ಬಜರಂಗ್ ಪುನಿಯಾ, ವಿನೇಶ್ ಫೋಗಟ್ಗೆ ಏಷ್ಯನ್ ಗೇಮ್ಸ್‌ನಲ್ಲಿ ನೇರ ಪ್ರವೇಶಾವಕಾಶ ಕಲ್ಪಿಸಿದ್ದ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶನಿವಾರ ವಜಾಗೊಳಿಸಿದೆ.
ಆ ಮೂಲಕ ಒಲಿಂಪಿಕ್ ಅಸೋಸಿಯೇಷನ್‌ನ ನಿರ್ಧಾರವನ್ನು ನ್ಯಾಯಾಲಯವು ಎತ್ತಿಹಿಡಿದಿದೆ.
ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ಅವರು ‘ಟ್ರಯಲ್ಸ್’ ಮಾಡದೆ, ನೇರವಾಗಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಒಲಿಂಪಿಕ್ ಅಸೋಸಿಯೇಷನ್ ಅವಕಾಶ ಮಾಡಿಕೊಟ್ಟಿದ್ದನ್ನು ಪ್ರಶ್ನಿಸಿ, ಈ ಅರ್ಜಿಯನ್ನು ಸಲ್ಲಿಸಲಾಗಿತ್ತು. ಕುಸ್ತಿಪಟುಗಳಾದ ಆಂಟಿಮ್ ಪಂಘಲ್ ಮತ್ತು ಸುಜೀತ್ ಕಲ್ಕಲ್ ಅವರು ಪ್ರಶ್ನಿಸಿ, ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಆದರೆ ಈ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶನಿವಾರ ವಜಾಗೊಳಿಸಿದೆ.
ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಅವರು ಬಿಜೆಪಿ ಸಂಸದ, ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು.