ಟೆಸ್ಟ್ ಕ್ರಿಕೆಟ್ ದಿಗ್ಗಜರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಿರಿಯ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಆಯ್ಕೆ ಮಾಡುತ್ತಿರುವ ಹಿನ್ನೆಲೆ ದೀರ್ಘಕಾಲದಿಂದ ಟೆಸ್ಟ್‌ನಲ್ಲಿ ಕಾಣಿಸಿಕೊಳ್ಳದ ಪೂಜಾರ ಭಾವನಾತ್ಮಕ ಪೋಸ್ಟ್ ಒಂದು ಮಾಡಿ ನಿವೃತ್ತಿ ಘೋಷಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಹುಲ್‌ಗೆ ಹಿಂಬಡ್ತಿ; ಜಡೇಜಾಗೆ ‘ಎ+’ ಶ್ರೇಣಿಗೆ ಬಡ್ತಿ
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಪೂಜಾರ, “ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ನಾನು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ನನ್ನ ಕೈಲಾದಷ್ಟು ಪ್ರಯತ್ನಿಸುವುದು – ಇವೆಲ್ಲವುದರ ನಿಜವಾದ ಅರ್ಥವನ್ನು ಪದಗಳಲ್ಲಿ ಹೇಳುವುದು ಅಸಾಧ್ಯ. ಆದರೆ ಅಪಾರ ಕೃತಜ್ಞತೆಯಿಂದ ನಾನು ಎಲ್ಲಾ ರೀತಿಯ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.
“ನನ್ನ ಕ್ರಿಕೆಟ್ ವೃತ್ತಿಜೀವನದುದ್ದಕ್ಕೂ ಅವಕಾಶ ಮತ್ತು ಬೆಂಬಲ ನೀಡಿದ್ದಕ್ಕಾಗಿ ಬಿಸಿಸಿಐ ಮತ್ತು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್‌ಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವರ್ಷಗಳಲ್ಲಿ ನಾನು ಪ್ರತಿನಿಧಿಸಲು ಸಾಧ್ಯವಾದ ಎಲ್ಲಾ ತಂಡಗಳು, ಫ್ರಾಂಚೈಸಿಗಳು ಮತ್ತು ಕೌಂಟಿಗಳಿಗೂ ಧನ್ಯವಾದಗಳು” ಎಂದು ತಿಳಿಸಿದ್ದಾರೆ.
“ನನ್ನ ಮಾರ್ಗದರ್ಶಕರು, ತರಬೇತುದಾರರು ಮತ್ತು ಆಧ್ಯಾತ್ಮಿಕ ಗುರುಗಳ ಅಮೂಲ್ಯ ಮಾರ್ಗದರ್ಶನವಿಲ್ಲದೆ ನಾನು ಇಷ್ಟು ದೂರ ತಲುಪಲು ಸಾಧ್ಯವಾಗುತ್ತಿರಲಿಲ್ಲ. ಅವರಿಗೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ” ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.
“ನನ್ನ ಎಲ್ಲಾ ತಂಡದ ಸದಸ್ಯರು, ಸಹಾಯಕ ಸಿಬ್ಬಂದಿ, ನೆಟ್ ಬೌಲರ್‌ಗಳು, ವಿಶ್ಲೇಷಕರು, ಲಾಜಿಸ್ಟಿಕ್ಸ್ ತಂಡ, ಅಂಪೈರ್‌ಗಳು, ಮೈದಾನದ ಸಿಬ್ಬಂದಿ, ಸ್ಕೋರರ್‌ಗಳು, ಮಾಧ್ಯಮ ಸಿಬ್ಬಂದಿ ಮತ್ತು ನಾವು ಪ್ರೀತಿಸುವ ಈ ಆಟವನ್ನು ಸ್ಪರ್ಧಿಸಲು ಮತ್ತು ಆಡಲು ಅನುವು ಮಾಡಿಕೊಡಲು ತೆರೆಮರೆಯಲ್ಲಿ ಅವಿಶ್ರಾಂತವಾಗಿ ಶ್ರಮಿಸುವ ಎಲ್ಲರಿಗೂ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

https://shorturl.fm/8r2M1