ಪದ್ಮಶ್ರೀಗೆ ಆಯ್ಕೆಯಾದ ಬೆನ್ನಲ್ಲೇ ಡಬಲ್ಸ್‌ನಲ್ಲಿ ಆಸ್ಟ್ರೇಲಿಯನ್‌ ಓಪನ್ ಪ್ರಶಸ್ತಿ ಗೆದ್ದ ರೋಹನ್ ಬೋಪಣ್ಣ

Date:

ಭಾರತದ ಗಣರಾಜ್ಯೋತ್ಸವದ ಸಮಯದಲ್ಲಿ ಘೋಷಿಸಲಾಗುವ ಪದ್ಮಶ್ರೀ ಪ್ರಶಸ್ತಿಗೆ ಕನ್ನಡಿಗ ರೋಹನ್ ಬೋಪಣ್ಣ ಆಯ್ಕೆಯಾದ ಬೆನ್ನಲ್ಲೇ, ಆಸ್ಟ್ರೇಲಿಯನ್‌ ಓಪನ್‌ನ ಪುರುಷರ ಡಬಲ್ಸ್‌ ಫೈನಲ್‌ ಪಂದ್ಯದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ.

- Advertisement -

ಪದ್ಮಶ್ರೀ ಪ್ರಶಸ್ತಿಯ ಖುಷಿಯಲ್ಲಿರುವಾಗಲೇ 43 ವರ್ಷದ ವಿಶ್ವದ ನಂ.1 ಡಬಲ್ಸ್‌ ಆಟಗಾರ ರೋಹನ್‌ ಬೋಪಣ್ಣ, ಮೊಟ್ಟಮೊದಲ ಬಾರಿಗೆ ಗ್ರ್ಯಾಂಡ್‌ ಸ್ಲ್ಯಾಮ್ ಡಬಲ್ಸ್‌ ಚಾಂಪಿಯನ್ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಶನಿವಾರ ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್‌ ಓಪನ್‌ನ ಪುರುಷರ ಡಬಲ್ಸ್‌ ಫೈನಲ್‌ ಪಂದ್ಯದಲ್ಲಿ 43 ವರ್ಷದ ರೋಹನ್‌ ಬೋಪಣ್ಣ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೋಡಿ 7-6, 7-5 ರಿಂದ ಇಟಲಿಯ ಜೋಡಿ ಸಿಮೋನ್‌ ಬೊಲ್ಲೆಲಿ ಹಾಗೂ ಆಂಡ್ರೆಯಾ ವಿವಾಸ್ಸೋರಿ ಜೋಡಿಯನ್ನು ಸೋಲಿಸುವ ಮೂಲಕ ಪ್ರಶಸ್ತಿ ಜಯಿಸಿತು. ಈ ಗೆಲುವಿನೊಂದಿಗೆ ಅವರು 2 ಕೋಟಿ ರೂಪಾಯಿ ಬಹುಮಾನ ಜಯಿಸಿದ್ದಾರೆ.

ರೋಹನ್‌ ಬೋಪಣ್ಣ ಹಾಗೂ ಮ್ಯಾಥ್ಯೂ ಎಬ್ಡನ್‌ ತಂಡವಾಗಿ ಗೆದ್ದ ಮೊದಲ ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಇದಾಗಿದೆ. ಇದು ರೋಹನ್‌ ಬೋಪಣ್ಣ ಅವರ ಮೊಟ್ಟಮೊದಲ ಗ್ರ್ಯಾಂಡ್‌ ಸ್ಲಾಂ ಡಬಲ್ಸ್‌ ಪ್ರಶಸ್ತಿಯಾಗಿದೆ.

