ಐಪಿಎಲ್‌ನಲ್ಲಿ ಮೋಸದಾಟದ ಘಾಟು: ಫ್ರಾಂಚೈಸಿ ತಂಡಗಳು, ಆಟಗಾರರಿಗೆ ಬಿಸಿಸಿಐ ಖಡಕ್‌ ಎಚ್ಚರಿಕೆ

Date:

Advertisements

ಇಂಡಿಯನ್ ಪ್ರೀಮಿಯರ್ ಲೀಗ್​ 18ರ ಆವೃತ್ತಿಯ 31 ಪಂದ್ಯಗಳು ಪೂರ್ಣಗೊಂಡಿದ್ದು, ಈ ನಡುವೆ ಮ್ಯಾಚ್‌ ಫಿಕ್ಸಿಂಗ್ ಪ್ರಯತ್ನ ನಡೆಸಲಾಗಿದೆ ಎಂಬ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಬಗ್ಗೆ ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ (ಎಸಿಎಸ್‌ಯು) ಈಗಾಗಲೇ ಲೀಗ್‌ನ ಎಲ್ಲ 10 ತಂಡಗಳ ಮಾಲೀಕರು, ಆಟಗಾರರು, ಕೋಚ್‌ಗಳು, ಸಹಾಯಕ ಸಿಬ್ಬಂದಿ ಹಾಗೂ ವೀಕ್ಷಕ ವಿವರಣೆಕಾರರಿಗೆ ಎಚ್ಚರಿಕೆ ನೀಡಿದೆ. ಯಾರಾದರೂ ತಮ್ಮನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ತಕ್ಷಣ ವರದಿ ಮಾಡಬೇಕೆಂದು ಸೂಚಿಸಲಾಗಿದೆ.

ಎಸಿಯುಸಿ ಪ್ರಕಾರ, ಪ್ರಸ್ತುತ ಟೂರ್ನಿಯಲ್ಲಿ ಭ್ರಷ್ಟಾಚಾರದ ಕರಿನೆರಳು ಆವರಿಸಿದೆ. ಇದಕ್ಕಾಗಿ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ, ತಂಡದ ಮಾಲೀಕರು ಮತ್ತು ವೀಕ್ಷಕರ ಕುಟುಂಬಗಳ ಸದಸ್ಯರ ಜೊತೆ ಅಭಿಮಾನಿಗಳಂತೆ ನಟಿಸಿ ದುಬಾರಿ ಉಡುಗೊರೆಗಳನ್ನು ನೀಡುವ ಮೂಲಕ ಅವರನ್ನು ಓಲೈಸುವ ಪ್ರಯತ್ನಗಳು ನಡೆಯುತ್ತಿವೆ. ಈ ಮೂಲಕ ಫಿಕ್ಸಿಂಗ್​ ನಡೆಸಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ.

ಮಾಧ್ಯಮವೊಂದರ ವರದಿಯ ಪ್ರಕಾರ, ಹೈದರಾಬಾದ್ ಮೂಲದ ಉದ್ಯಮಿಯೊಬ್ಬ ಪಂದ್ಯಾವಳಿಯಲ್ಲಿ ಭಾಗವಹಿಸುವವರೊಂದಿಗೆ ಐಪಿಎಲ್‌ನ ಎಲ್ಲರೊಂದಿಗೂ ಸ್ನೇಹ ಬೆಳೆಸಲು ಪ್ರಯತ್ನಿಸುತ್ತಿದ್ದಾನೆ. ಆದಾಗ್ಯೂ, ಅವರು ಯಾರೆಂಬುದನ್ನು ಬಹಿರಂಗಪಡಿಸಲಾಗಿಲ್ಲ. ಆದರೆ ಈ ಉದ್ಯಮಿ ಬುಕ್ಕಿಗಳೊಂದಿಗೆ ನೇರ ಸಂಪರ್ಕ ಹೊಂದಿದ್ದು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Advertisements

ಈ ಉದ್ಯಮಿಯು ಈ ಹಿಂದೆಯೂ ಇಂತಹ ಭ್ರಷ್ಟಾಚಾರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಹೀಗಾಗಿಯೇ ಇದೀಗ ಐಪಿಎಲ್‌ನೊಂದಿಗೆ ಸಂಬಂಧ ಹೊಂದಿರುವ ಪ್ರತಿಯೊಬ್ಬರಿಗೂ ಎಸಿಎಸ್‌ಯು ಎಚ್ಚರಿಕೆ ನೀಡಿದೆ. ಈ ಉದ್ಯಮಿ ಯಾವುದೇ ರೀತಿಯಲ್ಲಿ ಸಂಪರ್ಕಿಸಲು ಪ್ರಯತ್ನಿಸಿದರೆ ತಕ್ಷಣ ವರದಿ ಮಾಡುವಂತೆ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? IPL 2025: ಬ್ಯಾಟರ್‌ಗಳು ಅಳತೆ ಮೀರಿದ ಬ್ಯಾಟ್ ಬಳಸುತ್ತಿದ್ದಾರೆಯೇ? ಅಂಪೈರ್‌ಗಳು ಪರಿಶೀಲಿಸುವುದೇಕೆ?

ಈ ವ್ಯಕ್ತಿ ತನ್ನನ್ನು ತಾನು ಅಭಿಮಾನಿ ಎಂದು ಹೇಳಿಕೊಂಡು ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಮತ್ತು ಫ್ರಾಂಚೈಸ್ ಮಾಲೀಕರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿದ್ದಾನೆ. ಆತ ತಂಡಗಳು ಉಳಿದುಕೊಳ್ಳುವ ಹೋಟೆಲ್ ಮತ್ತು ಪಂದ್ಯಗಳ ವೇಳೆಯೂ ಕಾಣಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ ಈ ವೇಳೆ ಆಟಗಾರರನ್ನು ಅಥವಾ ಆಟಗಾರರಿಗೆ ಆಪ್ತರಾಗಿರುವವರನ್ನು ತನ್ನ ಖಾಸಗಿ ಔತನಕೂಟಗಳಿಗೆ ಆಹ್ವಾನಿಸುತ್ತಿದ್ದಾನೆ. ತಂಡದ ಸದಸ್ಯರಿಗೆ ಮಾತ್ರವಲ್ಲದೆ ಅವರ ಕುಟುಂಬಗಳಿಗೂ ಉಡುಗೊರೆಗಳನ್ನು ನೀಡಿ ಅವರೊಂದಿಗೆ ಆಪ್ತತೆ ಬೆಳೆಸಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದು ಹೇಳಲಾಗಿದೆ.

ಈತ ಅಭಿಮಾನಿಯಂತೆ ನಟಿಸುತ್ತಾ, ಅವರು ಆಟಗಾರರು, ತರಬೇತುದಾರರು ಮತ್ತು ವೀಕ್ಷಕ ವಿವರಣೆಗಾರರ ​​ಕುಟುಂಬ ಸದಸ್ಯರನ್ನು ಆಭರಣ ಅಂಗಡಿಗಳು ಮತ್ತು ದುಬಾರಿ ಹೋಟೆಲ್‌ಗಳಿಗೆ ಕರೆದೊಯ್ಯಲು ಮುಂದಾಗುತ್ತಿದ್ದಾನೆ. ಇಷ್ಟು ಮಾತ್ರವಲ್ಲದೆ, ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ವಿದೇಶದಲ್ಲಿ ವಾಸಿಸುವ ಐಪಿಎಲ್​ಗೆ ಸಂಬಂಧಪಟ್ಟಿರುವ ಸಂಬಂಧಿಕರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಹೀಗಾಗಿಯೇ ಸಿಸಿಐನ ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ ಲೀಗ್‌ನ ಎಲ್ಲ 10 ತಂಡಗಳಿಗೆ ಎಚ್ಚರಿಕೆ ನೀಡಿದೆ.

2013 ರಲ್ಲಿ ಐಪಿಎಲ್​ನಲ್ಲಿ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಗಳು ನಡೆದಿದ್ದವು. ಈ ಸಂಬಂಧ ಕ್ರಿಕೆಟಿಗರಾದ ಶ್ರೀಶಾಂತ್ , ಅಜಿತ್ ಚಾಂಡಿಲಾ ಮತ್ತು ಅಂಕಿತ್ ಚವಾಣ್ ಅವರನ್ನು ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಬಂಧಿಸಲಾಗಿತ್ತು. ಅಲ್ಲದೆ ಫಿಕ್ಸಿಂಗ್ ಸಾಬೀತಾದ ಹಿನ್ನಲೆಯಲ್ಲಿ 2016 ಮತ್ತು 2017 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು 2 ವರ್ಷಗಳ ಕಾಲ ನಿಷೇಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X