ಬೆಂಗಳೂರಿನಲ್ಲಿ ಐಪಿಎಲ್‌ ಪಂದ್ಯಗಳನ್ನು ನಡೆಸಲು ಬಿಸಿಸಿಐಗೆ ಮನವಿ: ವೆಂಕಟೇಶ್ ಪ್ರಸಾದ್

Date:

ಈ ಬಾರಿಯ ಐಪಿಎಲ್ ಉದ್ಘಾಟನೆಯನ್ನು ಬೆಂಗಳೂರಿನಲ್ಲೇ ನಡೆಸಲು ಬಿಸಿಸಿಐಗೆ ಮನವಿ ಮಾಡಿದ್ದೇವೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.

- Advertisement -

ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ ಜೊತೆ ಮಾತುಕತೆ ನಡೆಸಿದ್ದೇನೆ. ಬಿಸಿಸಿಐ ಸಹ ಬೆಂಗಳೂರಿನಲ್ಲಿ ಈ ಬಾರಿಯ ಉದ್ಘಾಟನೆ ಪಂದ್ಯ ನಡೆಸಲು ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ತವರು ಮೈದಾನದಲ್ಲಿ ಉದ್ಘಾಟನೆ ಪಂದ್ಯ ನಡೆಯುತ್ತಿತ್ತು. ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಘಟನೆಯಿಂದ ಸಾಕಷ್ಟು ಗೊಂದಲಗಳಾಗಿತ್ತು. ಹೀಗಾಗಿ, ನಮ್ಮ ತಂಡ ಚುನಾವಣೆ ಗೆದ್ದ ಬಳಿಕ ಈಗಾಗಲೇ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದೇವೆ. ಸಿಎಂ-ಡಿಸಿಎಂ ಈಗಾಗಲೇ ಪಂದ್ಯಾವಳಿ ನಡೆಸಲು ಹಸಿರು ನಿಶಾನೆ ಕೊಟ್ಟಿದ್ದಾರೆ. ಗೃಹ ಸಚಿವರ ಜೊತೆ ಫೋನ್ ಮೂಲಕ ಮಾತನಾಡಿದ್ದೇನೆ. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯದ ದಿನಾಂಕ ನಿಗದಿಯಾಗಲಿದೆ. ಬೆಂಗಳೂರಿನಲ್ಲಿ ಐಪಿಎಲ್, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲ ಮಾದರಿಯ ಪಂದ್ಯಗಳು ನಡೆಯುತ್ತದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಚಿತ್ರಪಟಗಳಲ್ಲಿ ತೆಂಡೂಲ್ಕರ್- ಮೆಸ್ಸಿ ಅಪೂರ್ವ ಭೇಟಿಯ ಅವಿಸ್ಮರಣೀಯ ಕ್ಷಣಗಳು

ವಿಜಯ್ ಹಜಾರೆ ಪಂದ್ಯಕ್ಕೆ ವಿರಾಟ್ ಕೊಹ್ಲಿ ಬೆಂಗಳೂರಿಗೆ ಬರಲಿದ್ದಾರೆ. ಚಿನ್ನಸ್ವಾಮಿ ಸೇರಿದಂತೆ ಮೂರು ಕ್ರೀಡಾಂಗಣ ಬೆಂಗಳೂರಿನಲ್ಲಿದೆ. ಪಂದ್ಯ ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಎಲ್ಲ ಮಾತುಕತೆಗಳು ನಡೆಯುತ್ತಿವೆ. ಕಳೆದ ಮೂರು ವರ್ಷಗಳಿಂದ ಕ್ಲಬ್‌ನಲ್ಲಿ ಸಾಕಷ್ಟು ಗೊಂದಗಳಾಗಿತ್ತು. ಎಲ್ಲ ಗೊಂದಲಗಳನ್ನು ನಮ್ಮ ತಂಡ ಬಗೆಹರಿಸಿ ಉತ್ತಮ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೇವೆ ಎಂದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...