ಇದಕ್ಕೂ ಮುನ್ನ ರೋಹನ್‌ ಬೋಪಣ್ಣ ಪುರುಷರ ಡಬಲ್ಸ್‌ನಲ್ಲಿ ಎರಡು ಬಾರಿ ಯುಎಸ್‌ ಓಪನ್‌ ಫೈನಲ್‌ಗೇರಿದ್ದೇ ಅವರ ಶ್ರೇಷ್ಠ ಸಾಧನೆಯಾಗಿತ್ತು. 2010 ಹಾಗೂ 2023ರ ಯುಎಸ್‌ ಓಪನ್‌ ಪುರುಷರ ಡಬಲ್ಸ್‌ನಲ್ಲಿ ಅವರು ರನ್ನರ್‌ಅಪ್‌ ಆಗಿದ್ದರು. 2010ರಲ್ಲಿ ಪಾಕಿಸ್ತಾನದ ಐಸಾಮ್‌ ಉಲ್‌ ಹಕ್‌ ಖುರೇಷಿ ಅವರ ಜೊತೆಗೂಡಿ ರನ್ನರ್‌ಅಪ್‌ ಆಗಿದ್ದರೆ, 2023ರಲ್ಲಿ ಎಬ್ಡೆನ್‌ ಜೊತೆಗೂಡಿ ರನ್ನರ್‌ ಅಪ್‌ ಆಗಿದ್ದರು.

ಇದನ್ನು ಓದಿದ್ದೀರಾ? ಮೊದಲ ಟೆಸ್ಟ್‌ 3ನೇ ದಿನ | ‘ಪೋಪ್‌’ ಶತಕದಾಟದಿಂದ ‘ಹೋಪ್’ ಪಡೆದುಕೊಂಡ ಇಂಗ್ಲೆಂಡ್: 126 ರನ್‌ ಮುನ್ನಡೆ

ಇತ್ತೀಚೆಗಷ್ಟೇ ಪುರುಷರ ಡಬಲ್ಸ್‌ ವಿಭಾಗದಲ್ಲಿ ರೋಹನ್‌ ಬೋಪಣ್ಣ ವಿಶ್ವ ನಂ.1 ಆಟಗಾರ ಎನಿಸಿಕೊಂಡಿದ್ದರು. ಇದು ರೋಹನ್‌ ಬೋಪಣ್ಣ ಅವರ 2ನೇ ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿಯಾಗಿದೆ. ಇದಕ್ಕೂ ಮುನ್ನ 2017ರಲ್ಲಿ ಕೆನಡಾದ ಗ್ಯಾಬ್ರಿಯೆಲಾ ದೆಬ್ರೋವಸ್ಕಿ ಜೊತೆಗೂಡಿ ಅವರು ಫ್ರೆಂಚ್‌ ಓಪನ್‌ ಮಿಶ್ರ ಡಬಲ್ಸ್ ಪ್ರಶಸ್ತಿ ಜಯಿಸಿದ್ದರು.

ಸಿಎಂ ಸಿದ್ದರಾಮಯ್ಯ ಅಭಿನಂದನೆ

 

“ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಹೆಮ್ಮೆ ಮೂಡಿಸಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿರುವುದು ವಿಶೇಷ. ವಯಸ್ಸು ಬರೀ ಅಂಕಿಗಳಿಗಷ್ಟೇ ಸೀಮಿತ, ಸಾಧನೆಯ ಹಂಬಲ ದೊಡ್ಡದೆಂಬ ಮಾತು ಇವರ ಆಟ ನೋಡಿದವರಿಗೆ ಅನ್ನಿಸದೆ ಇರಲಾರದು. ಇಂತಹ ಇನ್ನಷ್ಟು ದಾಖಲೆಗಳು ರೋಹನ್ ಬೋಪಣ್ಣನವರಿಂದ ಮೂಡಿಬರಲೆಂದು ಆಶಿಸುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಒಎ ಚುನಾವಣೆ ವಿವಾದ: ಭಾರತದ ಒಲಿಂಪಿಕ್ ಪ್ರತಿಷ್ಠೆಗೆ ಧಕ್ಕೆ, ಐಒಸಿ ತೀವ್ರ ಕಳವಳ

ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಚುನಾವಣಾ ಪ್ರಕ್ರಿಯೆಯಲ್ಲಿ ಮತ್ತೆ ಭುಗಿಲೆದ್ದಿರುವ ಆಂತರಿಕ...

ಅಂಡರ್-19 ಏಷ್ಯಾಕಪ್ ಫೈನಲ್: ಪ್ರಶಸ್ತಿಗಾಗಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕ್‌ ಮುಖಾಮುಖಿ

ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ...

2ನೇ ಏಕದಿನ: ಡಿಎಲ್ಎಸ್ ನಿಯಮದಡಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ಜಯ

ಮಳೆಯಿಂದಾಗಿ ಅಡಚಣೆ ಎದುರಾದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ...