ಕಾಮನ್‌ವೆಲ್ತ್ ಕ್ರೀಡಾಕೂಟ 2026: ಮೀರಾಬಾಯಿ ಚಾನುಗೆ ಹ್ಯಾಟ್ರಿಕ್ ಚಿನ್ನ; ಗ್ಲಾಸ್ಗೊದಲ್ಲಿ ಭಾರತದ ಅಮೃತ ಘಳಿಗೆಗಳು

Date:

ಸ್ಕಾಟ್ಲೆಂಡ್‌ನ ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಭವ್ಯ ತೆರೆಬಿದ್ದಿದೆ. ಈ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಭಾರತ, ಒಟ್ಟು 39 ಪದಕಗಳನ್ನು (13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚು) ಮುಡಿಗೇರಿಸಿಕೊಂಡು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ. ಸೀಮಿತ ಕ್ರೀಡೆಗಳಿದ್ದ ಈ ಕೂಟದಲ್ಲಿ ಭಾರತದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆಗಳನ್ನು ಮೆರೆದಿದ್ದು, ವಿಶೇಷವಾಗಿ ವೇಟ್‌ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು ಸತತ ಮೂರನೇ ಚಿನ್ನ ಗೆದ್ದದ್ದು ಭಾರತದ ಪಾಲಿಗೆ ಅವಿಸ್ಮರಣೀಯ.

- Advertisement -

ಮಹಿಳೆಯರ 48 ಕೆ.ಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನದ ಪದಕ ಕೊರಳಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದರು. ಎದುರಾಳಿಗಳಿಗೆ ಯಾವುದೇ ಅವಕಾಶ ನೀಡದ ಅವರು ಅಖಾಡದಲ್ಲಿ ಸಂಪೂರ್ಣ ಪಾರುಪತ್ಯ ಮೆರೆದರು. ವಿಜೇತರ ವೇದಿಕೆಯಲ್ಲಿ ನಿಂತು ತ್ರಿವರ್ಣ ಧ್ವಜ ಮೇಲಕ್ಕೆ ಏರುತ್ತಿರುವುದನ್ನು ಕಂಡು ಚಾನು ಅವರ ಕಣ್ಣಲ್ಲಿ ಆನಂದಬಾಷ್ಪ ಹರಿದುಬಂತು. ಈ ಭಾವನಾತ್ಮಕ ಕ್ಷಣ ಭಾರತದ ಕ್ರೀಡಾಭಿಮಾನಿಗಳನ್ನು ರೋಮಾಂಚನಗೊಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ವೇಟ್‌ಲಿಫ್ಟಿಂಗ್‌ನಲ್ಲಿ ಭಾರತ ಒಟ್ಟು 8 ಪದಕಗಳನ್ನು ಗೆದ್ದುಕೊಂಡಿದೆ. ಜ್ಞಾನೇಶ್ವರಿ ಯಾದವ್ ಮಹಿಳೆಯರ 53 ಕೆ.ಜಿ ವಿಭಾಗದಲ್ಲಿ ಒಟ್ಟು 199 ಕೆ.ಜಿ ಭಾರ ಎತ್ತುವ ಮೂಲಕ ತಮ್ಮ ವೈಯಕ್ತಿಕ ಶ್ರೇಷ್ಠ ಸಾಧನೆಯೊಂದಿಗೆ ಬೆಳ್ಳಿ ಗೆದ್ದರು. ಜೊತೆಗೆ, ರಿಷಿಕಾಂತ್ ಸಿಂಗ್, ರಾಜಾ ಮುತ್ತುಪಾಂಡಿ, ವಿ. ಅಜಯ ಬಾಬು, ಹರ್ಜಿಂದರ್ ಕೌರ್, ಲವ್‌ಪ್ರೀತ್ ಸಿಂಗ್ ಬೆಳ್ಳಿ ಗೆದ್ದರೆ, ಬಿಂದ್ಯಾರಾಣಿ ದೇವಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

16850
Mirabai chanu

ಬಾಕ್ಸಿಂಗ್ ವಿಭಾಗದಲ್ಲಿ ಭಾರತೀಯರು ಹಿಂದೆಂದೂ ಕಾಣದಂತಹ ಐತಿಹಾಸಿಕ ಪಾರುಪತ್ಯ ಸಾಧಿಸಿದರು. ಬಾಕ್ಸಿಂಗ್‌ನಲ್ಲಿ ಭಾರತ ಒಟ್ಟು 10 ಪದಕಗಳನ್ನು ಬಾಚಿಕೊಂಡಿದ್ದು, ಇದರಲ್ಲಿ ಬರೋಬ್ಬರಿ 8 ಚಿನ್ನ ಮತ್ತು 2 ಬೆಳ್ಳಿ ಪದಕಗಳಿವೆ. ಸಾಕ್ಷಿ ಚೌಧರಿ, ಪ್ರೀತಿ ಪವಾರ್, ಜಾಸ್ಮಿನ್ ಲಂಬೋರಿಯಾ, ಪ್ರಿಯಾ ಘಂಗಸ್, ಅರುಂಧತಿ ಚೌಧರಿ, ಸಚಿನ್ ಸಿವಾಚ್ ಹಾಗೂ ಅಂಕುಶ್ ಪಂಗಲ್ ಅವರು ತಮ್ಮ ವಿಭಾಗಗಳಲ್ಲಿ ಎದುರಾಳಿಗಳನ್ನು ಮಣಿಸಿ ಬಂಗಾರದ ಪದಕಗಳಿಗೆ ಮುತ್ತಿಟ್ಟರು.

