BREAKING NEWS | ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ

Date:

ತವರು ನೆಲದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆಲುವಿನ ನಗೆ ಬೀರಿದೆ.

- Advertisement -

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು, 140 ರನ್‌ಗಳ ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಮಣಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆತಿಥೇಯ ಟೀಂ ಇಂಡಿಯಾ ಮೊದಲ ಟೆಸ್ಟ್‌ನಲ್ಲೇ ಗೆಲುವಿನ ಮೂಲಕ ವೆಸ್ಟ್ ಇಂಡೀಸ್ ವಿರುದ್ಧ ಬಿಗಿ ಹಿಡಿತ ಸಾಧಿಸಿದೆ. ರವೀಂದ್ರ ಜಡೇಜಾ ಅವರ ಆಲ್ರೌಂಡ್ ಪ್ರದರ್ಶನ (ಅಜೇಯ 104 ರನ್ ಮತ್ತು 4 ವಿಕೆಟ್) ಹಾಗೂ ಮೊಹಮ್ಮದ್ ಸಿರಾಜ್ ಅವರ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಭಾರತದ ಗೆಲುವು ಸುಲಭವಾಯಿತು.

ಈ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಕೆರೆಬಿಯನ್​ ಪಡೆ ಸಿರಾಜ್ ಮತ್ತು ಬುಮ್ರಾ ಬೌಲಿಂಗ್‌ ದಾಳಿಗೆ ಸಿಲುಕಿ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 162 ರನ್‌ಗಳಿಗೆ ಆಲೌಟ್ ಅಯ್ತು. ವೇಗಿ ಸಿರಾಜ್ 14 ಓವರ್‌ಗಳಲ್ಲಿ 40 ರನ್​ ನೀಡಿ ನಾಲ್ಕು ವಿಕೆಟ್‌ಗಳನ್ನು ಪಡೆದರೆ, ಬುಮ್ರಾ 42 ರನ್​ ಬಿಟ್ಟುಕೊಟ್ಟು ಮೂರು ವಿಕೆಟ್‌ಗಳನ್ನು ಕಬಳಿಸಿದರು. ಕುಲ್ದೀಪ್ ಎರಡು ವಿಕೆಟ್‌, ವಾಷಿಂಗ್ಟನ್​ ಸುಂದರ್ ಒಂದು ವಿಕೆಟ್ ಪಡೆದುಕೊಂಡರು.

ಮೊದಲ ದಿನವೇ ವೆಸ್ಟ್​ ಇಂಡೀಸ್​ಗೆ ಆಲೌಟ್​ ಮಾಡಿ ಬ್ಯಾಟಿಂಗ್​ಗೆ ಬಂದ ಭಾರತ ದಿನದಾಟದ ಅಂತ್ಯಕ್ಕೆ 2 ವಿಕೆಟ್​ ನಷ್ಟಕ್ಕೆ 121 ರನ್​ಗಳನ್ನು ಕಲೆಹಾಕಿತು. ನಂತರ ಎರಡನೇ ದಿನದಂದು ಭಾರತದ ಪರ ಕೆಎಲ್​ ರಾಹುಲ್​ (100), ಧ್ರುವ್​ ಜುರೇಲ್​ (125), ರವೀಂದ್ರ ಜಡೇಜಾ (104*) ಶತಕ ಸಿಡಿಸಿದರೇ, ನಾಯಕ ಗಿಲ್​ ಅರ್ಧಶತಕ ಸಿಡಿಸಿದರು. ಇದರಿಂದಾಗಿ ಭಾರತ 5 ವಿಕೆಟ್​ ನಷ್ಟಕ್ಕೆ 448 ರನ್​ ಗಳಿಸಿ 286 ರನ್​ಗಳ ಮುನ್ನಡೆಯೊಂದಿಗೆ ಎರಡನೇ ದಿನದಾಟ ಕೊನೆಗೊಳಿಸಿತು. ಮೂರನೇ ದಿನವಾದ ಇಂದು ಭಾರತ ಬ್ಯಾಟಿಂಗ್​ ಮಾಡದೇ ಡಿಕ್ಲೇರ್​ ಘೋಷಣೆ ಮಾಡಿತು.

WhatsApp Image 2025 10 04 at 1.57.35 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...