ಪತ್ನಿ, ಮಗಳಿಗೆ ತಿಂಗಳಿಗೆ 4 ಲಕ್ಷ ರೂ. ಜೀವನಾಂಶ ನೀಡಲು ಮೊಹಮ್ಮದ್ ಶಮಿಗೆ ಕೋರ್ಟ್​ ಆದೇಶ

Date:

ಟೀಮ್ ಇಂಡಿಯಾ ಕ್ರಿಕೆಟ್‌ ವೇಗಿ ಮೊಹಮ್ಮದ್ ಶಮಿ ತನ್ನ ಪತ್ನಿ ಹಸಿನ್ ಜಹಾನ್ ಮತ್ತು ಮಗಳು ಐರಾಗೆ ತಿಂಗಳಿಗೆ 4 ಲಕ್ಷ ರೂಪಾಯಿ ಜೀವನಾಂಶ ನೀಡಬೇಕೆಂದು ಕೊಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.

- Advertisement -

ಮೊಹಮ್ಮದ್ ಶಮಿ 2014 ರಲ್ಲಿ ಹಸಿನ್ ಜಹಾನ್ ಅವರನ್ನು ವಿವಾಹವಾಗಿದ್ದರು. 2015 ರಲ್ಲಿ ಈ ದಂಪತಿಗೆ ಮಗಳು ಜನಿಸಿದ್ದರು. ಆದರೆ 2018 ರಲ್ಲಿ ಶಮಿ ವಿರುದ್ಧ ಕೌಟುಂಬಿಕ ಹಿಂಸೆ, ವರದಕ್ಷಿಣೆ ಕಿರುಕುಳ ಮತ್ತು ಮ್ಯಾಚ್ ಫಿಕ್ಸಿಂಗ್‌ನಂತಹ ಗಂಭೀರ ಆರೋಪಗಳನ್ನು ಮಾಡುವ ಮೂಲಕ ಹಸಿನ್ ಜಹಾನ್ ಸುದ್ದಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಅಷ್ಟೇ ಅಲ್ಲದೆ ಶಮಿ ಮತ್ತು ಅವರ ಕುಟುಂಬದ ವಿರುದ್ಧ ಹಸಿನ್ ಕೋಲ್ಕತ್ತಾದ ಜಾದವ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ವೇಳೆ ಮಾಸಿಕ 10 ಲಕ್ಷ ರೂ. ಜೀವನಾಂಶವನ್ನು ಸಹ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನು ಓದಿದ್ದೀರಾ? ಮದುವೆಯಾಗುವುದಾಗಿ ನಂಬಿಸಿ ಮೋಸ; ಸ್ಟಾರ್‌ ಬೌಲರ್ ಯಶ್ ದಯಾಳ್ ವಿರುದ್ಧ ಯುವತಿ ದೂರು

ಇದೀಗ ಈ ಪ್ರಕರಣದ ತೀರ್ಪು ಬಂದಿದ್ದು, ತನ್ನಿಂದ ದೂರವಾಗಿರುವ ಪತ್ನಿ ಹಸಿನ್ ಜಹಾನ್ ಮತ್ತು ಅವರ ಮಗಳಿಗೆ ತಿಂಗಳಿಗೆ 4 ಲಕ್ಷ ರೂಪಾಯಿ ಜೀವನಾಂಶ ನೀಡುವಂತೆ ಕೊಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಈ ಮೊತ್ತವು ಕಳೆದ ಏಳು ವರ್ಷಗಳವರೆಗೆ ಅನ್ವಯವಾಗುತ್ತದೆ. ಅಂದರೆ ಶಮಿ ಈ ಅವಧಿಗೆ ಬಾಕಿ ಹಣವನ್ನು ಸಹ ಪಾವತಿಸಬೇಕಾಗುತ್ತದೆ. ಅಂದರೆ ಅವರು ಹಸಿನ್ ಜಹಾನ್‌ಗೆ 3 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.

ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಅಜಯ್ ಕುಮಾರ್ ಮುಖರ್ಜಿ ಅವರ ಪೀಠವು ಜುಲೈ 1, 2025 ರಂದು ಈ ತೀರ್ಪು ನೀಡಿದ್ದು. ಶಮಿ ತನ್ನ ಪತ್ನಿ ಹಸಿನ್ ಜಹಾನ್‌ಗೆ ಪ್ರತಿ ತಿಂಗಳು 1.5 ಲಕ್ಷ ರೂ. ಮತ್ತು ಮಗಳು ಐರಾಗೆ 2.5 ಲಕ್ಷ ರೂ. ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...