ಬೆಂಗಳೂರು ಕಾಲ್ತುಳಿತಕ್ಕೆ ಆರ್‌ಸಿಬಿ ಕಾರಣ: ಸಿಐಡಿ ತನಿಖಾ ವರದಿ

Date:

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್‌ 4ರಂದು ಸಂಭವಿಸಿದ್ದ ಕಾಲ್ತುಳಿತ ಘಟನೆಯ ತನಿಖೆ ನಡೆಸುತ್ತಿರುವ ಸಿಐಡಿ, ತಂಡದ ಆಟಗಾರ ವಿರಾಟ್ ಕೊಹ್ಲಿಗಾಗಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಆಡಳಿತ ಮಂಡಳಿ ತೆಗೆದುಕೊಂಡ ತರಾತುರಿಯ ನಿರ್ಧಾರವೇ 11 ಮಂದಿಯ ಸಾವಿಗೆ ಕಾರಣವಾಗಿದೆ ಎಂಬುದಾಗಿ ವರದಿ ಸಿದ್ಧಪಡಿಸಿದೆ ಎಂದು ಮೂಲಗಳು ಹೇಳಿವೆ.

- Advertisement -

‘ಈ ತನಿಖಾ ವರದಿಗೆ ಇನ್ನಷ್ಟು ಸಾಕ್ಷ್ಯಾಧಾರಗಳನ್ನು ಕಲೆ ಹಾಕಲಾಗುತ್ತಿದೆ. ಅದು ಪೂರ್ಣಗೊಂಡ ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಘಟನೆಯ ಬಳಿಕ ಕಬ್ಬನ್‌ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿತ್ತು. ಮೃತ ಕುಟುಂಬಸ್ಥರ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಕೆಎಸ್‌ಸಿಎ, ಡಿಎನ್‌ಎ (ಇವೆಂಟ್‌ ಮ್ಯಾನೇಜ್‌ ಮೆಂಟ್‌) ಹಾಗೂ ಆರ್‌ಸಿಬಿ ಫ್ರಾಂಚೈಸಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ನಾಲ್ವರನ್ನು ಬಂಧಿಸಿದ್ದರು.

ಅದಾದ ಮೇಲೆ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ದಾಖಲಾಗಿದ್ದ ಎರಡೂ ಪ್ರಕರಣಗಳ ತನಿಖೆಯನ್ನೂ ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿತ್ತು. ಕಾಲ್ತುಳಿತಕ್ಕೆ ಕಾರಣವಾದ ಅಂಶಗಳನ್ನು ಸಿಐಡಿ ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

ಹರಿದಾಡಿದ ‘ಘಟನೆಗೆ ಸಂಬಂಧಿಸಿದಂತೆ ಸಾಮಾ ಜಿಕ ಮಾಧ್ಯಮ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವಿಡಿಯೊಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗಿದೆ. ಕ್ರೀಡಾಂಗಣದ ಗೇಟ್‌ಗಳ ಬಳಿಯ ಅವ್ಯವಸ್ಥೆ, ಪೊಲೀಸರ ನಿಯೋಜನೆ ಹಾಗೂ ನೂಕುನುಗ್ಗಲು ಉಂಟಾಗಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಈ ಎಲ್ಲ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಅರ್‌ಸಿಬಿ ತಂಡವು ಐಪಿಎಲ್ ಟ್ರೋಫಿ ಜಯಿಸಿದರೆ ಜೂನ್ 4ರಂದೇ ವಿಜಯೋತ್ಸವ ಆಯೋಜನೆ ಮಾಡಬೇಕೆಂದು ಆಡಳಿತ ಮಂಡಳಿ ನಿರ್ಧಾರ ಮಾಡಿತ್ತು. ಆರ್‌ಸಿಬಿ ಸಿಇಒ ರಾಜೇಶ್ ಮೆನನ್, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಅವರು ಕಾರ್ಯಕ್ರಮ ಆಯೋಜನೆಯ ನಿರ್ಧಾರ ಮಾಡಿದ್ದರು. ವಿರಾಟ್ ಕೊಹ್ಲಿಯವರ ಕಾರಣ ಮುಂದಿಟ್ಟಿದ್ದ ಕೊಹ್ಲಿ ಆಪ್ತ ನಿಖಿಲ್ ಸೋಸ್ಥೆ ಕೆಎಸ್‌ಸಿಎ ಮೇಲೆ ಒತ್ತಡ ತಂದು ಕಾರ್ಯಕ್ರಮ ಆಯೋಜಿಸಿದ್ದರು ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಅದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ.

‘ಕಾರ್ಯಕ್ರಮ ಮುಂದೂಡಿಕೆ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಕೆಎಸ್‌ಸಿಎ ಅಭಿಪ್ರಾಯ ವ್ಯಕ್ತಪಡಿಸಿತ್ತು. ಆದರೆ, ಕೊಹ್ಲಿ ಕಾರಣ ಹೇಳಿ ಜೂನ್ 4ರಂದೇ ಕಾರ್ಯಕ್ರಮ ಆಯೋಜನೆ ಆಗಬೇಕು ಎಂದು ನಿಖಿಲ್ ಸೋಸಲೆ ಒತ್ತಡ ಹೇರಿದ್ದರು. ಕೊಹ್ಲಿ ಲಂಡನ್‌ಗೆ ಹೋಗಬೇಕಿದ್ದು, ವಿಜಯೋತ್ಸವ ಮುಂದೂಡಿದರೆ ಕೊಹ್ಲಿ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂಬುದಾಗಿ ಕಾರಣ ನೀಡಿದ್ದರು. ನಿಖಿಲ್ ಸೋಸಲೆ ಒತ್ತಡದಿಂದಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...