ಐಪಿಎಲ್‌ನಲ್ಲಿ ಮೊದಲ ಬಾರಿಗೆ ಆರ್‌ಸಿಬಿ ತಂಡ ಗೆದ್ದ ಹಿನ್ನೆಲೆಯಲ್ಲಿ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧರಿಸಿರುವ ಸರ್ಕಾರ ಸಿಐಡಿ ತನಿಖೆ ನಡೆಸಲು ಸರ್ಕಾರದ ಪ್ರಮಾಣ ಪತ್ರವನ್ನು ಹೈಕೋಟ್ ವರದಿಯನ್ನು ಸರ್ಕಾರ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ನಿನ್ನೆ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತದ ಪರಿಣಾಮ 11 ಜನ ಮೃತಪಟ್ಟ ಪ್ರಕರಣ ಸಂಬಂಧ ಇಂದು ಎಫ್‌ಐಆರ್ ದಾಖಲಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಪೊಲೀಸರು ಯುಡಿಆರ್ ದಾಖಲಿಸಿದ್ದರು. ಇದರ ಬೆನ್ನಲ್ಲೇ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನಿಗಳ ಅತಿರೇಕ ಮತ್ತು ಸರ್ಕಾರದ ಅವಿವೇಕ
ಕಬ್ಬನ್ ಪಾರ್ಕ್ ಪೊಲೀಸರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ), ಡಿಎನ್‌ಎ ನೆಟ್‌ವರ್ಕ್ಸ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸರು ಈ ಎಫ್‌ಐಆರ್ ದಾಖಲಿಸಿದ್ದಾರೆ, ಇದನ್ನು ಕೇಂದ್ರ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಶೇಖರ್ ಎಚ್ ತೆಕ್ಕಣ್ಣವರ್ ದೃಢಪಡಿಸಿದ್ದಾರೆ. ಇದನ್ನು ಸ್ವಯಂಪ್ರೇರಿತವಾಗಿ ದಾಖಲಿಸಲಾಗಿದ್ದು, ಕ್ರಿಮಿನಲ್ ನಿರ್ಲಕ್ಷ್ಯದ ಆರೋಪದ ಪ್ರಕರಣದಲ್ಲಿ ಹಲವಾರು ಸಂಸ್ಥೆಗಳನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ, ಇದರಲ್ಲಿ ಸೆಕ್ಷನ್ 105 (ಕೊಲೆಗೆ ಸಮನಾಗದ ಅಪರಾಧಿಕ ನರಹತ್ಯೆ), ಸೆಕ್ಷನ್ 125(12) (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳು), ಸೆಕ್ಷನ್ 142 (ಕಾನೂನುಬಾಹಿರ ಸಭೆ), ಸೆಕ್ಷನ್ 121 (ಅಪರಾಧಕ್ಕೆ ಪ್ರಚೋದನೆ), ಮತ್ತು ಸೆಕ್ಷನ್ 190 (ಸಾಮಾನ್ಯ ಉದ್ದೇಶಕ್ಕಾಗಿ ಮಾಡಿದ ಅಪರಾಧಗಳಿಗೆ ಕಾನೂನುಬಾಹಿರ ಸಭೆಯ ಸದಸ್ಯರ ಹೊಣೆಗಾರಿಕೆ) ಸೇರಿವೆ.