ಡಾಬಾದಲ್ಲಿ ಪಾತ್ರೆ ತೊಳೆಯುತ್ತಿದ್ದ ಮಣಿಪುರದ ರಿಶಿಕಾಂತ್‌ ಸಿಂಗ್‌ಗೆ ಕಾಮನ್‌ವೆಲ್ತ್ ಬೆಳ್ಳಿ ಪದಕದ ಗರಿ

Date:

ಬಡತನ ಹಾಗೂ ಕಷ್ಟದ ದಿನಗಳನ್ನು ಮೆಟ್ಟಿ ನಿಂತು ಛಲದಿಂದ ಸಾಧನೆ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎನ್ನುವುದಕ್ಕೆ ಮಣಿಪುರದ ವೇಟ್‌ಲಿಫ್ಟರ್ ರಿಶಿಕಾಂತ್ ಸಿಂಗ್ ಚನಂಬಮ್ ಅತ್ಯುತ್ತಮ ಉದಾಹರಣೆ. ಒಂದು ಕಾಲದಲ್ಲಿ ರಸ್ತೆಬದಿಯ ಡಾಬಾದಲ್ಲಿ ಪಾತ್ರೆ ತೊಳೆಯುತ್ತಿದ್ದ ಅವರು, ಇದೀಗ ಸ್ಕಾಟ್ಲೆಂಡ್‌ನ ಗ್ಲಾಸ್ಗೊದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್‌ ಗೇಮ್ಸ್‌ನ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಡುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

- Advertisement -

ಪುರುಷರ 60 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ ರಿಶಿಕಾಂತ್, ಒಟ್ಟು 264 ಕೆ.ಜಿ. ಭಾರ ಎತ್ತುವ ಮೂಲಕ ಈ ಸ್ಮರಣೀಯ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ವಿಶೇಷವೆಂದರೆ, ಸ್ನ್ಯಾಚ್ ವಿಭಾಗದಲ್ಲಿ 121 ಕೆ.ಜಿ. ಭಾರ ಎತ್ತುವ ಮೂಲಕ ಕಾಮನ್‌ವೆಲ್ತ್ ಗೇಮ್ಸ್‌ನ ನೂತನ ದಾಖಲೆ ನಿರ್ಮಿಸಿದ ಅವರು, ಕ್ಲೀನ್ ಅಂಡ್ ಜರ್ಕ್‌ನಲ್ಲಿ 143 ಕೆ.ಜಿ. ಎತ್ತಿದರು. ಮಲೇಷ್ಯಾದ ಹಾಲಿ ಚಾಂಪಿಯನ್ ಮೊಹಮ್ಮದ್ ಅನಿಕ್ ಅವರಿಗಿಂತ ತುಸು ಹಿಂದೆಯುಳಿದು ಚಿನ್ನದ ಪದಕವನ್ನು ಸ್ವಲ್ಪದರಲ್ಲೇ ಕೈತಪ್ಪಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಮಣಿಪುರದ ಇಂಫಾಲದ ನ್ಗೈಹಕ್ಟಾಂಗ್ ಮಖಾ ಮನಿಂಗ್ ಲೈಕೈ ಎಂಬ ಹಳ್ಳಿಯಲ್ಲಿ ಜನಿಸಿದ ರಿಶಿಕಾಂತ್ ಅವರ ಬಾಲ್ಯ ಅತ್ಯಂತ ಕಡುಬಡತನದಿಂದ ಕೂಡಿತ್ತು. ಇವರ ತಂದೆ ಇರಾಬೋಟ್ ಸಿಂಗ್ ಚನಂಬಮ್ ಅವರು ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕುಟುಂಬದ ಆರ್ಥಿಕ ಪರಿಸ್ಥಿತಿ ಎಷ್ಟರ ಮಟ್ಟಿಗೆ ಹದಗೆಟ್ಟಿತ್ತು ಎಂದರೆ, ದಿನಕ್ಕೆ ಕೇವಲ ಒಂದು ಹೊತ್ತಿನ ಊಟ ಮಾತ್ರ ಇವರಿಗೆ ಸಿಗುತ್ತಿತ್ತು.

ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ರಿಶಿಕಾಂತ್, ಹದಿಹರೆಯದಲ್ಲೇ ರಸ್ತೆಬದಿಯ ಡಾಬಾವೊಂದರಲ್ಲಿ ಸಹಾಯಕರಾಗಿ ಕೆಲಸಕ್ಕೆ ಸೇರಿಕೊಂಡರು. ಅಲ್ಲಿ ಪಾತ್ರೆ ತೊಳೆಯುವುದು ಹಾಗೂ ನೀರು ಹೊರುವ ಕೆಲಸವನ್ನು ಮಾಡುತ್ತಿದ್ದ ಅವರಿಗೆ ದಿನಕ್ಕೆ ಕೇವಲ 150 ರೂಪಾಯಿ ಕೂಲಿ ಸಿಗುತ್ತಿತ್ತು. ಇದಲ್ಲದೆ ಹೆಚ್ಚುವರಿ ಹಣ ಸಂಪಾದಿಸಲು ಕಟ್ಟಡ ನಿರ್ಮಾಣದ ಸ್ಥಳಗಳಲ್ಲೂ ಅವರು ಕೂಲಿ ಕೆಲಸ ಮಾಡಿದ್ದಾರೆ.

ತಮ್ಮ 12ನೇ ವಯಸ್ಸಿನಲ್ಲಿ ಊರಿನ ಜಾತ್ರೆಯೊಂದರಲ್ಲಿ ಕ್ರೀಡಾ ಶಿಕ್ಷಕರೊಬ್ಬರ ಕಣ್ಣಿಗೆ ಬಿದ್ದ ಈ ಬಾಲಕನಿಗೆ, ನಂತರ ಖುಮನ್ ಲಂಪಕ್ ಕ್ರೀಡಾಂಗಣದಲ್ಲಿರುವ ಸಾಯ್ (SAI) ಅಕಾಡೆಮಿಯಲ್ಲಿ ವೇಟ್‌ಲಿಫ್ಟಿಂಗ್ ತರಬೇತಿ ಪಡೆಯುವ ಅವಕಾಶ ಸಿಕ್ಕಿತು. ಕಷ್ಟಪಟ್ಟು ತರಬೇತಿ ಪಡೆದ ಅವರು, 2019ರ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತೀಯ ನೌಕಾಪಡೆಯಲ್ಲಿ (Indian Navy) ಉದ್ಯೋಗ ಗಿಟ್ಟಿಸಿಕೊಂಡರು. ನೌಕಾಪಡೆಯ ಕೆಲಸವು ಅವರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸಿತು.

ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಮಣಿಪುರಕ್ಕೆ ಪದಕ ತಂದುಕೊಟ್ಟ ಮೊದಲ ಪುರುಷ ವೇಟ್‌ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ರಿಶಿಕಾಂತ್, ತಮ್ಮ ಈ ಐತಿಹಾಸಿಕ ಬೆಳ್ಳಿ ಪದಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶಕ್ಕೆ ಅರ್ಪಿಸಿದ್ದಾರೆ. “ನನ್ನ ಗೆಲುವಿನ ಸುದ್ದಿಯನ್ನು ನಾನು ಕೆಲಸ ಮಾಡುತ್ತಿದ್ದ ಡಾಬಾದ ಮಾಲೀಕರಿಗೆ ತಿಳಿಸಬೇಕು. ತಮ್ಮ ಡಾಬಾದಲ್ಲಿ ಪಾತ್ರೆ ತೊಳೆಯುತ್ತಿದ್ದ ಹುಡುಗ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದಾನೆ ಎಂದು ಅವರು ತಮ್ಮ ಗ್ರಾಹಕರಿಗೆ ಹೆಮ್ಮೆಯಿಂದ ಹೇಳಿಕೊಳ್ಳಬೇಕು” ಎಂದು ರಿಶಿಕಾಂತ್ ಭಾವುಕರಾಗಿ ನುಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಜಯಭೇರಿ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ...

ಯುಪಿ ಚುನಾವಣೆ | ಮತದಾರರ ಮನಗೆಲ್ಲಲು ಯೋಗಿ ಸಂಪುಟದ ಮೆಗಾ ಪ್ಲ್ಯಾನ್; ಹಸು ಖರೀದಿಗೆ ಸಬ್ಸಿಡಿ, ಉಚಿತ ಕೋಳಿ ಮರಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ (2027ರ ಫೆಬ್ರವರಿ–ಮಾರ್ಚ್‌ನಲ್ಲಿ ನಡೆಯುವ ನಿರೀಕ್ಷೆಯಿದೆ)...

ಬ್ರೆಜಿಲ್‌ ಚುನಾವಣೆ | ಸೋಲುಂಡ ಬೆನ್ನಲ್ಲೇ‌ ಪ್ಲೇವಿಯೋ ಬೊಲ್ಸೊನಾರೊ ಅಮೆರಿಕಗೆ ಪಲಾಯನ!

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೊಲ್ಸೊನಾರೊ ಅವರ ಪುತ್ರ, ಹಾಲಿ ಸೆನೆಟರ್...

ಕಲಬುರಗಿ | ಎಸ್ಐಆರ್ ಅಂತಿಮ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 18,94,144 ಮತದಾರರು:

ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಚುನಾವಣಾ ಆಯೋಗದ...