ಪಾಕ್ ವಿರುದ್ಧ ಭರ್ಜರಿ ಶತಕ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆದ ‘ಕಿಂಗ್ ಕೊಹ್ಲಿ’

Date:

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಮುಕ್ತಾಯಗೊಂಡಿದ್ದು, ಪಂದ್ಯದಲ್ಲಿ ವಿರಾಟ್ ಕೊಹ್ಲಿಯವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಆ ಮೂಲಕ ಐಸಿಸಿಯ ಪ್ರತಿಷ್ಠಿತ ಟೂರ್ನಿಯಲ್ಲಿ ಸತತ ಎರಡು ಪಂದ್ಯ ಗೆದ್ದ ರೋಹಿತ್ ಶರ್ಮಾ ಬಳಗವು ಸೆಮಿಫೈನಲ್ ಪ್ರವೇಶಿಸಿದೆ.

- Advertisement -

ದುಬೈನ ಶಾರ್ಜಾ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯವರ ಭರ್ಜರಿ ಶತಕದ ನೆರವಿನಿಂದ ಆರು ವಿಕೆಟ್‌ಗಳಿಂದ ಪಾಕಿಸ್ತಾನ ತಂಡವನ್ನು ಮಣಿಸಿದೆ. ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆಯೇ ಟ್ವಿಟ್ಟರ್, ಫೇಸ್‌ಬುಕ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ‘ಕಿಂಗ್ ಕೊಹ್ಲಿ’ ಟ್ರೆಂಡಿಂಗ್‌ನಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಳೆದ ಹಲವು ತಿಂಗಳುಗಳಿಂದ ನಿರಂತರವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದ ವಿರಾಟ್, ಪಾಕ್ ವಿರುದ್ಧದ ಇಂದಿನ ಪಂದ್ಯದಲ್ಲಿ ಅಮೋಘ ಶತಕ ಸಿಡಿಸುವ ಮೂಲಕ ಪಾಕ್ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಫಾರ್ಮ್‌ಗೆ ಮರಳಿದ್ದಾರೆ. ಮಾತ್ರವಲ್ಲ, ನಿವೃತ್ತಿ ತೆಗೆದುಕೊಳ್ಳಿ ಎಂದು ಬಹಿರಂಗವಾಗಿಯೇ ಟೀಕಿಸುತ್ತಿದ್ದವರಿಗೆ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ಆ ಮೂಲಕ ವಿರಾಟ್ ಕೊಹ್ಲಿ GOAT(Greatest Of All Time) ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಪಾಕಿಸ್ತಾನ ವಿರುದ್ಧದ ಈ ಶತಕದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟಾರೆ 82 ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಮಾತ್ರವಲ್ಲ ಓಡಿಐ ಕ್ರಿಕೆಟ್‌ನಲ್ಲಿ ಅವರು ತಮ್ಮ 51ನೇ ಶತಕ ಸಿಡಿಸಿದ್ದಾರೆ. ಅಲ್ಲದೇ, ವಿರಾಟ್ ಕೊಹ್ಲಿ ವಿಶ್ವದಾಖಲೆ ಬರೆದಿದ್ದು, ನಿವೃತ್ತ ಆಟಗಾರ ಸಚಿನ್ ತೆಂಡೂಲ್ಕರ್​ ಹಿಂದಿಕ್ಕಿ ವೇಗವಾಗಿ 14 ಸಾವಿರ ರನ್​ ಸಿಡಿಸಿದ ಬ್ಯಾಟರ್ ಕೂಡ ಎನಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ | ‘ಕೊಹ್ಲಿ’ ಶತಕದ ಕೊಯ್ಲು: ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಗೆಲುವು

ಕೊಹ್ಲಿ ಮತ್ತೊಮ್ಮೆ ಫಾರ್ಮ್‌ಗೆ ಮರಳಿದ ಖುಷಿಯಲ್ಲಿರಬೇಕಾದರೆ, ಅಭಿಮಾನಿಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಕಿಂಗ್ ಕೊಹ್ಲಿಯವರನ್ನು ಟ್ರೆಂಡ್ ಮಾಡುತ್ತಿದ್ದಾರೆ. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹಾಗೂ ಸಹೋದರಿ ಕೂಡ ಇನ್‌ಸ್ಟಾಗ್ರಾಮ್ ಪೋಸ್ಟ್ ಹಾಕಿ, ಖುಷಿ ಹಂಚಿಕೊಂಡಿದ್ದಾರೆ.

ಟ್ವೀಟ್ ಮಾಡಿ ಸಂಭ್ರಮಿಸಿದ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ

ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಗಳಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಸಂಭ್ರಮಪಟ್ಟುಕೊಂಡಿದ್ದಾರೆ.

“ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ಧ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ‌ ಎಂದು ಹಾರೈಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

“ಸಂಘಟಿತ ಹೋರಾಟ, ಕೊಹ್ಲಿಯ ಶತಕದಿಂದ ಟೀಮ್ ಇಂಡಿಯಾ ಗೆದ್ದಿದೆ. ಕ್ರಿಕೆಟ್‌ಗಾಗಿ ಮಿಡಿಯುವ ಪ್ರತಿಯೊಬ್ಬ ಭಾರತೀಯರ ಹೃದಯಕ್ಕೂ ಇದು ಅದ್ಭುತ ಗೆಲುವು” ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...