ಬೆಂಗಳೂರು | ‘ಐಪಿಎಲ್‌’ ಬೆಟ್ಟಿಂಗ್‌ ದಂಧೆ: ಬಿಜೆಪಿ ಕಾರ್ಯಕರ್ತನ ಬಂಧನ

Date:

2025ರ ಐಪಿಎಲ್‌ ಪಂದ್ಯಾವಳಿಯಲ್ಲಿ ಗುರುವಾರ ರಾತ್ರಿ ನಡೆದ ಆರ್‌ಸಿಬಿ ಮತ್ತು ಡಿಸಿ (ಡೆಲ್ಲಿ ಕ್ಯಾಪಿಟಲ್ಸ್‌) ನಡುವಿನ ಪಂದ್ಯದ ವೇಳೆ ಅಕ್ರಮವಾಗಿ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ತಂಡವೊಂದನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತರಲ್ಲಿ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತನೆಂದು ತಿಳಿದುಬಂದಿದೆ.

- Advertisement -

ಐಪಿಎಲ್‌ ಪಂದ್ಯದ ವೇಳೆ ಬೆಟ್ಟಿಂಗ್‌ ದಂಧೆಯಲ್ಲಿ ತೊಡಗಿದ್ದ ಆರು ಮಂದಿಯನ್ನು ಬೆಂಗಳೂರಿನ ಯಲಹಂಕ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಆರೋಪಿಗಳಿಂದ ಲ್ಯಾಪ್‌ಟಾಪ್‌ ಮತ್ತು ಇತರ ಕೆಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಬಂಧಿತರ ಪೈಕಿ, ವಿಜಯ್‌ ಕುಮಾರ್‌ ಎಂಬಾತನನ್ನು ಪ್ರಮುಖ ಆರೋಪಿಯೆಂದು ಗುರುತಿಸಲಾಗಿದೆ. ಆತ ಬಿಜೆಪಿ ಕಾರ್ಯಕರ್ತನೆಂದು ಹೇಳಲಾಗಿದೆ.

ವಿಜಯ್ ಕುಮಾರ್ ಮತ್ತು ಆತನ ಸಂಗಡಿಗರು ಯಲಹಂಕದ ಉದಯ್‌ ಡಾಬಾದಲ್ಲಿ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಡಾಬಾ ಮೇಲೆ ದಾಳಿ ಮಾಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ಐದು ಮಂದಿಯನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪ್ರಮುಖ ಆರೋಪಿಯಾದ ವಿಜಯ್ ಕುಮಾರ್‌ ಇನ್ನೂ ಪೊಲೀಸ್‌ ಠಾಣೆಯಲ್ಲಿಯೇ ಇದ್ದಾನೆ ಎಂದು ತಿಳಿದುಬಂದಿದೆ.

ಬಿಜೆಪಿ ಕಾರ್ಯಕರ್ತ, ಆರೋಪಿ ವಿಜಯ್ ಕುಮಾರ್ ಬಿಜೆಪಿಯ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಜೈಲಿನಿಂದ ಹೊರಬರಲು ಯತ್ನಿಸುತ್ತಿದ್ದಾನೆ ಎಂದೂ ಆರೋಪಿಸಲಾಗಿದೆ.

ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಯಲಹಂಕ ಪೊಲೀಸ್‌ ಠಾಣೆಗೆ ಈದಿನ.ಕಾಮ್ ಕರೆ ಮಾಡಿತ್ತು. ಆದರೆ, ಪೊಲೀಸ್ ಸಿಬ್ಬಂದಿಗಳು ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದು, ಇನ್ಸ್‌ಪೆಕ್ಟರ್‌ ಅವರನ್ನು ಸಂಪರ್ಕಿಸಬೇಕೆಂದು ಹೇಳಿದ್ದರು. ಇನ್ಸ್‌ಪೆಕ್ಟರ್‌ಗೆ ಕರೆ ಮಾಡಲಾಗಿದ್ದು, ಅವರು ಕರೆ ಸ್ವೀಕರಿಸಿಲ್ಲ. ಕರೆಗೆ ಇನ್ಸ್‌ಪೆಕ್ಟರ್‌ ಲಭ್ಯವಾದ ಬಳಿಕ, ಮತ್ತಷ್ಟು ಮಾಹಿತಿಯನ್ನು ಅಪ್‌ಡೇಟ್‌ ಮಾಡಲಾಗುವುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಅಟ್ಟಿಕಾ ಗೋಲ್ಡ್’ ಕಚೇರಿಗಳ ಮೇಲೆ ದಾಳಿ: ನಗದು, ಆಭರಣ ಜಪ್ತಿ

ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ...

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಸಂಜು ಬದಲು ವೈಭವ್‌ಗೆ ಅವಕಾಶ ನೀಡಿದ್ದೇಕೆ: ಕಠಿಣ ನಿರ್ಧಾರದ ಹಿಂದಿನ ಅನಿವಾರ್ಯತೆ ವಿವರಿಸಿದ ಗಂಭೀರ್

ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್...