ರಿಲಯನ್ಸ್ ಜೊತೆ ಐಒಎ ‘ದೋಷಪೂರಿತ’ ಒಪ್ಪಂದದಿಂದಾಗಿ 24 ಕೋಟಿ ರೂ. ನಷ್ಟ: ಸಿಎಜಿ ವರದಿ

Date:

ರಿಲಯನ್ಸ್ ಇಂಡಿಯಾ ಲಿಮಿಟೆಡ್ (ಆರ್‌ಐಎಲ್) ಜೊತೆ ಪಿಟಿ ಉಷಾ ಅಧ್ಯಕ್ಷರಾಗಿರುವ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ನಡೆಸಿದ ದೋಷಪೂರಿತ ಒಪ್ಪಂದದಿಂದಾಗಿ ಸಂಸ್ಥೆಗೆ ಬರೋಬ್ಬರಿ 24 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಭಾರತದ ನಿಯಂತ್ರಕರು ಮತ್ತು ಮಹಾ ಲೇಖಪಾಲರ (ಸಿಎಜಿ) ವರದಿಯಿಂದ ಬಹಿರಂಗವಾಗಿದೆ.

- Advertisement -

2022ರ ಆಗಸ್ಟ್ 1ರಂದು ಆರ್‌ಐಎಲ್‌ ಪರವಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ಒಪ್ಪಂದವು 2022 ಮತ್ತು 2026ರ ಏಷ್ಯನ್ ಗೇಮ್ಸ್, 2022 ಮತ್ತು 2026 ಕಾಮನ್‌ವೆಲ್ತ್ ಗೇಮ್ಸ್, 2024 ಪ್ಯಾರಿಸ್ ಒಲಿಂಪಿಕ್ಸ್ ಮತ್ತು 2028 ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಅಧಿಕೃತ ಪ್ರಧಾನ ಪಾಲುದಾರ ಸ್ಥಾನಮಾನವನ್ನು ರಿಲಯನ್ಸ್ ಸಂಸ್ಥೆಗೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅದಾದ ಬಳಿಕ 2023ರ ಡಿಸೆಂಬರ್ 5ರಂದು ಒಪ್ಪಂದದ ಮೊತ್ತವನ್ನು ಹೆಚ್ಚಿಸದೆಯೇ ಒಪ್ಪಂದವನ್ನು ತಿದ್ದುಪಡಿ ಮಾಡಲಾಗಿದೆ. 2026 ಮತ್ತು 2030ರ ಚಳಿಗಾಲದ ಒಲಿಂಪಿಕ್ ಕ್ರೀಡಾಕೂಟಗಳು, ಹಾಗೆಯೇ 2026 ಮತ್ತು 2030 ಯೂತ್ ಒಲಿಂಪಿಕ್ ಕ್ರೀಡಾಕೂಟಗಳ ಪಾಲುದಾರಿಯನ್ನು ಕೂಡಾ ಒಪ್ಪಂದದಲ್ಲಿ ಸೇರಿಸಲಾಗಿದೆ.

ಇದನ್ನು ಓದಿದ್ದೀರಾ? ಒಪ್ಪಿಗೆಯಿಲ್ಲದೆ ಆಸ್ಪತ್ರೆಯಲ್ಲಿ ಫೋಟೋ ತೆಗೆದಿದ್ದಾರೆ, ಬೆಂಬಲ ಮಾತ್ರ ನೀಡಿಲ್ಲ: ಪಿಟಿ ಉಷಾ ವಿರುದ್ಧ ವಿನೇಶ್ ಕಿಡಿ

ಸಿಎಜಿ ವರದಿಯ ಪ್ರಕಾರ ಇನ್ನೂ ನಾಲ್ಕು ಪಂದ್ಯಗಳ ಪಾಲುದಾರಿಕೆಯನ್ನು ನೀಡಲಾಗಿದ್ದರೂ ಕೂಡಾ ಒಪ್ಪಂದದ ಮೊತ್ತ ಮಾತ್ರ ಬದಲಾಗಿಲ್ಲ, 35 ಕೋಟಿ ರೂಪಾಯಿಯೇ ಆಗಿದೆ. ಪ್ರತಿ ಪಂದ್ಯಕ್ಕೆ ಆರು ಕೋಟಿ ರೂಪಾಯಿಯಂತೆ ಲೆಕ್ಕ ಹಾಕಿದರೂ 59 ರೂಪಾಯಿಗೆ ಒಪ್ಪಂದದ ಮೊತ್ತವನ್ನು ಪರಿಷ್ಕರಣೆ ಮಾಡಬೇಕಾಗಿತ್ತು. ಇದರಿಂದಾಗಿ 24 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಸಿಎಜಿ ವರದಿ ಉಲ್ಲೇಖಿಸಿದೆ.

ಇನ್ನು ಒಪ್ಪಂದಕ್ಕೆ ಸಂಬಂಧಿಸಿದಂತೆ ಸಿಎಜಿ ವರದಿ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಐಒಎ ಅಧ್ಯಕ್ಷೆ ಪಿಟಿ ಉಷಾ ಅವರಿಗೆ ತಿಳಿಸಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಿಟಿ ಉಷಾ ಅವರ ಕಾರ್ಯನಿರ್ವಾಹಕ ಸಹಾಯಕ ಅಜಯ್ ಕುಮಾರ್ ನಾರಂಗ್, ಮೂಲ ಟೆಂಡರ್‌ನಲ್ಲಿನ ದೋಷದಿಂದಾಗಿ ಮರು ಒಪ್ಪಂದ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಐಒಎ ಖಜಾಂಚಿ ಸಹದೇವ್ ಯಾದವ್ ಅವರು ಒಪ್ಪಂದದ ತಿದ್ದುಪಡಿಯ ಸಮಯದಲ್ಲಿ ಕಾರ್ಯಕಾರಿ ಮಂಡಳಿ ಮತ್ತು ಪ್ರಾಯೋಜಕತ್ವ ಸಮಿತಿಯೊಂದಿಗೆ ಸಮಾಲೋಚನೆ ಸರಿಯಾಗಿ ನಡೆದಿಲ್ಲ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ. ಆರ್‌ಐಎಲ್‌ಗೆ ಲಾಭವಾಗುವಂತೆ ಬದಲಾವಣೆಗಳನ್ನು ಮಾಡಿರುವುದು ಯಾರು ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...