ಏಷ್ಯನ್ ಗೇಮ್ಸ್’ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಡಿ‌‌ ಕೆ‌ ಶಿವಕುಮಾರ್ ಸನ್ಮಾನ

Date:

ಜಪಾನಿನಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಅತ್ಯುತ್ತಮ ಸಾಧನೆ ತೋರಿ ದೇಶ ಹಾಗೂ ನಾಡಿಗೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಇದೇ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದ ಅವರು, ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ಪ್ರಕಟಿಸಿದರು.

- Advertisement -

​ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುವ ನಗದು ಬಹುಮಾನದ ಮೊತ್ತವನ್ನು ಮುಖ್ಯಮಂತ್ರಿಗಳು ಗಣನೀಯವಾಗಿ ಹೆಚ್ಚಿಸಿದ್ದಾರೆ. ಈ ಹಿಂದೆ ಚಿನ್ನದ ಪದಕಕ್ಕೆ ₹35 ಲಕ್ಷ, ಬೆಳ್ಳಿಗೆ ₹25 ಲಕ್ಷ ಹಾಗೂ ಕಂಚಿನ ಪದಕಕ್ಕೆ ₹15 ಲಕ್ಷ ನೀಡಲಾಗುತ್ತಿತ್ತು. ಪರಿಷ್ಕೃತ ನಿರ್ಧಾರದಂತೆ, ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

​ಕ್ರೀಡಾಪಟುಗಳಿಗೆ ಸರ್ಕಾರದಿಂದ ಹಲವು ಮಹತ್ವದ ಸೌಲಭ್ಯಗಳನ್ನು ಘೋಷಿಸಲಾಗಿದ್ದು, ಏಷ್ಯನ್ ಗೇಮ್ಸ್ 2026ರಲ್ಲಿ ಅರ್ಹತೆ ಪಡೆದು ಸ್ಪರ್ಧಿಸಿದ ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ರಿಕೆಟ್, ಸೈಕ್ಲಿಂಗ್, ಎಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಶೂಟಿಂಗ್, ಈಜು, ಟೇಬಲ್ ಟೆನಿಸ್ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್ ವಿಭಾಗಗಳ ರಾಜ್ಯದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ₹5 ಲಕ್ಷ ನಗದು ಪ್ರೋತ್ಸಾಹಧನವನ್ನು ಮಂಜೂರು ಮಾಡಲಾಗಿದೆ. ಇದರೊಂದಿಗೆ, ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ಹುದ್ದೆಗಳಾದ ಗುಂಪು-ಎ, ಬಿ, ಸಿ ಮತ್ತು ಡಿ ವೃಂದದ ನೇರ ನೇಮಕಾತಿಗಳಲ್ಲಿ ಶೇಕಡಾ 2ರಷ್ಟು ಮೀಸಲಾತಿಯನ್ನು ಜಾರಿಗೆ ತರಲಾಗಿದ್ದು, ಅಕ್ಟೋಬರ್ 3, 2026ರಂದು ಈ ಕುರಿತು ಅಧಿಕೃತ ಅಧಿಸೂಚನೆಯನ್ನೂ ಹೊರಡಿಸಲಾಗಿದೆ.

​ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಸರ್ಕಾರಿ ‘ಗುಂಪು-ಬಿ’ (Group-B) ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದ ಆಯ್ಕೆ ಸಮಿತಿ ಮೂಲಕ ಈ ಪ್ರಕ್ರಿಯೆ ನಡೆಯಲಿದೆ. ಅಲ್ಲದೆ, ಮುಂದಿನ ಹಂತದಲ್ಲಿ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೆ ನೆರವಾಗಲು ‘ಗುರಿ ಒಲಿಂಪಿಕ್ಸ್’ ಯೋಜನೆಯಡಿ 2026-27ನೇ ಸಾಲಿಗೆ ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಶ್ರೇಯಾಂಕಾ ಪಾಟೀಲ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು ಸೇರ್ಪಡೆಗೊಳಿಸಲಾಗಿದೆ. ಇವರಿಗೆ ಒಲಿಂಪಿಕ್ಸ್ ತಯಾರಿಗಾಗಿ ತಲಾ ₹10 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.