ಅಥ್ಲೆಟಿಕ್ಸ್ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲೂ ಭಾರತ ಅಪರೂಪದ ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ವಿಶೇಷವಾಗಿ, ಪುರುಷರ ಡೆಕಥ್ಲಾನ್‌ನಲ್ಲಿ ತೇಜಸ್ವಿನ್ ಶಂಕರ್ 7976 ಅಂಕಗಳನ್ನು ಕಲೆಹಾಕುವ ಮೂಲಕ ಕಾಮನ್‌ವೆಲ್ತ್ ಇತಿಹಾಸದಲ್ಲಿಯೇ ಡೆಕಥ್ಲಾನ್ ವಿಭಾಗದಲ್ಲಿ ಭಾರತಕ್ಕೆ ಚೊಚ್ಚಲ ಕಂಚಿನ ಪದಕ ತಂದುಕೊಟ್ಟರು. ಹಾಗೆಯೇ, ಗುಲ್ವೀರ್ ಸಿಂಗ್ ಅವರು 10,000 ಮೀಟರ್ ಓಟದಲ್ಲಿ ಬೆಳ್ಳಿ ಹಾಗೂ 5,000 ಮೀಟರ್ ಓಟದಲ್ಲಿ ಕಂಚು ಗೆಲ್ಲುವ ಮೂಲಕ ಏಕೈಕ ಕ್ರೀಡಾಕೂಟದಲ್ಲಿ ಎರಡು ಅಥ್ಲೆಟಿಕ್ಸ್ ಪದಕ ಗೆದ್ದ ಸಾಧನೆ ಮಾಡಿದರು.

ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿಯೂ ಭಾರತೀಯರ ಚಿನ್ನದ ಬೇಟೆ ಜೋರಾಗಿತ್ತು. ಮಹಿಳೆಯರ ಶಾಟ್ ಪುಟ್ ಎಫ್57 ವಿಭಾಗದಲ್ಲಿ ಶರ್ಮಿಳಾ ಧಂಕರ್ ಚಿನ್ನ ಗೆದ್ದರೆ, ಪುರುಷರ 100 ಮೀಟರ್ ಟಿ47 ಓಟದಲ್ಲಿ ದಿಲೀಪ್ ಗಾವಿತ್ (10.71 ಸೆಕೆಂಡ್) ಕೂಟದ ದಾಖಲೆಯೊಂದಿಗೆ ಬಂಗಾರ ಗೆದ್ದರು. ಇನ್ನು, ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ (85.83 ಮೀಟರ್) ಬೆಳ್ಳಿ ಜಯಿಸಿದರೆ, ಯಶ್ ವೀರ್ ಸಿಂಗ್ ಕಂಚಿನ ಪದಕ ಒಲಿಸಿಕೊಂಡರು.

ಜೂಡೊ ಕ್ರೀಡೆಯಲ್ಲಿ ಭಾರತೀಯರು ಇದೇ ಮೊದಲ ಬಾರಿಗೆ ಚಿನ್ನದ ಖಾತೆ ತೆರೆದಿದ್ದಾರೆ. ಮಹಿಳೆಯರ 48 ಕೆ.ಜಿ ವಿಭಾಗದಲ್ಲಿ ಅಸ್ಮಿತಾ ಡೇ ಹಾಗೂ ಪುರುಷರ 60 ಕೆ.ಜಿ ವಿಭಾಗದಲ್ಲಿ ಹರ್ಷ್ ಸಿಂಗ್ ಬಂಗಾರದ ಪದಕ ಗೆದ್ದು ಇತಿಹಾಸ ನಿರ್ಮಿಸಿದರು. ಜೂಡೊ ಒಂದರಲ್ಲೇ ಭಾರತ 2 ಚಿನ್ನ, 1 ಬೆಳ್ಳಿ ಮತ್ತು 1 ಕಂಚು ಸೇರಿದಂತೆ ಒಟ್ಟು ನಾಲ್ಕು ಪದಕಗಳನ್ನು ತನ್ನದಾಗಿಸಿಕೊಂಡಿದೆ.

ಒಟ್ಟು 123 ಕ್ರೀಡಾಪಟುಗಳನ್ನೊಳಗೊಂಡ ಭಾರತದ ತಂಡ, ಬಾಕ್ಸಿಂಗ್, ಅಥ್ಲೆಟಿಕ್ಸ್, ಪ್ಯಾರಾ ಅಥ್ಲೆಟಿಕ್ಸ್, ಜೂಡೊ, ವೇಟ್‌ಲಿಫ್ಟಿಂಗ್ ಹಾಗೂ ಪ್ಯಾರಾ ಪವರ್‌ಲಿಫ್ಟಿಂಗ್ ಸೇರಿ ಒಟ್ಟು ಆರು ವಿಭಾಗಗಳಲ್ಲಿ ಈ 39 ಪದಕಗಳನ್ನು ಜಯಿಸಿದೆ. ಇದರಲ್ಲಿ 31 ಕ್ರೀಡಾಪಟುಗಳಿಗೆ ಇದು ಮೊದಲ ಕಾಮನ್‌ವೆಲ್ತ್ ಪದಕವಾಗಿದೆ. ಒಟ್ಟಾರೆಯಾಗಿ, ಗ್ಲಾಸ್ಗೊದಲ್ಲಿ ಮೂಡಿಬಂದ ಈ ಅದ್ಭುತ ಸಾಧನೆಗಳು ಮತ್ತು ದಾಖಲೆಗಳು ಭಾರತದ ಕ್ರೀಡಾ ಇತಿಹಾಸದ ಸುವರ್ಣ ಪುಟಗಳಲ್ಲಿ ಶಾಶ್ವತವಾಗಿ ಅಚ್ಚೊತ್ತಲಿವೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...