ಚೆನ್ನೈ ಗೆಲ್ಲಿಸಿದ ಧೋನಿ, ಧೋನಿ ಗೆಲ್ಲಿಸಿದ ಆಟಗಾರರು: ರೋಚಕ ಫೈನಲ್

Date:

ಕೊನೆಯ ಓವರ್‌ನ ಎರಡು ಬಾಲ್‌ಗೆ ಒಂದು ಸಿಕ್ಸರ್‌ ಒಂದು ಫೋರ್‌ ಬಾರಿಸಿ ತಂಡಕ್ಕೆ ಜಯ ತಂದಿಟ್ಟ ಜಡೇಜಾ

- Advertisement -

ಸೋಮವಾರ ತಡರಾತ್ರಿ ಮುಕ್ತಾಯವಾದ ಐಪಿಎಲ್‌ ಫೈನಲ್‌ನಲ್ಲಿ ಚೆನ್ನೈ ತಂಡವು 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಆ ಮೂಲಕ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಟೂರ್ನಿಯ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆ ಮೂಲಕ ಸತತ ಎರಡನೇ ಪ್ರಶಸ್ತಿ ಗೆಲ್ಲುವ ಗುಜರಾತ್‌ ಟೈಟನ್ಸ್‌ ತಂಡದ ಕನಸನ್ನು ನುಚ್ಚು ನೂರು ಮಾಡಿತು.

ಗುಜರಾತ್‌ ಟೈಟನ್ಸ್‌ ತಂಡ ನೀಡಿದ 215 ರನ್‌ ಗಳ ಬೆನ್ನು ಹತ್ತಿದ ಚೆನ್ನೈ ತಂಡ, ಮೊದಲ ಓವರ್‌ನ ಮೂರು ಬಾಲ್‌ ಆಡಿ ಮಳೆಯ ಕಾರಣದಿಂದಾಗಿ ಆಟ ನಿಲ್ಲಿಸಿತು. ಆ ನಂತರ, ತಡರಾತ್ರಿ ಮಳೆ ನಿಂತಾಗ ಮತ್ತೆ ಶುರುವಾದ ಆಟಕ್ಕೆ ಡಕ್ವರ್ಥ್‌ ಲೂಯಿಸ್‌ ನಿಯಮದಂತೆ 15 ಓವರ್‌ ಗಳಲ್ಲಿ 171 ರನ್‌ಗಳ ಗುರಿ ನೀಡಲಾಯಿತು. 171 ರನ್‌ಗಳ ಗುರಿ ಬೆನ್ನಟ್ಟಿದ ಚೆನ್ನೈ ತಂಡಕ್ಕೆ ಕೊನೆಯ ಎರಡು ಎಸೆತಗಳಲ್ಲಿ 10 ರನ್‌ ಗಳಿಸುವ ಸವಾಲು ಎದುರಾಯಿತು.

15ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ ಒಂದು ಬೌಂಡರಿ ಬಾರಿಸಿದ ಜಡೇಜಾ ಚೆನ್ನೈಗೆ ರೋಚಕ ಜಯ ತಂದುಕೊಟ್ಟರು. ಕೊನೆಗೂ ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ ನಿಜವಾಗಿಸಿದ ಧೋನಿ, ಚೆನ್ನೈಗಾಗಿ ಗೆಲುವು ತಂದುಕೊಟ್ಟರೆ, ರೋಚಕ ಪಂದ್ಯದಲ್ಲಿ ಕೆಚ್ಚೆದೆಯ ಪ್ರದರ್ಶನ ನೀಡಿದ ತಂಡದ ಆಟಗಾರರು ಧೋನಿಗಾಗಿ ಆಡಿ ಗೆಲುವು ತಂದುಕೊಟ್ಟರು. ಆ ಮೂಲಕ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್‌ ಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಸಾಯಿ ಸುದರ್ಶನ್ ಹಾಗೂ ಸಾಹ ಅವರ ಅದ್ಭುತ 96 ರನ್‌ಗಳ ನೆರವಿನಿಂದಾಗಿ 4 ವಿಕೆಟ್ ಕಳೆದುಕೊಂಡು 214 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಚೆನ್ನೈ ತಂಡ ವರುಣನ ಅಡೆತಡೆಯನ್ನೂ ಲೆಕ್ಕಿಸದೆ, ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ದಿದ್ದು, ಆ ಗೆಲುವನ್ನು ಧೋನಿಗಾಗಿ ಮುಡಿಪಾಗಿಟ್ಟಿದ್ದು, ಎಲ್ಲ ಆಟಗಾರರಲ್ಲೂ ಎದ್ದು ಕಾಣುತ್ತಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...