BREAKING NEWS | ಈ ಬಾರಿಯೂ ‘ಕಪ್ ನಮ್ದೇ’ ಎಂದ ಆರ್‌ಸಿಬಿ: ಗುಜರಾತ್ ಮಣಿಸಿ ಸತತ 2ನೇ ಬಾರಿ IPL ಕಿರೀಟ

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಬೌಲರ್‌ಗಳ ಶಿಸ್ತುಬದ್ಧ ಹಾಗೂ ಕರಾರುವಕ್ಕಾದ ದಾಳಿ ಮತ್ತು ವಿರಾಟ್ ಕೊಹ್ಲಿ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಗುಜರಾತ್ ಟೈಟನ್ಸ್ ತಂಡವನ್ನು 5 ವಿಕೆಟ್‌ಗಳ ಅಂತರದಿಂದ ಮಣಿಸಿದ ಆರ್‌ಸಿಬಿ, ಸತತ ಎರಡನೇ ಬಾರಿ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡು ಇತಿಹಾಸ ಬರೆದಿದೆ. ಈ ಮೂಲಕ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಕೋಟ್ಯಂತರ ಅಭಿಮಾನಿಗಳ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

- Advertisement -

ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 156 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ 18 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸ್ಫೋಟಕ ಆಟವಾಡಿ ಕೇವಲ 42 ಎಸೆತಗಳಲ್ಲಿ 75 ರನ್ ಸಿಡಿಸುವ ಮೂಲಕ ಗೆಲುವನ್ನು ಸುಲಭಗೊಳಿಸಿದರು. ವಿರಾಟ ಅವರ ಆಟದಲ್ಲಿ 8 ಬೌಂಡರಿ ಹಾಗೂ 3 ಅಮೋಘ ಸಿಕ್ಸರ್‌ಗಳಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಆರ್‌ಸಿಬಿ ತೋರಿದ ಈ ಸಂಘಟಿತ ಪ್ರದರ್ಶನವೇ ಫೈನಲ್‌ನಲ್ಲಿನ ಈ ಏಕಪಕ್ಷೀಯ ಗೆಲುವಿಗೆ ಕಾರಣವಾಯಿತು. ಒತ್ತಡದ ಪಂದ್ಯದಲ್ಲಿ ನಾಯಕನ ಅತ್ಯುತ್ತಮ ಬೌಲಿಂಗ್ ಬದಲಾವಣೆ ತಂತ್ರಗಳು ಹಾಗೂ ಮೈದಾನದಲ್ಲಿ ಆಟಗಾರರ ಚುರುಕಿನ ಫೀಲ್ಡಿಂಗ್ ಎದುರಾಳಿಗಳನ್ನು ಸಂಪೂರ್ಣವಾಗಿ ಕಟ್ಟಿಹಾಕಿತು. ಈ ಗೆಲುವು ಕೇವಲ ತಂಡದ ಆಟಗಾರರದ್ದಲ್ಲ, ತಂಡವನ್ನು ಸದಾ ಬೆಂಬಲಿಸುತ್ತಾ ಬಂದಿರುವ ಕೋಟ್ಯಂತರ ಕನ್ನಡಿಗರ ಹಾಗೂ ಅಭಿಮಾನಿಗಳ ವಿಶ್ವಾಸದ ಗೆಲುವಾಗಿ ಹೊರಹೊಮ್ಮಿದೆ.

ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ಗುಜರಾತ್ ಟೈಟನ್ಸ್ ತಂಡವು, ಆರ್‌ಸಿಬಿಯ ಶಿಸ್ತುಬದ್ಧ ಹಾಗೂ ಮಾರಕ ಬೌಲಿಂಗ್ ದಾಳಿಗೆ ಸಂಪೂರ್ಣವಾಗಿ ನಲುಗಿತು. ಆರ್‌ಸಿಬಿ ಬೌಲರ್‌ಗಳ ಕರಾರುವಕ್ಕಾದ ದಾಳಿಯನ್ನು ಎದುರಿಸಲಾಗದೆ ಪರದಾಡಿದ ಗುಜರಾತ್, ಅಂತಿಮವಾಗಿ 155 ರನ್‌ಗಳ ಸಾಧಾರಣ ಗುರಿಯನ್ನು ನೀಡಲಷ್ಟೇ ಶಕ್ತವಾಯಿತು. ಮಧ್ಯಮ ಕ್ರಮಾಂಕದಲ್ಲಿ ಕೆಲ ಬ್ಯಾಟರ್‌ಗಳು ತಂಡಕ್ಕೆ ಆಸರೆಯಾಗುವ ಪ್ರಯತ್ನ ಮಾಡಿದರೂ, ದೊಡ್ಡ ಮೊತ್ತ ಪೇರಿಸುವಲ್ಲಿ ಅವರು ವಿಫಲರಾದದ್ದು ಗುಜರಾತ್ ಹಿನ್ನಡೆಗೆ ಪ್ರಮುಖ ಕಾರಣವಾಯಿತು.

ನಾಯಕ ರಜತ್‌ ಪಾಟೀದಾರ್ ಈ ತಂತ್ರವನ್ನು ಸಂಪೂರ್ಣವಾಗಿ ಸಮರ್ಥಿಸಿಕೊಂಡ ಆರ್‌ಸಿಬಿ ಬೌಲರ್‌ಗಳು, ಆರಂಭದಿಂದಲೇ ಗುಜರಾತ್ ಟೈಟನ್ಸ್ ಬ್ಯಾಟರ್‌ಗಳ ಮೇಲೆ ಸವಾರಿ ಮಾಡಿದರು. ರನ್ ಗಳಿಸಲು ಪರದಾಡಿದ ಗುಜರಾತ್, ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

ಆರ್‌ಸಿಬಿ ಪರ ಅತ್ಯುತ್ತಮ ಬೌಲಿಂಗ್ ದಾಳಿ ಸಂಘಟಿಸಿದ ಭುವನೇಶ್ವರ್ 29/2, ಜೋಷ್ ಹೇಝಲ್‌ವುಡ್ 37/2, ರಸಿಖ್ ಸಲಾಮ್ ದಾರ್ 27/3, ಗುಜರಾತ್ ಪಡೆಯ ರನ್ ವೇಗಕ್ಕೆ ಸಂಪೂರ್ಣ ಬ್ರೇಕ್ ಹಾಕಿದರು. ಇವರ ನಿಖರ ದಾಳಿಗೆ ಗುಜರಾತ್ ತಂಡದ ಬ್ಯಾಟರ್‌ಗಳು ತಬ್ಬಿಬ್ಬಾದರು. ಈ ಹಂತದಲ್ಲಿ ಜವಾಬ್ದಾರಿಯುತ ಆಟವಾಡಿದ ವಾಷಿಂಗ್ಟನ್ ಸುಂದರ್, 37 ಎಸೆತಗಳಲ್ಲಿ 50 ರನ್ ಗಳಿಸಿ ಅಜೇಯರಾಗುಳಿಯುವ ಮೂಲಕ ತಂಡದ ಮೊತ್ತವನ್ನು ಗೌರವಾನ್ವಿತ ಸ್ಥಿತಿಗೆ ತರುವ ಪ್ರಯತ್ನ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...