ಟೀಂ ಇಂಡಿಯಾಗೆ ಬಿಸಿಸಿಐನಿಂದ 125 ಕೋಟಿ ರೂ. ಬಹುಮಾನ: ವಿರಾಟ್, ರೋಹಿತ್, ದ್ರಾವಿಡ್‌ಗೆ ಎಷ್ಟು?

Date:

ವೆಸ್ಟ್‌ ಇಂಡೀಸ್‌ನಲ್ಲಿ 2024ನೇ ಸಾಲಿನ ಟಿ20 ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 125 ಕೋಟಿ ರೂ. ಬಹುಮಾನ ಘೋಷಿಸಿದೆ.

- Advertisement -

15 ಮಂದಿ ಆಟಗಾರರು ಸೇರಿ ಒಟ್ಟು 42 ಮಂದಿಯ ತಂಡ ಟಿ20 ವಿಶ್ವಕಪ್‌ ಸಲುವಾಗಿ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ಗೆ ಪ್ರಯಾಣ ಬೆಳೆಸಿತ್ತು. ಆಟಗಾರರ ಹೊರತಾಗಿ ಕೋಚ್‌, ಸಹಾಯಕ ಸಿಬ್ಬಂದಿ ಮುಂತಾದವರು ಇದ್ದರು. ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನವು 42 ಮಂದಿಗೂ ಹಂಚಿಕೆಯಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಇದರಲ್ಲಿ ಟೀಂ ಇಂಡಿಯಾದ 15 ಮಂದಿಗೆ ತಲಾ ಐದೈದು ಕೋಟಿ ರೂ. ನಿಡಲಾಗಿದೆ. ಒಂದೂ ಪಂದ್ಯವನ್ನು ಆಡದವರು ಕೂಡ ಬಹುಮಾನದ ಹಣ ಪಡೆಯಲಿದ್ದಾರೆ.ಭಾರತ ತಂಡದ ಕೋಚ್‌ ರಾಹುಲ್ ದ್ರಾವಿಡ್ ಕೂಡ 5 ಕೋಟಿ ರೂ. ಪಡೆಯಲಿದ್ದಾರೆ.

15 ಆಟಗಾರರಲ್ಲದೆ ಮೀಸಲು ಆಟಗಾರರಾದ ಶುಭ್‌ಮನ್‌ ಗಿಲ್, ಆವೇಶ್ ಖಾನ್ ಹಾಗೂ ಖಲೀಲ್‌ ಅಹಮದ್‌ ಅವರಿಗೆ ಬಹುಮಾನದ ಮೊತ್ತದಲ್ಲಿ 1 ಕೋಟಿ ರೂ. ನೀಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಅಭಿಷೇಕ್ ಶರ್ಮಾ ದಾಖಲೆ ಶತಕ

ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಸಹಾಯಕ ಸಿಬ್ಬಂದಿಯಾದ ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋರ್, ಕ್ಷೇತ್ರ ರಕ್ಷಣೆ ಕೋಚ್ ಟಿ ದಿಲೀಪ್, ಬೌಲಿಂಗ್ ಕೋಚ್‌ ಪಾರಸ್‌ ಮಾಂಬ್ರೆ ತಲಾ 2.5 ಕೋಟಿ ರೂ. ಪಡೆಯಲಿದ್ದಾರೆ. ಅಜಿತ್‌ ಅಗರ್ಕರ್‌ ಒಳಗೊಂಡು ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ ಒಂದು ಕೋಟಿ ರೂ. ನೀಡಲಾಗುತ್ತದೆ.

ಬೆಂಬಲಿತ ಸಹಾಯಕ ಸಿಬ್ಬಂದಿಯಾದ ಮೂವರು ಫಿಜಿಯೋಥೆರಪಿಗಳು, ಮೂವರು ಥ್ರೋಡೌನ್‌ ಪರಿಣಿತರು, ಇಬ್ಬರು ಮಾಲೀಶುಗಾರರು ಹಾಗೂ ಸದೃಢತೆ, ನಿಯಂತ್ರಿಸುವ ಕೋಚ್‌ ತಲಾ 2 ಕೋಟಿ ರೂ. ಪಡೆಯಲಿದ್ದಾರೆ.

“ಆಟಗಾರರು ಹಾಗೂ ಬೆಂಬಲಿತ ಸಿಬ್ಬಂದಿ ಸೇರಿ ಪ್ರತಿಯೊಬ್ಬರಿಗೂ ಇನ್‌ವಾಯ್ಸ್ ನೀಡಿ ಬಹುಮಾನದ ಹಣ ಪಡೆಯುವಂತೆ ಸೂಚಿಸಲಾಗಿದೆ” ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ 11 ಕೋಟಿ ಬಹುಮಾನ ಘೋಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...