ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಮುಕ್ತಾಯಗೊಂಡಿದ್ದು, ಪಂದ್ಯದಲ್ಲಿ ವಿರಾಟ್ ಕೊಹ್ಲಿಯವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಆ ಮೂಲಕ ಐಸಿಸಿಯ ಪ್ರತಿಷ್ಠಿತ ಟೂರ್ನಿಯಲ್ಲಿ ಸತತ ಎರಡು ಪಂದ್ಯ ಗೆದ್ದ ರೋಹಿತ್ ಶರ್ಮಾ ಬಳಗವು ಸೆಮಿಫೈನಲ್ ಪ್ರವೇಶಿಸಿದೆ.
ದುಬೈನ ಶಾರ್ಜಾ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯವರ ಭರ್ಜರಿ ಶತಕದ ನೆರವಿನಿಂದ ಆರು ವಿಕೆಟ್‌ಗಳಿಂದ ಪಾಕಿಸ್ತಾನ ತಂಡವನ್ನು ಮಣಿಸಿದೆ. ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆಯೇ ಟ್ವಿಟ್ಟರ್, ಫೇಸ್‌ಬುಕ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ‘ಕಿಂಗ್ ಕೊಹ್ಲಿ’ ಟ್ರೆಂಡಿಂಗ್‌ನಲ್ಲಿದ್ದಾರೆ.
𝗞𝗢𝗛𝗟𝗜 𝗙𝗜𝗡𝗜𝗦𝗛𝗘𝗦 𝗢𝗙𝗙 𝗜𝗡 𝗦𝗧𝗬𝗟𝗘! 💯@imVkohli takes #TeamIndia over the line, bringing his first-ever hundred in the #ChampionsTrophy, his 51st in ODIs, and 82nd across formats. 🙌
— Star Sports (@StarSportsIndia) February 23, 2025
Take a bow, KING! 👑#ChampionsTrophyOnJioStar 👉 #INDvPAK | LIVE NOW on Star… pic.twitter.com/pzUmDiAtyp
ಕಳೆದ ಹಲವು ತಿಂಗಳುಗಳಿಂದ ನಿರಂತರವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದ ವಿರಾಟ್, ಪಾಕ್ ವಿರುದ್ಧದ ಇಂದಿನ ಪಂದ್ಯದಲ್ಲಿ ಅಮೋಘ ಶತಕ ಸಿಡಿಸುವ ಮೂಲಕ ಪಾಕ್ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಫಾರ್ಮ್‌ಗೆ ಮರಳಿದ್ದಾರೆ. ಮಾತ್ರವಲ್ಲ, ನಿವೃತ್ತಿ ತೆಗೆದುಕೊಳ್ಳಿ ಎಂದು ಬಹಿರಂಗವಾಗಿಯೇ ಟೀಕಿಸುತ್ತಿದ್ದವರಿಗೆ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ಆ ಮೂಲಕ ವಿರಾಟ್ ಕೊಹ್ಲಿ GOAT(Greatest Of All Time) ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಪಾಕಿಸ್ತಾನ ವಿರುದ್ಧದ ಈ ಶತಕದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟಾರೆ 82 ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಮಾತ್ರವಲ್ಲ ಓಡಿಐ ಕ್ರಿಕೆಟ್‌ನಲ್ಲಿ ಅವರು ತಮ್ಮ 51ನೇ ಶತಕ ಸಿಡಿಸಿದ್ದಾರೆ. ಅಲ್ಲದೇ, ವಿರಾಟ್ ಕೊಹ್ಲಿ ವಿಶ್ವದಾಖಲೆ ಬರೆದಿದ್ದು, ನಿವೃತ್ತ ಆಟಗಾರ ಸಚಿನ್ ತೆಂಡೂಲ್ಕರ್ ಹಿಂದಿಕ್ಕಿ ವೇಗವಾಗಿ 14 ಸಾವಿರ ರನ್ ಸಿಡಿಸಿದ ಬ್ಯಾಟರ್ ಕೂಡ ಎನಿಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ | ‘ಕೊಹ್ಲಿ’ ಶತಕದ ಕೊಯ್ಲು: ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಗೆಲುವು
ಕೊಹ್ಲಿ ಮತ್ತೊಮ್ಮೆ ಫಾರ್ಮ್‌ಗೆ ಮರಳಿದ ಖುಷಿಯಲ್ಲಿರಬೇಕಾದರೆ, ಅಭಿಮಾನಿಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಕಿಂಗ್ ಕೊಹ್ಲಿಯವರನ್ನು ಟ್ರೆಂಡ್ ಮಾಡುತ್ತಿದ್ದಾರೆ. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹಾಗೂ ಸಹೋದರಿ ಕೂಡ ಇನ್‌ಸ್ಟಾಗ್ರಾಮ್ ಪೋಸ್ಟ್ ಹಾಕಿ, ಖುಷಿ ಹಂಚಿಕೊಂಡಿದ್ದಾರೆ.
ಟ್ವೀಟ್ ಮಾಡಿ ಸಂಭ್ರಮಿಸಿದ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ
ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಗಳಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಸಂಭ್ರಮಪಟ್ಟುಕೊಂಡಿದ್ದಾರೆ.
ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ಧ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ.
— Siddaramaiah (@siddaramaiah) February 23, 2025
ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮವರ ಈ… pic.twitter.com/I0eLnaqlJV
“ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ಧ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
“ಸಂಘಟಿತ ಹೋರಾಟ, ಕೊಹ್ಲಿಯ ಶತಕದಿಂದ ಟೀಮ್ ಇಂಡಿಯಾ ಗೆದ್ದಿದೆ. ಕ್ರಿಕೆಟ್‌ಗಾಗಿ ಮಿಡಿಯುವ ಪ್ರತಿಯೊಬ್ಬ ಭಾರತೀಯರ ಹೃದಯಕ್ಕೂ ಇದು ಅದ್ಭುತ ಗೆಲುವು” ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
Epic triumph for Team India!
— Rahul Gandhi (@RahulGandhi) February 23, 2025
A masterclass in teamwork and resilience, with Kohli’s century leading the charge.
A glorious win for every heart that beats for Indian cricket! 🇮🇳🏏#INDvsPAK #ChampionsTrophy pic.twitter.com/6TKSFvVSBR
