ಚಿನ್ನಸ್ವಾಮಿ ಸ್ಟೇಡಿಯಂ ದುರಂತ ಪ್ರಕರಣ ಸಿಐಡಿಗೆ ವಹಿಸಲು ಸಂಪುಟ ಸಭೆ ತೀರ್ಮಾನ

Date:

ಐಪಿಎಲ್‌ನಲ್ಲಿ ಮೊದಲ ಬಾರಿಗೆ ಆರ್‌ಸಿಬಿ ತಂಡ ಗೆದ್ದ ಹಿನ್ನೆಲೆಯಲ್ಲಿ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -

ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧರಿಸಿರುವ ಸರ್ಕಾರ ಸಿಐಡಿ ತನಿಖೆ ನಡೆಸಲು ಸರ್ಕಾರದ ಪ್ರಮಾಣ ಪತ್ರವನ್ನು ಹೈಕೋಟ್‌ ವರದಿಯನ್ನು ಸರ್ಕಾರ ಸಲ್ಲಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಿನ್ನೆ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತದ ಪರಿಣಾಮ 11 ಜನ ಮೃತಪಟ್ಟ ಪ್ರಕರಣ ಸಂಬಂಧ ಇಂದು ಎಫ್‌ಐಆರ್‌ ದಾಖಲಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಪೊಲೀಸರು ಯುಡಿಆರ್‌ ದಾಖಲಿಸಿದ್ದರು. ಇದರ ಬೆನ್ನಲ್ಲೇ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನಿಗಳ ಅತಿರೇಕ ಮತ್ತು ಸರ್ಕಾರದ ಅವಿವೇಕ

ಕಬ್ಬನ್‌ ಪಾರ್ಕ್‌ ಪೊಲೀಸರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ), ಡಿಎನ್‌ಎ ನೆಟ್‌ವರ್ಕ್ಸ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸರು ಈ ಎಫ್‌ಐಆರ್ ದಾಖಲಿಸಿದ್ದಾರೆ, ಇದನ್ನು ಕೇಂದ್ರ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಶೇಖರ್ ಎಚ್ ತೆಕ್ಕಣ್ಣವರ್ ದೃಢಪಡಿಸಿದ್ದಾರೆ. ಇದನ್ನು ಸ್ವಯಂಪ್ರೇರಿತವಾಗಿ ದಾಖಲಿಸಲಾಗಿದ್ದು, ಕ್ರಿಮಿನಲ್ ನಿರ್ಲಕ್ಷ್ಯದ ಆರೋಪದ ಪ್ರಕರಣದಲ್ಲಿ ಹಲವಾರು ಸಂಸ್ಥೆಗಳನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ, ಇದರಲ್ಲಿ ಸೆಕ್ಷನ್ 105 (ಕೊಲೆಗೆ ಸಮನಾಗದ ಅಪರಾಧಿಕ ನರಹತ್ಯೆ), ಸೆಕ್ಷನ್ 125(12) (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳು), ಸೆಕ್ಷನ್ 142 (ಕಾನೂನುಬಾಹಿರ ಸಭೆ), ಸೆಕ್ಷನ್ 121 (ಅಪರಾಧಕ್ಕೆ ಪ್ರಚೋದನೆ), ಮತ್ತು ಸೆಕ್ಷನ್ 190 (ಸಾಮಾನ್ಯ ಉದ್ದೇಶಕ್ಕಾಗಿ ಮಾಡಿದ ಅಪರಾಧಗಳಿಗೆ ಕಾನೂನುಬಾಹಿರ ಸಭೆಯ ಸದಸ್ಯರ ಹೊಣೆಗಾರಿಕೆ) ಸೇರಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...