ಬೆಂಗಳೂರು ದುರಂತ | ಕ್ರಿಕೆಟ್‌ ಸಂಸ್ಥೆಯ ಉನ್ನತ ಅಧಿಕಾರಿಗಳ ರಾಜೀನಾಮೆ

Date:

ಜೂನ್‌ 4ರಂದು ನಡೆದ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಘಟನೆಯ ‘ನೈತಿಕ ಹೊಣೆ’ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ (ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ್ ಮತ್ತು ಖಜಾಂಚಿ ಇ.ಎಸ್ ಜೈರಾಮ್ ರಾಜೀನಾಮೆ ನೀಡಿದ್ದಾರೆ.

- Advertisement -

“ಕಳೆದ ಎರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಮತ್ತು ದುರದೃಷ್ಟಕರ ಘಟನೆಗಳಿಂದಾಗಿ ಬಹಳಷ್ಟು ನೊಂದಿದ್ದೇವೆ. ನಮ್ಮ ಅಧಿಕಾರ ಮತ್ತು ಪಾತ್ರವು ತುಂಬಾ ಸೀಮಿತವಾಗಿದ್ದರೂ, ನೈತಿಕ ಜವಾಬ್ದಾರಿಯ ಕಾರಣದಿಂದಾಗಿ, ಕೆಎಸ್‌ಸಿಎ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ. ಅಸೋಸಿಯೇಷನ್‌ನ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇವೆ” ಎಂದು ಎ ಶಂಕರ್ ಮತ್ತು ಇ.ಎಸ್ ಜೈರಾಮ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬುಧವಾರ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ದುರಂತ ಘಟನೆ ಬೆನ್ನಲ್ಲೇ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆರ್‌ಸಿಬಿ ಫ್ರಾಂಸೈಸಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ವಜಾಗೊಳಿಸಲಾಗಿದೆ. ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಈ ಲೇಖನ ಓದಿದ್ದೀರಾ?: ಬೆಂಗಳೂರು ದುರಂತ | ಭೀಕರ ಘಟನೆಗೆ ಏನೆಲ್ಲ ಕಾರಣಗಳು– ಸಂಪೂರ್ಣ ವರದಿ

ದುರ್ಘಟನೆಯ ಬಳಿಕ ಕೆಎಸ್‌ಸಿಎ ಮತ್ತು ಆರ್‌ಸಿಬಿ ಮೃತ್ರಪಟ್ಟವರ ಸಂತ್ರಸ್ತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. “ಬುಧವಾರ, ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತುಂಬಾ ದುಃಖ ಮತ್ತು ನೋವನ್ನುಂಟು ಮಾಡಿದೆ” ಎಂದು ಆರ್‌ಸಿಬಿ ಹೇಳಿಕೊಂಡಿದೆ.

ಸದ್ಯ, ದುರಂತ ಘಟನೆಯ ಕುರಿತು ಮ್ಯಾಜಿಸ್ಟೀರಿಯಲ್ (ಜಿಲ್ಲಾಧಿಕಾರಿ ನೇತೃತ್ವದಲ್ಲಿ) ತನಿಖೆ ನಡೆಯುತ್ತಿದೆ. 15 ದಿನಗಳ ಒಳಗಾಗಿ ತನಿಖಾ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಆರ್‌ಸಿಬಿ ವಿರುದ್ಧ ಈವರೆಗೆ ಮೂರು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಆರ್‌ಸಿಬಿಯ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...