಾದವ್

ಭಾರತೀಯ ಕ್ರಿಕೆಟ್ ತಂಡದ ಟಿ20 ಆಟಗಾರ ಸೂರ್ಯಕುಮಾರ್ ಯಾದವ್ ಸೋಮವಾರ ಮಂಗಳೂರಿಗೆ...

ಟೀಂ ಇಂಡಿಯಾಗೆ ಬಿಸಿಸಿಐನಿಂದ 125 ಕೋಟಿ ರೂ. ಬಹುಮಾನ: ವಿರಾಟ್, ರೋಹಿತ್, ದ್ರಾವಿಡ್‌ಗೆ ಎಷ್ಟು?

ವೆಸ್ಟ್‌ ಇಂಡೀಸ್‌ನಲ್ಲಿ 2024ನೇ ಸಾಲಿನ ಟಿ20 ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದ...