BCCI ಸರ್ಕಾರಿ ಸಂಸ್ಥೆಯಲ್ಲ, RTI ವ್ಯಾಪ್ತಿಗೆ ಬರುವುದಿಲ್ಲ: ಕೇಂದ್ರ ಮಾಹಿತಿ ಆಯೋಗ ತೀರ್ಪು

Date:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (BCCI) ಯಾವುದೇ ಸರ್ಕಾರಿ ಸಂಸ್ಥೆಯಲ್ಲ, ಹೀಗಾಗಿ ಅದು ಮಾಹಿತಿ ಹಕ್ಕು ಕಾಯ್ದೆಯ (RTI) ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ (CIC) ಮಹತ್ವದ ತೀರ್ಪು ನೀಡಿದೆ. ಬಿಸಿಸಿಐ ಸರ್ಕಾರದ ಒಡೆತನ, ನಿಯಂತ್ರಣ ಅಥವಾ ಗಣನೀಯ ಆರ್ಥಿಕ ನೆರವಿನಿಂದ ನಡೆಯುವ ಸಂಸ್ಥೆಯಲ್ಲದ ಕಾರಣ, ಆರ್‌ಟಿಐ ಕಾಯ್ದೆಯ ಸೆಕ್ಷನ್ 2(h) ಅಡಿಯಲ್ಲಿ ಇದನ್ನು ‘ಸಾರ್ವಜನಿಕ ಪ್ರಾಧಿಕಾರ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಆಯೋಗವು ಸ್ಪಷ್ಟಪಡಿಸಿದೆ.

- Advertisement -

ಕೇಂದ್ರ ಮಾಹಿತಿ ಆಯುಕ್ತರಾದ ಪಿ.ಆರ್. ರಮೇಶ್ ಅವರು ಇಂದು (ಮೇ 18) ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. ದೆಹಲಿ ಮೂಲದ ಗೀತಾ ರಾಣಿ ಎಂಬುವವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸುವ ಮೂಲಕ ಆಯೋಗವು ಈ ನಿರ್ಧಾರಕ್ಕೆ ಬಂದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಲು ಬಿಸಿಸಿಐಗೆ ಇರುವ ಕಾನೂನುಬದ್ಧ ಅಧಿಕಾರವೇನು ಮತ್ತು ಆಟಗಾರರನ್ನು ಆಯ್ಕೆ ಮಾಡುವ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ಒದಗಿಸುವಂತೆ ಕೋರಿ ಗೀತಾ ರಾಣಿ ಅವರು 2017ರಲ್ಲಿ ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯಕ್ಕೆ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಸಚಿವಾಲಯವು ತನ್ನ ಬಳಿ ಈ ಮಾಹಿತಿ ಇಲ್ಲವೆಂದು ತಿಳಿಸಿದ್ದರಿಂದ, ಈ ಪ್ರಕರಣವು ಅಂತಿಮವಾಗಿ ಆಯೋಗದ ಮೆಟ್ಟಿಲೇರಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಿಸಿಸಿಐ ತಮಿಳುನಾಡು ಸೊಸೈಟೀಸ್ ರಿಜಿಸ್ಟ್ರೇಷನ್ ಕಾಯ್ದೆಯಡಿ ನೋಂದಾಯಿತವಾದ ಒಂದು ಸ್ವಾಯತ್ತ ಖಾಸಗಿ ಸಂಸ್ಥೆಯಾಗಿದೆ. ಇದು ಸಂವಿಧಾನ, ಸಂಸತ್ತು ಅಥವಾ ರಾಜ್ಯ ಶಾಸನಬದ್ಧವಾಗಿ ಸ್ಥಾಪಿತವಾಗಿಲ್ಲ ಮತ್ತು ಯಾವುದೇ ಸರ್ಕಾರಿ ಅಧಿಸೂಚನೆಯ ಮೂಲಕವೂ ಅಸ್ತಿತ್ವಕ್ಕೆ ಬಂದಿಲ್ಲ. ಕೇವಲ ಕಾನೂನಿನಡಿ ನೋಂದಣಿಯಾದ ಮಾತ್ರಕ್ಕೆ ಒಂದು ಖಾಸಗಿ ಸಂಸ್ಥೆಯು ಶಾಸನಬದ್ಧ ಪ್ರಾಧಿಕಾರವಾಗುವುದಿಲ್ಲ ಎಂದು ಮಾಹಿತಿ ಆಯೋಗವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಸುಪ್ರೀಂ ಕೋರ್ಟ್‌ನ ಹಳೆಯ ತೀರ್ಪುಗಳಾದ ‘ತಾಳಪ್ಪಲಂ ಸರ್ವೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ vs ಕೇರಳ ಸರ್ಕಾರ’ ಮತ್ತು ‘ಜೀ ಟೆಲಿಫಿಲ್ಮ್ಸ್ ಲಿಮಿಟೆಡ್ vs ಭಾರತ ಸರ್ಕಾರ’ ಪ್ರಕರಣಗಳನ್ನು ಆಯೋಗವು ಈ ಸಂದರ್ಭದಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಪಂಜಾಬ್‌ಗೆ ಸತತ 5ನೇ ಸೋಲು: ಕೋಚ್ ರಿಕಿ ಪಾಂಟಿಂಗ್‌ಗೆ ಪ್ರೀತಿ ಜಿಂಟಾ ತರಾಟೆ?

