ಮುಖ್ಯಮಂತ್ರಿಗಳೇ ಕಾರ್ಯಕ್ರಮಕ್ಕೆ ಜನರನ್ನು ಆಹ್ವಾನಿಸಿದ್ದರು: ಕೋರ್ಟ್‌ಗೆ ಡಿಎನ್‌ಎ ಹೇಳಿಕೆ

Date:

ವಿಧಾನಸೌಧದಲ್ಲಿ ನಡೆದ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರವೇ ಆಯೋಜಿಸಿತ್ತು. ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಆರ್‌ಸಿಬಿಯ ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಈವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆ ಡಿಎನ್‌ಎ ಹೈಕೋರ್ಟ್‌ಗೆ ತಿಳಿಸಿದೆ.

- Advertisement -

11 ಮಂದಿ ಕಾಲ್ತುಳಿತಕ್ಕೆ ಸಂಬಂಧಿಸಿದ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಆರ್‌ಸಿಬಿ ಸಂಸ್ಥೆ ಹಾಗೂ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಸಂಸ್ಥೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿವೆ. ಇದರಲ್ಲಿ ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡಲಾಗಿದೆ. ಕಾಲ್ತುಳಿತ ಸಂಭವಿಸಲು ಸರ್ಕಾರವೇ ಕಾರಣ. ಸ್ವತಃ ಮುಖ್ಯಮಂತ್ರಿಗಳೇ ಜನರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು ಎಂದು ನೇರವಾಗಿ ದೂರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಹಿಂದೆ ಭಾರತ ಟಿ-20 ವಿಶ್ವಕಪ್ ಗೆದ್ದಾಗ ಮುಂಬೈನಲ್ಲಿ ಗೆಲುವಿನ ಮೆರವಣಿಗೆ ನಡೆಸಲಾಗಿತ್ತು. 3 ಲಕ್ಷ ಜನರಿದ್ದರೂ ಯಾವುದೇ ಅವಘಡಗಳಾಗಿರಲಿಲ್ಲ. ವಾಂಖೇಡೆ ಕ್ರೀಡಾಂಗಣದ ಸಾಮರ್ಥ್ಯ 32,000 ಇದ್ದರೂ ಸಮಸ್ಯೆ ಆಗಲಿಲ್ಲ. ಜೂ.3 ರಂದೇ ಆರ್‌ಸಿಬಿ ವಿಕ್ಟರಿ ಪರೇಡ್‌ಗೆ ಅನುಮತಿ ಕೋರಿ ಪತ್ರವನ್ನು ಬರೆಯಲಾಗಿತ್ತು. ಆದರೆ ತೆರೆದ ಬಸ್ ಪರೇಡ್‌ಗೆ ಪೊಲೀಸರು ಅನುಮತಿ ನಿರಾಕರಣೆ ಮಾಡಿದ್ದರು ಎಂದು ಹೈಕೋರ್ಟ್‌ಗೆ ತಿಳಿಸಿದೆ.

ಇದನ್ನು ಓದಿದ್ದೀರಾ? ರಾಜ್ಯ ಕ್ರಿಕೆಟ್‌ ಸಂಸ್ಥೆ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌ ಮಧ್ಯಂತರ ಆದೇಶ

ವಿಧಾನಸೌಧ ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಕ್ರೀಡಾಂಗಣದ ಬಳಿ ಅಗತ್ಯವಿದ್ದಷ್ಟು ಪೊಲೀಸರು ನಿಯೋಜನೆ ಮಾಡದ ಕಾರಣ ಡಿಎನ್‌ಎನಿಂದಲೇ 584 ಖಾಸಗಿ ಸಿಬ್ಬಂದಿ ನೇಮಕ ಮಾಡಲಾಗಿತ್ತು. ಸರ್ಕಾರ ತನ್ನ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಬಂಧನಕ್ಕೆ ಆದೇಶಿಸಿದೆ ಎಂದು ಕೋರ್ಟ್‌ಗೆ ಹೇಳಿದೆ

ನಮಗೂ, ಈ ಕಾರ್ಯಕ್ರಮಕ್ಕೆ ಯಾವುದೇ ಸಂಬಂಧವಿಲ್ಲ. ಕೇವಲ ಆಟಗಾರರನ್ನು ಕರೆದು ತರುವುದಷ್ಟೇ ನಮ್ಮ ಕೆಲಸ. ಸರ್ಕಾರದ ಅನುಮತಿ ಪಡೆದ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ. ಜೂ.3ರಂದೇ ಅನುಮತಿ ದೊರಕಿರುವುದಾಗಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ ದೃಢೀಕರಿಸಿತ್ತು. ಕೆಎಸ್‌ಸಿಎ ಮಾಹಿತಿ ಆಧರಿಸಿಯೇ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ. ನಾವು ಯಾವುದೇ ತಪ್ಪು ಮಾಡಿಲ್ಲ ಎಂದು ಈವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆ ಕೋರ್ಟ್‌ಗೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

14 ಎಸೆತಗಳಲ್ಲಿ ಅರ್ಧಶತಕ: ಮೆಕ್‌ಗರ್ಕ್‌ ಸಿಡಿಲಾಟ, ವೈಭವ್‌ ವಿಶ್ವದಾಖಲೆ ಅಬಾಧಿತ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ಕೇವಲ 14...