ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ 2024-25ರಲ್ಲಿ ಭಾರತ ತಂಡದ ಹೀನಾಯ ಸೋಲಿನ ಹಿನ್ನೆಲೆ ಹಾಗೂ ಡ್ರೆಸ್ಸಿಂಗ್ ರೂಮ್‌ನ ಗೌಪ್ಯ ಮಾಹಿತಿ ಸೋರಿಕೆ ಹಿನ್ನೆಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡದ ಕೆಲ ಕೋಚ್‌ಗಳನ್ನು ತೆಗೆದುಹಾಕುವ ತ್ವರಿತ ಮತ್ತು ನಿರ್ಣಾಯಕ ಕ್ರಮವನ್ನು ಕೈಗೊಂಡಿದೆ.
ಎಂಟು ತಿಂಗಳ ಹಿಂದೆಯಷ್ಟೇ ನೇಮಕವಾಗಿದ್ದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.
ಅವರ ಜೊತೆಗೆ ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಮತ್ತು ಸ್ಟ್ರೆಂತ್ ಅಂಡ್ ಕಂಡೀಷನಿಂಗ್ ಕೋಚ್ ಸೋಹಂ ದೇಸಾಯಿ ಅವರನ್ನೂ ವಜಾ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ವಿನೋದ್ ಕಾಂಬ್ಳಿಗೆ ಆರ್ಥಿಕ ನೆರವು ನೀಡಿದ ಲಿಟಲ್ ಮಾಸ್ಟರ್
ಟಿ.ದಿಲೀಪ್ ಅವರ ಬದಲಿಗೆ, ಸಹಾಯಕ ತರಬೇತುದಾರ ರಿಯಾನ್ ಟೆನ್ ಡೋಸ್ಚೇಟ್ ಅವರಿಗೆ ಫೀಲ್ಡಿಂಗ್ ಜವಾಬ್ದಾರಿಗಳನ್ನು ತಾತ್ಕಾಲಿಕವಾಗಿ ನೀಡಲಾಗಿದೆ. ಸೋಹಂ ದೇಸಾಯಿ ಬದಲಿಗೆ ದಕ್ಷಿಣ ಆಫ್ರಿಕಾದ ತರಬೇತುದಾರ ಆಡ್ರಿಯನ್ ಲೆ ರೌಕ್ಸ್ ಗೆ ಫಿಟ್ನೆಸ್ ಜವಾಬ್ಧಾರಿಯನ್ನು ನೀಡಲಾಗಿದೆ.
ಜೂನ್ 20ರಂದು ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ ಹೊಸ ಸಿಬ್ಬಂದಿಗಳು ಭಾರತೀಯ ತಂಡವನ್ನು ಸೇರುವ ನಿರೀಕ್ಷೆಯಿದೆ. ಈ ಸಿಬ್ಬಂದಿ ಕಳಪೆ ಪ್ರದರ್ಶನದ ಜೊತೆ ಡ್ರೆಸ್ಸಿಂಗ್ ರೂಮ್ ಗೌಪ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ್ದರು.
ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಸಾರಥ್ಯದ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 3-1 ಅಂತರದಲ್ಲಿ ಸೋಲು ಅನುಭವಿಸಿತ್ತು.