ಬಿಸಿಸಿಐ ತನ್ನ ಆದಾಯವನ್ನು ಮಾಧ್ಯಮ ಹಕ್ಕುಗಳು, ಪ್ರಾಯೋಜಕತ್ವ, ಟಿಕೆಟ್ ಮಾರಾಟ ಮತ್ತು ಇತರ ವಾಣಿಜ್ಯ ಚಟುವಟಿಕೆಗಳ ಮೂಲಕ ಸ್ವತಂತ್ರವಾಗಿ ಗಳಿಸುತ್ತಿದೆ. ಇದು ತನ್ನ ಕಾರ್ಯನಿರ್ವಹಣೆಗಾಗಿ ಸರ್ಕಾರದ ಯಾವುದೇ ಅನುದಾನವನ್ನು ಅವಲಂಬಿಸಿಲ್ಲ. ಸಂಸ್ಥೆಗೆ ಸಿಗುವ ತೆರಿಗೆ ವಿನಾಯಿತಿಗಳು ಅಥವಾ ಕ್ರೀಡಾಂಗಣಗಳಂತಹ ಮೂಲಸೌಕರ್ಯ ಸೌಲಭ್ಯಗಳನ್ನು ಆರ್‌ಟಿಐ ಕಾಯ್ದೆಯ ಅರ್ಥದಲ್ಲಿ ‘ಗಣನೀಯ ಆರ್ಥಿಕ ನೆರವು’ ಎನಿಸಿಕೊಳ್ಳುವುದಿಲ್ಲ. ಬಿಸಿಸಿಐ ಆಡಳಿತ, ಹಣಕಾಸು, ನಿರ್ವಹಣೆ ಮತ್ತು ಪದಾಧಿಕಾರಿಗಳ ಆಯ್ಕೆಯಲ್ಲಿ ಸರ್ಕಾರದ ಯಾವುದೇ ಪಾತ್ರ ಅಥವಾ ನಿಯಂತ್ರಣವಿಲ್ಲ ಎಂದು ಆಯುಕ್ತರಾದ ಪಿ.ಆರ್. ರಮೇಶ್ ವಿವರಿಸಿದ್ದಾರೆ. ರಾಷ್ಟ್ರೀಯ ತಂಡಕ್ಕೆ ಕ್ರಿಕೆಟ್ ಆಟಗಾರರನ್ನು ಆಯ್ಕೆ ಮಾಡುವುದು ‘ಸಾರ್ವಜನಿಕ ಕಾರ್ಯ’ವಾದರೂ, ಕಾನೂನಿನ ಪ್ರಕಾರ ಇದು ಆರ್‌ಟಿಐ ವ್ಯಾಪ್ತಿಗೆ ತರಲು ಸಾಕಾಗುವುದಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.

2018ರ ಅಕ್ಟೋಬರ್‌ನಲ್ಲಿ ಅಂದಿನ ಕೇಂದ್ರ ಮಾಹಿತಿ ಆಯುಕ್ತರಾಗಿದ್ದ ಎಂ. ಶ್ರೀಧರ್ ಆಚಾರ್ಯುಲು ಅವರು ಬಿಸಿಸಿಐ ಅನ್ನು ‘ಸಾರ್ವಜನಿಕ ಪ್ರಾಧಿಕಾರ’ ಎಂದು ಘೋಷಿಸಿ, ಆರ್‌ಟಿಐ ವ್ಯಾಪ್ತಿಗೆ ತಂದಿದ್ದರು. ಜೊತೆಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳನ್ನು ನೇಮಿಸುವಂತೆ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಬಿಸಿಸಿಐ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. 2025ರ ಸೆಪ್ಟೆಂಬರ್‌ನಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಬಿಸಿಸಿಐ ಆರ್‌ಟಿಐ ವ್ಯಾಪ್ತಿಗೆ ಬರುತ್ತದೆಯೋ ಇಲ್ಲವೋ ಎಂಬುದನ್ನು ಮರುಪರಿಶೀಲನೆ ನಡೆಸುವಂತೆ ಪ್ರಕರಣವನ್ನು ಕೇಂದ್ರ ಮಾಹಿತಿ ಆಯೋಗಕ್ಕೆ ಹಿಂತಿರುಗಿಸಿತ್ತು. ಇದೀಗ ಪ್ರಕರಣದ ಎಲ್ಲ ಆಯಾಮಗಳು ಹಾಗೂ ಅಂಕಿ-ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿರುವ ಆಯೋಗವು, ತನ್ನ ಹಿಂದಿನ (2018ರ) ಆದೇಶವನ್ನು ರದ್ದುಗೊಳಿಸಿ ಬಿಸಿಸಿಐ ಪರವಾಗಿ ಅಂತಿಮ ತೀರ್ಪು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...