​ಪರಿಷ್ಕೃತ ಬಹುಮಾನಕ್ಕೆ ಅರ್ಹರಾದ ಎಂಟು ಪದಕ ವಿಜೇತ ಕ್ರೀಡಾಪಟುಗಳ ಪೈಕಿ ಮಹಿಳಾ ಕ್ರಿಕೆಟ್‌ನಲ್ಲಿ ಚಿನ್ನ ಗೆದ್ದ ಶ್ರೇಯಾಂಕ ಆರ್. ಪಾಟೀಲ್, ಅಥ್ಲೆಟಿಕ್ಸ್ 4×400 ಮಿಶ್ರ ರಿಲೇ ಹಾಗೂ ಮಹಿಳಾ ರಿಲೇಯಲ್ಲಿ ಬೆಳ್ಳಿ ಮತ್ತು ಚಿನ್ನ ಪಡೆದ ಎಂ.ಆರ್. ಪೂವಮ್ಮ ಸೇರಿದ್ದಾರೆ. ಮಹಿಳೆಯರ 50 ಮೀಟರ್ ರೈಫಲ್ ಶೂಟಿಂಗ್‌ನಲ್ಲಿ ಬೆಳ್ಳಿ ಗೆದ್ದ ತಿಲೋತ್ತಮ ಸೇನ್, ಪುರುಷರ ಬ್ಯಾಡ್ಮಿಂಟನ್ ತಂಡ ವಿಭಾಗದಲ್ಲಿ ಬೆಳ್ಳಿ ಪಡೆದ ಆಯುಷ್ ಆರ್. ಶೆಟ್ಟಿ, ಅಥ್ಲೆಟಿಕ್ಸ್ 4×100 ಮಿಶ್ರ ರಿಲೇಯಲ್ಲಿ ಕಂಚು ಗೆದ್ದ ಸ್ನೇಹಾ ಎಸ್.ಎಸ್. ಅವರಿಗೂ ಸನ್ಮಾನ ಒಲಿಯಿತು. ಇವರೊಂದಿಗೆ ಗಾಲ್ಫ್ ಮಹಿಳಾ ತಂಡ ವಿಭಾಗದಲ್ಲಿ ಬೆಳ್ಳಿ ಪಡೆದ ಅದಿತಿ ಅಶೋಕ್, ಗಾಲ್ಫ್ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಹಾಗೂ ತಂಡ ವಿಭಾಗದಲ್ಲಿ ಬೆಳ್ಳಿ ಗೆದ್ದ ಪ್ರಣವಿ ಎಸ್. ಅರಸ್ ಮತ್ತು ಹಾಕಿ ಪುರುಷರ ತಂಡದಲ್ಲಿ ಚಿನ್ನದ ಪದಕ ಕೊರಳಿಗೇರಿಸಿಕೊಂಡ ಮೋಹಿತ್ ಎಚ್.ಎಸ್. ಅವರು ಈ ಬಹುಮಾನಕ್ಕೆ ಭಾಜನರಾಗಿದ್ದಾರೆ.

​ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿ ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದ 20 ಕ್ರೀಡಾಪಟುಗಳನ್ನು ಗುರುತಿಸಲಾಗಿದೆ. ಅಥ್ಲೆಟಿಕ್ಸ್ ವಿಭಾಗದ ಯಶಸ್ ಪಾಲಾಕ್ಷ, ಸುಪ್ರಿಯಾ ಸಿಂಡಿಗೆರೆ ಬಸವರಾಜು, ಉನ್ನತಿ ಅಯ್ಯಪ್ಪ, ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಸಿಂಧುಶ್ರೀ, ಬ್ಯಾಡ್ಮಿಂಟನ್‌ನ ಆಯುಷ್ ಆರ್. ಶೆಟ್ಟಿ ಹಾಗೂ ಟಿ20 ಕ್ರಿಕೆಟ್‌ನ ಶ್ರೇಯಾಂಕ ಆರ್. ಪಾಟೀಲ್ ಈ ಪ್ರೋತ್ಸಾಹಧನ ಪಡೆದಿದ್ದಾರೆ. ಇವರಲ್ಲದೆ, ಸೈಕ್ಲಿಂಗ್ ಟ್ರ್ಯಾಕ್‌ನ ಕೀರ್ತಿ ರಂಗಸ್ವಾಮಿ, ಕುದುರೆ ಸವಾರಿಯ (ಈಕ್ವೇಸ್ಟ್ರಿಯನ್) ಫವಾದ್ ಮಿರ್ಜಾ, ಗಾಲ್ಫ್‌ನ ಅದಿತಿ ಅಶೋಕ್ ಮತ್ತು ಪ್ರಣವಿ ಎಸ್. ಅರಸ್, ಹಾಕಿಯ ಮೋಹಿತ್ ಎಚ್.ಎಸ್., ಶೂಟಿಂಗ್‌ನ ತಿಲೋತ್ತಮಾ ಸೇನ್ ಅವರಿಗೂ ಪ್ರೋತ್ಸಾಹಧನ ನೀಡಲಾಗಿದೆ. ಈಜು ವಿಭಾಗದ ಆಕಾಶ್ ಮಣಿ, ಶ್ರೀಹರಿ ನಟರಾಜ್, ದಕ್ಷಣ್ ಎಸ್., ಅನೀಶ್ ಗೌಡ, ಟೇಬಲ್ ಟೆನಿಸ್‌ನ ಯಶಸ್ವಿನಿ ಘೋರ್ಪಡೆ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್‌ನ ದೀಪು ಮಲ್ಲೇಶ್ ಅವರು ಈ ಪ್ರೋತ್ಸಾಹಧನ ಪಡೆದ ಇತರ ಕ್ರೀಡಾಪಟುಗಳಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಎದ್ದು ನಿಂತ ಯುವಜನತೆ, ಹೊಸ ಬೆಳವಣಿಗೆಯತ್ತ ಭಾರತ

ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ, ಸರ್ಕಾರ ರಚನೆ, ಆಡಳಿತ ನಡೆಸುವುದಷ್ಟೇ ಅಲ್ಲ, ದನಿ...

ಮತದಾರರ ಪಟ್ಟಿಯಿಂದ ನಾಗರಿಕರನ್ನು ಕೈಬಿಡುವುದಾದರೆ, ‘SIR’ ಉದ್ದೇಶವೇನು? ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಎಲ್ಲ ನಾಗರಿಕರು ಮತದಾರರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಜವಾಬ್ದಾರಿ....

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...